More

    ಕಲ್ಯಾಣದಲ್ಲಿ ಸಾಹಿತ್ಯಿಕ ವಾತಾವರಣ ನಿರ್ಮಾಣ ಆಗಲಿ

    ಸೇಡಂ: ಕಲ್ಯಾಣ ಕರ್ನಾಟಕ ಭಾಗದಲ್ಲಿ ಸಾಹಿತ್ಯಿಕ, ಸಾಂಸ್ಕೃತಿಕ ವಾತವರಣ ನಿರ್ಮಿಸಬೇಕಿದೆ. ಈ ನಿಟ್ಟಿನಲ್ಲಿ ಪ್ರತಿ ವರ್ಷ ಈ ಭಾಗದ ಲೇಖಕರ ಗ್ರಂಥಗಳನ್ನು ಸಂಗ್ರಹಿಸಿ ಅದರಲ್ಲಿ ಮೂರು ಕೃತಿಗಳನ್ನು ಉತ್ತಮ ಕೃತಿಗಳೆಂದು ಆಯ್ಕೆ ಮಾಡಿ, ಪ್ರೋತ್ಸಾಹಿಸಬೇಕು ಎಂದು ನೃಪತುಂಗ ಅಧ್ಯಯನ ಸಂಸ್ಥೆಯ ಸಂರಕ್ಷಕರು ಹಾಗೂ ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ ಕೃಷಿ ಹಾಗೂ ಸಾಂಸ್ಕೃತಿಕ ಸಂಘದ ಅಧ್ಯಕ್ಷ ಡಾ.ಬಸವರಾಜ ಪಾಟೀಲ್ ಸೇಡಂ ತಿಳಿಸಿದರು.
    ಪಟ್ಟಣದ ಶ್ರೀ ಕೊತ್ತಲ ಬಸವೇಶ್ವರ ದೇವಾಲಯದಲ್ಲಿ ಹಮ್ಮಿಕೊಂಡಿದ್ದ ನೃಪತುಂಗ ಅಧ್ಯಯನ ಸಂಸ್ಥೆಯ 38ನೇ ವಾರ್ಷಿಕೋತ್ಸವದಲ್ಲಿ ಅಧ್ಯಕ್ಷತೆ ವಹಿಸಿದ್ದ ಅವರು, ಲೇಖಕ, ಕೃತಿಗಳ ಕುರಿತು ವಿಚಾರ ಸಂಕಿರಣಗಳನ್ನು ಆಯೋಜಿಸಬೇಕು. ಸ್ಥಳೀಯ ದೇವಾಲಯ, ಶಾಸನ, ಕೋಟೆಗಳ ಇತಿಹಾಸದ ಮೇಲೆ ಬೆಳಕು ಚೆಲ್ಲುವ ಹಾಗೂ ಸಂಶೋಧನಾ ಕಾರ್ಯ ಕೈಗೊಳ್ಳಬೇಕು ಎಂದರು.
    ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸಂಶೋಧಕ ಡಿ.ಎನ್.ಅಕ್ಕಿ ಮಾತನಾಡಿ, ಕಲ್ಯಾಣ ಕರ್ನಾಟಕ ಭಾಗದ ಕಲೆ, ವಾಸ್ತುಶಿಲ್ಪ, ಸಾಹಿತ್ಯದ ಬೆಳವಣಿಗೆಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದರು.
    ಕೊತ್ತಲ ಬಸವೇಶ್ವರ ದೇವಾಲಯದ ಶ್ರೀ ಸದಾಶಿವ ಸ್ವಾಮೀಜಿ ಉದ್ಘಾಟಿಸಿದರು. ನೃಪತುಂಗ ಅಧ್ಯಯನ ಸಂಸ್ಥೆ ಅಧ್ಯಕ್ಷ ಡಾ.ವಾಸುದೇವ ಅಗ್ನಿಹೋತ್ರಿ ಪ್ರಾಸ್ತಾವಿಕ ಮಾತನಾಡಿದರು.
    ನೃಪತುಂಗ ಅಧ್ಯಯನ ಸಂಸ್ಥೆಯ ಕೋಶಾಧ್ಯಕ್ಷ ಸಿದ್ದಪ್ಪ ತಳ್ಳಳ್ಳಿ, ಪ್ರಾಚಾರ್ಯ ಬಿ.ಆರ್. ಅಣ್ಣಾಸಾಗರ, ಪ್ರಮುಖರಾದ ಡಾ. ಎಂ.ಜಿ.ದೇಶಪಾಂಡೆ, ಹಾಸರೆಡ್ಡಿ ಮನ್ನೆ, ಜಗನ್ನಾಥ ತರನಳ್ಳಿ, ಮನೋಹರ ದೊಂತಾ, ಬಸವರಾಜ ಯಲಗಾರ, ಶರಣಯ್ಯಸ್ವಾಮಿ ಬೊಮ್ನಳ್ಳಿ, ವಿಶ್ವನಾಥರೆಡ್ಡಿ ಕುರುಕುಂಟಾ, ಮಹಿಪಾಲರೆಡ್ಡಿ, ಚಂದ್ರಕಲಾ ಬಿದರಿ, ಶೋಭಾದೇವಿ ಚಕ್ಕಿ, ಅನ್ನಪೂರ್ಣ ಭಂಡಾರಕರ್ ಇತರರಿದ್ದರು.
    ಪ್ರಧಾನ ಕಾರ್ಯದರ್ಶಿ ಪ್ರಭಾಕರ ಜೋಶಿ ಸ್ವಾಗತಿಸಿದರು. ಉಪನ್ಯಾಸಕ ಜಗದೀಶ ಕಡಬಗಾಂವ ನಿರೂಪಣೆ ಮಾಡಿದರು. ಡಾ.ಶ್ರೀಶೈಲ ಬಿರಾದಾರ ವಂದಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts