More

    ಕಲೆ, ಸಂಸ್ಕೃತಿ ಉಳಿಯುವುದು ಅಗತ್ಯ

    ಬೆಳಗಾವಿ: ನಶಿಸಿ ಹೋಗುತ್ತಿರುವ ತಳ ಸಮುದಾಯಗಳ ಕಲೆ, ಸಂಸ್ಕೃತಿ ಅಭಿವೃದ್ಧಿಯಾಗಿ ಮುನ್ನೆಲೆಗೆ ಬರಬೇಕು. ನಮ್ಮ ನಾಡಿನ ಕಲೆ ಮತ್ತು ಸಂಸ್ಕೃತಿಯನ್ನು ಎಲ್ಲರೂ ಉಳಿಸಿ, ಬೆಳೆಸಿಕೊಂಡು ಹೋಗಬೇಕು ಎಂದು ಜಿಪಂ ಸಿಇಒ ಹರ್ಷಲ್ ಭೋಯರ್ ತಿಳಿಸಿದರು.

    ನಗರ ಕುಮಾರ ಗಂಧರ್ವ ಕಲಾಮಂದಿರದಲ್ಲಿ ಈಚೆಗೆ ಹಮ್ಮಿಕೊಂಡಿದ್ದ ತರಬೇತಿ ಶಿಬಿರದ ಸಮಾರೋಪ ಉದ್ಘಾಟಿಸಿ ಮಾತನಾಡಿದ ಅವರು, ನಾಡಿನ ಸಂಸ್ಕೃತಿ ಉಳಿಸುವ ಜವಾಬ್ದಾರಿ ಪ್ರತಿಯೊಬ್ಬರ ಮೇಲಿದೆ ಎಂದರು.

    ತರಬೇತಿ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾದ ತಂಡಗಳಿಗೆ ಶುಭ ಕೋರಿದ ಅವರು, ನಾಡಿನ ಸಂಸ್ಕೃತಿಯನ್ನು ರಾಷ್ಟ್ರಮಟ್ಟದಲ್ಲಿ ಪ್ರತಿಬಿಂಬಿಸಬೇಕು ಎಂದರು. ಅಳಿವಿನಂಚಿನಲ್ಲಿರುವ ಕಲಾ ಪ್ರಕಾರಗಳ ಉಳಿವಿಗಾಗಿ ಸರ್ಕಾರ ಉತ್ತಮ ತರಬೇತಿ ನೀಡಿದೆ. ಇದರಿಂದ ಕಲಾವಿದರು ಉತ್ತಮ ಪ್ರದರ್ಶನ ನೀಡಿದ್ದಾರೆ ಎಂದರು.

    ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಉಪ ನಿರ್ದೇಶಕ ಜಿನೇಶ್ವರ ಪಡನಾಡ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಉಪ ನಿರ್ದೇಶಕಿ ವಿದ್ಯಾವತಿ ಭಜಂತ್ರಿ, ಕೆಂಪವ್ವ ಸೊಂಟನವರ, ವಾಸುದೇವ ರಾಠೋಡ, ಶಿವನಪ್ಪ ಚಂದರಗಿ, ಮೈಲಾರಪ್ಪ ಮಾದರ, ಕರೆಪ್ಪ ಜಿನ್ನವಗೋಳ, ಗೂಳಪ್ಪ ವಿಜಯನಗರ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts