More

    ಕರ್ನಾಟಕ ವಿಭಿನ್ನ ಸಂಪ್ರದಾಯ ಹೊಂದಿದ ರಾಜ್ಯ


    ಯಾದಗಿರಿ: ಕರ್ನಾಟಕ ವಿವಿಧತೆಯಲ್ಲಿ ಏಕತೆ ಹೊಂದಿರುವ ವಿಭಿನ್ನ ಸಂಸ್ಕೃತಿ, ಸಂಪ್ರದಾಯ ಒಳಗೊಂಡಿರುವ ರಾಜ್ಯವಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕಿ ಉತ್ತರಾದೇವಿ ಮಠಪತಿ ತಿಳಿಸಿದರು.

    ತಾಲೂಕಿನ ಯರಗೋಳ ಗ್ರಾಮದಲ್ಲಿ ಇಲಾಖೆಯ ವಿಶೇಷ ಘಟಕ ಯೋಜನೆಯಡಿ ಯೋಜಿಸಿದ್ದ ಜನಪರ ಉತ್ಸವ ಹಾಗೂ ವಿವಿಧ ಸಂಸ್ಕೃತಿಕ ಕಾರ್ಯಕ್ರಮದಲ್ಲಿ ಮಾತನಾಡಿ, ಗ್ರಾಮೀಣ ಭಾಗದ ಕಲಾವಿದರಿಗೆ ವೈವಿಧ್ಯಮಯ ಕಲಾ ಪ್ರಕಾರಗಳನ್ನು ಪ್ರದಶರ್ಿಸಲು ವೇದಿಕೆ ಕಲ್ಪಿಸುವುದು ಕಾರ್ಯಕ್ರಮದ ಮುಖ್ಯ ಉದ್ದೇಶ ಎಂದರು.

    ಗ್ರಾಪಂ ಅಧ್ಯಕ್ಷ ರಾಮಲಿಂಗಪ್ಪ ಅಲ್ಲಿಪುರ ಕಾರ್ಯಕ್ರಮ ಉದ್ಘಾಟಿಸಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಾನಾ ಕಡೆಯ ಕಲಾವಿದರಿಗೆ ಒಂದುಗೂಡಿಸಿ ವಿವಿಧ ಕಾರ್ಯಕ್ರಮ ನೀಡಿ ಪ್ರೋತ್ಸಾಹಿಸುತ್ತಿದ್ದು ಹಾಗೂ ಮರೆಯಾಗುತ್ತಿರುವ ಜನಪದ ಕಲೆ ಮುಂದಿನ ಪೀಳಿಗೆಯವರಿಗೆ ಪರಿಚಯವಾಗಲಿ ಎಂಬ ಆಶಯವನ್ನು ಹೊಂದಿದೆ. ನಮ್ಮ ಗ್ರಾಮದಲ್ಲಿ ಇಂಥ ಯಾವುದೇ ಸಕರ್ಾರಿ ಸಾಂಸ್ಕೃತಿ ಕಾರ್ಯಕ್ರಮಗಳು ನಡೆದಿರಲಿಲ್ಲ. ಈ ವರ್ಷ ಅದ್ದೂರಿಯಾಗಿ ಆಯೋಜಿಸಿದ್ದು ಸಂತಸ ಮೂಡಿಸಿದೆ ಎಂದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts