More

    ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿಗೆ ಪ್ರತ್ಯೇಕ ಇಂಜಿನಿಯರಿಂಗ್ ವಿಭಾಗ

    ಚಿತ್ರದುರ್ಗ: ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ ಅಭಿವೃದ್ಧಿ ಕಾಮಗಾರಿಗಳ ತ್ವರಿತ ಅನುಷ್ಠಾನಕ್ಕಾಗಿ ಪ್ರತ್ಯೇಕ ಇಂಜಿನಿಯರಿಂಗ್ ವಿಭಾಗ ಆರಂಭಿಸುವ ಚಿಂತನೆ ಇದೆ ಎಂದು ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಸಚಿವ ಡಿ.ಸುಧಾಕರ್ ಹೇಳಿದರು.
    ಬೆಳಗಾವಿ ಅಧಿವೇಶನದಲ್ಲಿ ಬುಧವಾರ, ವಿಧಾನ ಪರಿಷತ್ ಸದಸ್ಯ ಡಾ.ತಳವಾರ್ ಸಾಬಣ್ಣ ಅವರ ಗಮನ ಸೆಳೆಯುವ ಸೂಚನೆಗೆ ಪ್ರತಿಕ್ರಿಯಿಸಿದ ಸಚಿವರು, ಈ ಪ್ರದೇಶಾಭಿವೃದ್ದಿ ಮಂಡಳಿಗೆ ಪ್ರತಿ ವರ್ಷ 5000 ಕೋಟಿ ರೂ.ಅನುದಾನದ ಘೋಷಣೆ ಮಾಡಲಾಗಿದೆ. ಇದಕ್ಕೆ ಕ್ರಿಯಾಯೋಜನೆ ರೂಪಿಸಿ ತ್ವರಿತ ಗತಿಯಲ್ಲಿ ಕಾಮಗಾರಿಗಳ ಅನುಷ್ಠಾನಕ್ಕೆ ಅನುಕೂಲವಾಗುವಂತೆ ಪ್ರತ್ಯೇಕ ಇಂಜಿನಿಯರಿಂಗ್ ವಿಭಾಗವನ್ನು ಪ್ರಾರಂಭಿಸುವ ಚಿಂತನೆ ಇದೆ ಎಂದರು.
    ಮಂಡಳಿಗೆ 2013-14ನೇ ಸಾಲಿನಿಂದ 2022-23ನೇ ಸಾಲಿನವರೆಗೆ 11878.33 ಕೋಟಿ ರೂ.ಅನುದಾನ ನಿಗದಿಯಾಗಿದ್ದು, 102 28.8 ಕೋಟಿ ರೂ.ಅನುದಾನ ಬಿಡುಗಡೆಯಾಗಿದೆ, 8333.37 ಕೋಟಿ ರೂ.ಅನುದಾನ ವೆಚ್ಚ ವಾಗಿದೆ. 29,246 ಕಾಮಗಾರಿಗಳಿಗೆ ಅನುಮೋದನೆ ನೀಡಿದ್ದು, 24,996 ಕಾಮಗಾರಿಗಳು ಪೂರ್ಣಗೊಂಡಿವೆ.
    3186 ಕಾಮಗಾರಿಗಳು ಪ್ರಗತಿಯಲ್ಲಿದ್ದು, 1064 ಕಾಮ ಗಾರಿಗಳನ್ನು ಪ್ರಾರಂಭಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. 2023-24ನೇ ಸಾಲಿಗೆ ಮಂಡಳಿ ಕ್ರಿಯಾ ಯೋಜನೆಗೆ ರಾಜ್ಯಪಾಲರು ಅನು ಮೋದನೆ ನೀಡಿದ್ದಾರೆ ಎಂದರು.


    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts