More

    ಕಲ್ಪಿತ ಸಂಸತ್‌ನಿಂದ ಕಲಾಪದ ಅನುಭವ

    ರಾಯಬಾಗ, ಬೆಳಗಾವಿ: ಪ್ರತಿ ಕಾಲೇಜಿನಲ್ಲಿ ಕಲ್ಪಿತ ಸಂಸತ್ ಏರ್ಪಡಿಸುವುದರಿಂದ ಸಂಸತನಲ್ಲಿ ನಡೆಯುವ ಕಾರ್ಯಕಲಾಪಗಳ ಅನುಭವ ವಿದ್ಯಾರ್ಥಿಗಳಿಗೆ ದೊರಕುತ್ತದೆ ಎಂದು ಶಾಸಕ ಡಿ.ಎಂ.ಐಹೊಳೆ ಹೇಳಿದರು.

    ಪಟ್ಟಣದ ಬಿ.ಎ.ಚೌಗುಲೆ ಶಿಕ್ಷಣ ಸಂಸ್ಥೆಯಲ್ಲಿ ಸಂಸದೀಯ ವ್ಯವಹಾರಗಳ ಇಲಾಖೆ, ಪದವಿ ಪೂರ್ವ ಶಿಕ್ಷಣ ಇಲಾಖೆ ಚಿಕ್ಕೋಡಿ ಹಾಗೂ ಸತೀಶ ಚೌಗುಲೆ ಸ್ವತಂತ್ರ ಪ.ಪೂ ಕಾಲೇಜು ರಾಯಬಾಗ ಇವರ ಸಂಯುಕ್ತ ಆಶ್ರಯದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಚಿಕ್ಕೋಡಿ ಶೈಕ್ಷಣಿಕ ಜಿಲ್ಲಾ ಮಟ್ಟದ ಯುವ ಸಂಸತ್ ಸ್ಪರ್ಧೆ(ಕಲ್ಪಿತ ಸಂಸತ) ಯನ್ನು ಉದ್ಘಾಟಿಸಿ ಅವರು ಮಾತನಾಡಿದರು.
    ವಿದ್ಯಾರ್ಥಿ ದೆಸೆಯಲ್ಲಿಯೇ ಸಂಸತ್ ಹಾಗೂ ವಿಧಾನಸಭೆಯಲ್ಲಿ ನಡೆಯುವ ಪ್ರತಿಯೊಂದು ಚಟುವಟಿಕೆಗಳ ಬಗ್ಗೆ ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸುವಂತಹ ಕಾರ್ಯಕ್ರಮಗಳು ಹೆಚ್ಚಿನ ಸಂಖ್ಯೆಯಲ್ಲಿ ಹಮ್ಮಿಕೊಳ್ಳುವುದು ಅವಶ್ಯಕ ಎಂದರು.

    ಚಿಕ್ಕೋಡಿ ಪ.ಪೂ ಶಿಕ್ಷಣ ಇಲಾಖೆ ಉಪನಿರ್ದೇಶಕ ಪಿ.ವೈ. ಭಂಡಾರೆ ಮಾತನಾಡಿ, ಸಮಾಜದಲ್ಲಿ ಬದಲಾವಣೆ ತರಲು ಸಂಸತ್ ಅವಶ್ಯಕತೆ ಇದೆ. ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮಾಡುವ ಸಮಯದಲ್ಲಿ ಸಂಸತ್‌ನಲ್ಲಿ ನಡೆಯುವ ಪ್ರತಿಯೊಂದು ವ್ಯವಹಾರಗಳ ಬಗ್ಗೆ ತಿಳಿದುಕೊಳ್ಳುವುದು ಸೂಕ್ತವಾಗಿದೆ. ವಿದ್ಯಾರ್ಥಿ ಜೀವನದಲ್ಲಿ ನಾಯಕತ್ವದ ಗುಣ ಬೆಳೆಸಿಕೊಳ್ಳಲು ಈ ಕಾರ್ಯಕ್ರಮ ಸಹಕಾರಿಯಾಗಲಿದೆ ಎಂದರು. 8 ತಾಲೂಕುಗಳ ವಿವಿಧ ಕಾಲೇಜು ವಿದ್ಯಾರ್ಥಿಗಳು ಕಲ್ಪಿತ ಸಂಸತ್ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು. ಬಿ.ಎ.ಚೌಗುಲೆ ಸಂಸ್ಥೆ ಅಧ್ಯಕ್ಷ ಎಲ್.ಬಿ. ಚೌಗುಲೆ ಅಧ್ಯಕ್ಷತೆ ವಹಿಸಿದ್ದರು. ಕಾರ್ಯದರ್ಶಿ ವಿನಯ ಚೌಗುಲೆ, ಪ್ರಾಚಾರ್ಯ ಎಸ್.ಎ.ನಾಂದಣಿ, ಬಿ.ಜಿ.ದೇವಡಿ, ಎಂ.ಬಿ.ಜಾಧವ, ಎನ್.ಎಸ್.ಕುರುಬರ, ಆನಂದ ಕೋಳಿ, ಅಪ್ಪು ಗೋರಕನಾಥ, ಎಸ್.ಎಸ್.ದಿಗ್ಗೇವಾಡಿ, ಅಣ್ಣಾಸಾಹೇಬ ಖೆಮಲಾಪೂರೆ, ಸದಾಶಿವ ಘೋರ್ಪಡೆ, ಆರ್.ವೈ.ಯಮಗರ, ಅಥಣಿ, ಚಿಕ್ಕೋಡಿ, ಹುಕ್ಕೇರಿ, ಕಾಗವಾಡ, ನಿಪ್ಪಾಣಿ, ಮೂಡಲಗಿ, ಗೋಕಾಕ ಮತ್ತು ರಾಯಬಾಗ ಕಾಲೇಜುಗಳ ಪ್ರಾಚಾರ್ಯರು, ಉಪನ್ಯಾಸಕರು ಮತ್ತು ವಿದ್ಯಾರ್ಥಿಗಳು ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts