More

    ಕಲಿತ ಶಾಲೆ, ಪಾಲಕರಿಗೆ ಕೀರ್ತಿ ತನ್ನಿ

    ಲಕ್ಷ್ಮೇಶ್ವರ: ಪಟ್ಟಣದ ಸುತ್ತಮುತ್ತಲಿನ ಗ್ರಾಮಗಳಿಂದ ವಿದ್ಯಾರ್ಜನೆಗೆ ಬರುವ ವಿದ್ಯಾರ್ಥಿನಿಯರ ಅನುಕೂಲಕ್ಕಾಗಿ ಸುಮಾರು 3.12 ಕೋಟಿ ರೂ.ಗಳ ವೆಚ್ಚದಲ್ಲಿ ಪರಿಶಿಷ್ಟ ಜಾತಿಯ ಮೆಟ್ರಿಕ್ ನಂತರ ಬಾಲಕಿಯರ ವಿದ್ಯಾರ್ಥಿ ನಿಲಯ ನಿರ್ವಿುಸಲಾಗುತ್ತಿದೆ. ವಿದ್ಯಾರ್ಥಿನಿಯರು ನೂತನ ಕಟ್ಟಡದಲ್ಲಿದ್ದು ಅಧ್ಯಯನ ಮಾಡಿ ಕಲಿತ ಶಾಲೆಗೆ ಕೀರ್ತಿ ತರಬೇಕು ಎಂದು ಶಾಸಕ ರಾಮಣ್ಣ ಲಮಾಣಿ ಹೇಳಿದರು.

    ಪಟ್ಟಣದಲ್ಲಿ ಪರಿಶಿಷ್ಟ ಜಾತಿಯ ಮೆಟ್ರಿಕ್ ನಂತರ ಬಾಲಕಿಯರ ವಿದ್ಯಾರ್ಥಿ ನಿಲಯದ ನೂತನ ಕಟ್ಟಡ ನಿರ್ಮಾಣ ಕಾಮಗಾರಿಗೆ ಶುಕ್ರವಾರ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು.

    ಗುಣಮಟ್ಟದ ಕಾಮಗಾರಿ ನಡೆಸುವಂತೆ ಗುತ್ತಿಗೆದಾರರಿಗೆ ಸೂಚಿಸಿದರು. ಕ್ಷೇತ್ರ ವ್ಯಾಪ್ತಿಯಲ್ಲಿ ನೂರಾರು ವಿದ್ಯಾರ್ಥಿಗಳು ವಿದ್ಯಾಭ್ಯಾಸಕ್ಕೆ ಗ್ರಾಮೀಣ ಭಾಗದಿಂದ ಪಟ್ಟಣಕ್ಕೆ ಆಗಮಿಸುತ್ತಾರೆ. ಅದರಲ್ಲಿ ಪ.ಜಾ. ವಿದ್ಯಾರ್ಥಿನಿಯರಿಗೆ ಹಾಸ್ಟೆಲ್ ಸೌಲಭ್ಯದ ಕೊರತೆಯಿತ್ತು. ಅದನ್ನು ನೀಗಿಸಲು ಸೂಕ್ತ ಜಾಗ ಗುರುತಿಸಿ ಸುಸಜ್ಜಿತ ಹಾಸ್ಟೆಲ್ ನಿರ್ವಿುಸಲು ಸರ್ಕಾರದಿಂದ ಅನುದಾನ ಬಿಡುಗಡೆಗೊಳಿಸಿ ಕಟ್ಟಡ ನಿರ್ಮಾಣ ಕಾರ್ಯಕ್ಕೆ ಭೂಮಿಪೂಜೆ ಮಾಡಿದ್ದೇನೆ. ಅದರಂತೆ ಮುಂದಿನ ದಿನಗಳಲ್ಲಿ ಬಾಲಕರ ವಸತಿ ನಿಲಯಕ್ಕೆ ಸ್ವಂತ ಕಟ್ಟಡ ನಿರ್ವಿುಸಲು ಅನುದಾನ ಮಂಜೂರಿಯಾಗಿದೆ. ಆದಷ್ಟು ಶೀಘ್ರ ಕಟ್ಟಡ ಕಾಮಗಾರಿ ಪ್ರಾರಂಭಿಸಲಾಗುವುದು ಎಂದು ಹೇಳಿದರು.

    ವಿಧಾನ ಪರಿಷತ್ ಸದಸ್ಯ ಎಸ್.ವಿ. ಸಂಕನೂರ ಮಾತನಾಡಿದರು. ಸಭೆಯಲ್ಲಿ ಚಂಬಣ್ಣ ಬಾಳಿಕಾಯಿ, ಡಾ.ವೈ.ಎಫ್. ಹಂಜಿ, ಬಿಜೆಪಿ ಮಂಡಳ ಅಧ್ಯಕ್ಷ ಫಕೀರೇಶ ರಟ್ಟಿಹಳ್ಳಿ, ಎಪಿಎಂಸಿ ಅಧ್ಯಕ್ಷ ನೀಲಪ್ಪ ಹತ್ತಿ, ನೀಲಪ್ಪ ಕರ್ಜೆಕಣ್ಣವರ, ನಿಂಗಪ್ಪ ಬನ್ನಿ, ಸುನೀಲ ಮಹಾಂತಶೆಟ್ಟರ್, ತಾಪಂ ಮಾಜಿ ಅಧ್ಯಕ್ಷೆ ಸುಶೀಲವ್ವ ಥಾವರೆಪ್ಪ ಲಮಾಣಿ, ಗಂಗಾಧರ ಮೆಣಸಿನಕಾಯಿ, ಪೂರ್ಣಾಜಿ ಖರಾಟೆ, ಜಯಕ್ಕ ಕಳ್ಳಿ, ಅಶ್ವಿನಿ ಅಂಕಲಕೋಟಿ, ರಾಮು ಗಡದವರ, ಅಶೋಕಯ್ಯ ಮುಳಗುಂದಮಠ, ಪರಶುರಾಮ ಇಮ್ಮಡಿ, ಹುಸೇನಬಿ ಅತ್ತಿಗೇರಿ, ತಾಪಂ ಇಒ ಡಾ.ಎನ್.ಎಚ್. ವಾಲೀಕಾರ, ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಖ್ವಾಜಾಹುಸೇನ್ ಮುಧೋಳ, ಸಹಾಯಕ ನಿರ್ದೇಶಕ ಎಸ್.ಬಿ. ಹರ್ತಿ, ವ್ಯವಸ್ಥಾಪಕ ವಿ.ಎಸ್. ಬೂದಿಹಾಳ, ಹಜರತ್ ಅಲಿ ಅರಳಳ್ಳಿ, ಪುರಸಭೆ ಮುಖ್ಯಾಧಿಕಾರಿ ಆರ್.ಎಂ. ಪಾಟೀಲ, ಚಂದ್ರು ಹಂಪಣ್ಣವರ, ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts