More

    ಕಲ್ಯಾಣ ಕರ್ನಾಟಕದ 115 ಖಾಲಿ ಹುದ್ದೆ ಭರ್ತಿಗೆ ಕ್ರಮ

    ಬೀದರ್: ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆಯಲ್ಲಿ ಸಂವಿಧಾನದ 371(ಜೆ) ಅಡಿ ಕಲ್ಯಾಣ ಕರ್ನಾಟಕ ಪ್ರದೇಶದವರಿಗೆ ಮೀಸಲಿರುವ 32 ಪಶು ವೈದ್ಯ ಪರೀಕ್ಷಕರ ಹಾಗೂ 83 ಪಶು ವೈದ್ಯಕೀಯ ಸಹಾಯಕ ಹುದ್ದೆಗಳಿಗೆ ಅಧಿಸೂಚನೆ ಹೊರಡಿಸಲಾಗುತ್ತಿದೆ ಎಂದು ಪಶು ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವ್ಹಾಣ್ ತಿಳಿಸಿದ್ದಾರೆ.
    ಖಾಲಿ ಹುದ್ದೆಗಳ ಕುರಿತು ಸಿಎಂ ಬಿ.ಎಸ್. ಯಡಿಯೂರಪ್ಪ ಜತೆ ಚರ್ಚಿಸಿದಾಗ, ಶ್ರೀಘ್ರದಲ್ಲಿ ಭರ್ತಿಗೆ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದರು. ಕರೊನಾ ಸಂಕಷ್ಟದ ಸಮಯದಲ್ಲಿ ಉದ್ಯೋಗ ಸೃಷ್ಟಿ ಆಗುತ್ತಿರುವುದು ಮತ್ತಷ್ಟು ಸಂತಸ ತಂದಿದೆ ಎಂದು ಸಚಿವರು ಹೇಳಿದ್ದಾರೆ. ಪಶು ಸಂಗೋಪನೆ ಇಲಾಖೆಯಲ್ಲಿ 371(ಜೆ) ವಿಧಿ ಭಾಗವಾಗಿರುವ ಬ್ಯಾಕ್ಲಾಗ್ ಹುದ್ದೆಗಳು ಹಲವು ವರ್ಷಗಳಿಂದ ನನೆಗುದಿಗೆ ಬಿದ್ದಿದ್ದವು. ಈಗ ಬ್ಯಾಕ್ಲಾಗ್ ಹುದ್ದೆ ತುಂಬಲು ಕ್ರಮ ವಹಿಸಲಾಗಿದ್ದು, ಸದ್ಯದಲ್ಲೇ ಅಧಿಸೂಚನೆ ಹೊರಡಿಸಲಾಗುವುದು. ಮೂಲ ವೃಂದದ ಒಟ್ಟು ಬಲದಲ್ಲಿ 371(ಜೆ) ಅಡಿ ಸ್ಥಳೀಯ ವೃಂದದಲ್ಲಿ ಶೇ.75 ಪ್ರಮಾಣದಲ್ಲಿ ಮೀಸಲಿರಿಸಿದ 32 ಪಶುವೈದ್ಯ ಪರೀಕ್ಷಕರ ಹಾಗೂ 83 ಪಶುವೈದ್ಯ ಸಹಾಯಕ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ತುಂಬಿಕೊಳ್ಳಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ.
    ಮುಂದಿನ ದಿನಗಳಲ್ಲಿ ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮತ್ತು ಉದ್ಯೋಗ ಸೃಷ್ಠಿಗೆ ಹೆಚ್ಚಿನ ಒತ್ತು ನೀಡಲಾಗುವುದು. ಅಗತ್ಯ ಕ್ರಮ ಕೈಗೊಳ್ಳಲು ರಾಜ್ಯ ಸರ್ಕಾರ ಬದ್ಧವಾಗಿದೆ ಎಂದು ಸಚಿವ ಚವ್ಹಾಣ್ ತಿಳಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts