More

    ಕಲ್ಯಾಣ ನಾಡಲ್ಲಿ ಕೈ ರಣಕಹಳೆ

    ಕಲಬುರಗಿ: ಭಾವೈಕ್ಯದ ನೆಲ, ತೊಗರಿ ನಾಡು ಕಲಬುರಗಿಯಲ್ಲಿ ಕಲ್ಯಾಣ ಕ್ರಾಂತಿ ಸಮಾವೇಶ ಮೂಲಕ ಕಾಂಗ್ರೆಸ್ ನಾಯಕರು ಸಂಘಟಿತರಾಗಿ ಶಕ್ತಿ ಪ್ರದರ್ಶಿಸುವ ಮೂಲಕ ಭ್ರಷ್ಟ ಬಿಜೆಪಿ ಸರ್ಕಾರವನ್ನು ಕಿತ್ತೆಸೆದು ಕರ್ನಾಟಕದಲ್ಲಿ ಮರಳಿ ಪಕ್ಷವನ್ನು ಅಧಿಕಾರಕ್ಕೆ ತರುವ ಸಂಕಲ್ಪ ತೊಟ್ಟರು.
    ಎಐಸಿಸಿ ಅಧ್ಯಕ್ಷರಾದ ನಂತರ ಮೊದಲ ಸಲ ಶನಿವಾರ ನಗರಕ್ಕೆ ಆಗಮಿಸಿದ ಮಲ್ಲಿಕಾರ್ಜುನ ಖರ್ಗೆ ಅವರನ್ನು ಅದ್ದೂರಿ ಸ್ವಾಗತ ಕೋರಿದ ಬಳಿಕ ನೂತನ ವಿದ್ಯಾಲಯ ಮೈದಾನದಲ್ಲಿ ಆಯೋಜಿಸಿದ್ದ ಅಭಿನಂದನಾ ಸಮಾರಂಭ ಮತ್ತು ಕಲ್ಯಾಣ ಕ್ರಾಂತಿ ಸಮಾವೇಶದಲ್ಲಿ ಒಗ್ಗಟ್ಟಿನ ಮಂತ್ರ ಪಠಿಸಿದ ನಾಯಕರು, ಭ್ರಷ್ಟ ಬಿಜೆಪಿ ವಿರುದ್ಧ ಸಂಘಟಿತ ಹೋರಾಟ ಮಾಡಿ ಶೇ.೪೦ ಕಮಿಷನ್ ಸರ್ಕಾರವನ್ನು ಕಿತ್ತೆಸೆಯಲು ಸೇರಿದ್ದ ಲಕ್ಷಾಂತರ ಕಾರ್ಯಕರ್ತರಿಗೆ ಕರೆ ನೀಡಿದರು.
    ಕಲ್ಯಾಣ ಕರ್ನಾಟಕದ ಏಳು ಜಿಲ್ಲೆ ಕಾಂಗ್ರೆಸ್ ಮತ್ತು ಕೆಪಿಸಿಸಿ ವತಿಯಿಂದ ಸನ್ಮಾನ ಸ್ವೀಕರಿಸಿ ಕಲ್ಯಾಣ ಕ್ರಾಂತಿ ಸಮಾವೇಶ ಉದ್ಘಾಟಿಸಿದ ಮಲ್ಲಿಕಾರ್ಜುನ ಖರ್ಗೆ ಮಾತನಾಡಿ, ನಾನು ಎಐಸಿಸಿ ಅಧ್ಯಕ್ಷ ಸ್ಥಾನ ಬಯಸಿರಲಿಲ್ಲ. ವರಿಷ್ಠರ ಆದೇಶದಂತೆ ಹೊಣೆ ಹೊತ್ತಿದ್ದೇನೆ. ೨೦೦೮ರ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ನಾಯಕಿ ಸೋನಿಯಾ ಗಾಂಧಿ ಸೂಚಿಸಿದಾಗ, ಮೊದಲು ಪ್ರಸ್ತಾಪಿಸಿದ್ದೆ ಈ ಭಾಗಕ್ಕೆ ೩೭೧(ಜೆ) ಜಾರಿ ವಿಷಯ. ಕಲಬುರಗಿಗೆ ಬಂದಿದ್ದ ಅವರು ಮತದಾರರು ಖರ್ಗೆ ಅವರನ್ನು ಗೆಲ್ಲಿಸಿದರೆ ೩೭೧(ಜೆ) ಜಾರಿ ಮಾಡುವುದಾಗಿ ಹೇಳಿದ್ದರು. ಅದಂತೆ ನಾವೆಲ್ಲರೂ ಸೇರಿ ಮಾಡಿದೆವು. ಆದರೆ ನಂತರ ಬಂದ ಬಿಜೆಪಿ ಸರ್ಕಾರ ಸರಿಯಾಗಿ ಅನುದಾನ ನೀಡಲಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts