More

    ಕಲಬುರಗಿಯಲ್ಲಿ ಸಂಕಲ್ಪ ಸಮಾವೇಶ 18 ರಂದು

    ಕಲಬುರಗಿ: ಕಾಂಗ್ರೆಸ್ ಕಾರ್ಯಕರ್ತರಿಗೆ ಇನ್ನಷ್ಟು ಶಕ್ತಿ ತುಂಬಲು ನಿರ್ಧರಿಸಿದ ಕಾಂಗ್ರೆಸ್ ಪಕ್ಷ ಅದಕ್ಕಾಗಿ 18ರಂದು ಕಲಬುರಗಿಯಲ್ಲಿ ವಿಭಾಗ ಮಟ್ಟದ ಸಂಕಲ್ಪ ಸಮಾವೇಶ ಹಮ್ಮಿಕೊಂಡಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ತಿಳಿಸಿದರು.
    ವರ್ಷದಿಂದ ಭ್ರಷ್ಟ್ರ ಬಿಜೆಪಿ ಸರ್ಕಾರದ ವಿರುದ್ದ ಕಾಂಗ್ರೆಸ್ ಪಕ್ಷ ಹೋರಾಟ ನಡೆಸಿಕೊಂಡು ಬಂದಿದೆ. ಮುಂದಿನ ಚುನಾವಣೆಗಳಿಗೆ ಕಾರ್ಯಕರ್ತರನ್ನು ಸಜ್ಜುಗೊಳಿಸಲು, ಗ್ರಾಪಂ ಚುನಾವಣೆಯಲ್ಲಿ ವಿಜೇತಗೊಂಡಿರುವ ಕಾಂಗ್ರೆಸ್ ಬೆಂಬಲಿತ ಸದಸ್ಯರನ್ನು ಅಭಿನಂದಿಸಲು ಮತ್ತು ಸರ್ಕಾರದ ವಿರುದ್ಧ ನಿರಂತರ ಹೋರಾಟ ರೂಪಿಸುವ ಉದ್ದೇಶವನ್ನಿಟ್ಟುಕೊಂಡು ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಅವರು ನಗರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
    ಸಂಕಲ್ಪ ಸಮಾವೇಶದಲ್ಲಿ ಕೆಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ, ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ, ಕೇಂದ್ರದ ಮಾಜಿ ಸಚಿವರಾದ ಮಲ್ಲಿಕಾರ್ಜುನ ಖರ್ಗೆ , ಕೆ.ಎಚ್.ಮುನಿಯಪ್ಪ, ಕಾರ್ಯಾಧ್ಯಕ್ಷರಾದ ಸಲೀಂ ಅಹ್ಮದ, ಸತೀಶ ಜಾರಕಿಹೊಳಿ, ಮಾಜಿ ಡಿಸಿಎಂ ಡಾ.ಜಿ.ಪರಮೇಶ್ವರ, ಹಿರಿಯ ನಾಯಕರಾದ ಎಚ್.ಕೆ.ಪಾಟೀಲ್, ಎಂ.ಬಿ.ಪಾಟೀಲ್ ಸೇರಿ ಕಲ್ಯಾಣ ಕರ್ನಾಟಕ ಭಾಗದ ಬೀದರ್, ಯಾದಗಿರಿ, ಕಲಬುರಗಿ, ರಾಯಚೂರು, ಬಳ್ಳಾರಿ, ವಿಜಯನಗರ, ಕೊಪ್ಪಳ ಈ ಏಳು ಜಿಲ್ಲೆಗಳ ಶಾಸಕರು ಸೇರಿ 51 ಪ್ರತಿನಿಧಿಗಳು ಪಾಲ್ಗೊಳ್ಳಲಿದ್ದಾರೆ ಎಂದು ವಿವರಿಸಿದರು.
    ಈ ಕುರಿತು ಎಲ್ಲ ಜಿಲ್ಲೆಗಳಲ್ಲಿ ಪೂರ್ವಭಾವಿ ಸಭೆಗಳನ್ನು ನಡೆಸಲಾಗಿದೆ. ಎಲ್ಲ ಜಿಲ್ಲೆಗಳಿಂದ ಕಾರ್ಯಕರ್ತರು ಆಗಮಿಸಲಿದ್ದಾರೆ. ಈ ಮೂಲಕ ಕಾರ್ಯಕರ್ತರಿಗೆ ಹುರಿದುಂಬಿಸುವ ಮೂಲಕ ಜನ ಹಾಗೂ ರೈತ ವಿರೋಧಿ ಬಿಜೆಪಿ ಸರ್ಕಾರದ ವಿರುದ್ಧ ನಿರಂತರ ಹೋರಾಟಗಳನ್ನು ಕಟ್ಟಲಾಗುವುದು ಎಂದು ಖಂಡ್ರೆ ತಿಳಿಸಿದರು.
    ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್ ಪಕ್ಷದ ಮುಖ್ಯ ಸಚೇತಕ ಡಾ.ಅಜಯಸಿಂಗ್, ಕೆಪಿಸಿಸಿ ವಕ್ತಾರ ಪ್ರಿಯಾಂಕ್ ಖರ್ಗೆ , ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಜಗದೇವ ಗುತ್ತೇದಾರ, ಮಾಜಿ ಶಾಸಕರಾದ ಬಾಬುರಾವ ಚವ್ಹಾಣ, ಅಲ್ಲಂಪ್ರಭು ಪಾಟೀಲ್, ತಿಪ್ಪಣ್ಣಪ್ಪ ಕಮಕನೂರ, ದಕ್ಷಿಣ ಬ್ಲಾಕ್ ಅಧ್ಯಕ್ಷ ನೀಲಕಂಠ ಮೂಲಗೆ, ಮಾಜಿ ಮೇಯರ್ ಶರಣಕುಮಾರ ಮೋದಿ, ಮುಖಂಡರಾದ ವಿಜಯಕುಮಾರ ಜಿ.ಆರ್.,ಸುಭಾಷ ರಾಠೋಡ, ಭೀಮರಾವ ಟಿಟಿ, ಚಂದ್ರಶೇಖರ ಸುಲ್ತಾನಪುರ, ಶರಣು ಭೂಸನೂರ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts