More

    ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧೆ:ದಿವಾಕರ್ ಗೌಡ

    ಹಾಸನ: ಅರಕಲಗೂಡು ಕ್ಷೇತ್ರದಿಂದ ಬಿಜೆಪಿ ಟಿಕೆಟ್ ಕೈ ತಪ್ಪಿದ ಹಿನ್ನೆಲೆಯಲ್ಲಿ ಕಾರ್ಯಕರ್ತರ ಒತ್ತಾಯದ ಮೇರೆಗೆ ಈ ಬಾರಿಯ ಚುನಾವಣೆಯಲ್ಲಿ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಲಿದ್ದೇನೆ ಎಂದು ಬಿಜೆಪಿ ಟಿಕೆಟ್ ವಂಚಿತ ದಿವಾಕರ್ ಗೌಡ ಹೇಳಿದರು
    ಕಳೆದ ಅನೇಕ ವರ್ಷಗಳಿಂದ ಅರಕಲಗೂಡು ಕ್ಷೇತ್ರದಲ್ಲಿ ಅನೇಕ ಜನಪರ ಕೆಲಸಗಳನ್ನು ಮಾಡಿಕೊಂಡು ಬಂದಿದ್ದು, ನನ್ನ ಸೇವೆಯನ್ನು ಪರಿಗಣಿಸದೇ ಬಿಜೆಪಿ ಅಭ್ಯರ್ಥಿಯಾಗಿ ಯೋಗಾ ರಮೇಶ್ ಆಯ್ಕೆ ಮಾಡಿದೆ. ಅವರು ನಮ್ಮನ್ನು ಸರಿಯಾಗಿ ನಡೆಸಿಕೊಳ್ಳುತ್ತಿಲ್ಲ. ಅಲ್ಲದೆ ತಾಲೂಕು ಬಿಜೆಪಿ ಅಧ್ಯಕ್ಷರು ಕೂಡ ನಮ್ಮ ಬಗ್ಗೆ ನಿರ್ಲಕ್ಷ್ಯ ದೋರಣೆ ಅನುಸರಿಸುತ್ತಿದ್ದು, ಅವರ ನಡೆಯಿಂದ ಬೇಸತ್ತು ಈ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.
    ಹಿಂದುಳಿದ ವರ್ಗಕ್ಕೆ ಸೇರಿದ ತಾನು ಸಮುದಾಯದ ಲೆಕ್ಕಾಚಾರ ಹಾಗೂ ಜನಬೆಂಬಲದೊಂದಿಗೆ ಅತೀ ಹೆಚ್ಚಿನ ಮತ ಗಳಿಸಿ ಗೆಲುವು ಸಾಧಿಸುವ ಜತೆಗೆ ಬಿಜೆಪಿ ಅಭ್ಯರ್ಥಿಯನ್ನು ನಾಲ್ಕನೆ ಸ್ಥಾನಕ್ಕೆ ಕೂರಿಸಲಿದ್ದೇವೆ ಎಂದರು.
    ಅಲ್ಲದೆ ಕಳೆದ ಎರಡು ಭಾರಿ ನಡೆದ ಚುನಾವಣೆಯಲ್ಲಿ ಅಭ್ಯರ್ಥಿಯಾಗಿ ಸ್ಪರ್ಧಿಸಿ ಅತೀ ಕಡಿಮೆ ಮತ ಪಡೆದು ಠೇವಣಿ ಕಳೆದುಕೊಂಡಿರುವ ಅಭ್ಯರ್ಥಿಗೆ ಮತ್ತೆ ಟಿಕೆಟ್ ನೀಡಿರುವುದು ಬಿಜೆಪಿ ಹಿನ್ನಡೆಗೆ ಕಾರಣವಾಗಲಿದೆ. ಅಲ್ಲದೆ ಈ ಬಾರಿ ಮತ್ತೆ ಬಿಜೆಪಿ ಅಭ್ಯರ್ಥಿ ಸೋಲು ಅನುಭವಿಸಲಿದ್ದಾರೆ ಎಂದು ಭವಿಷ್ಯ ನುಡಿದರು.
    ಸುದ್ದಿಗೋಷ್ಠಿಯಲ್ಲಿ ಮುಖಂಡರಾದ ಸಂದೀಪ್, ಪುಟ್ಟರಾಜ, ರಂಗಣ್ಣ, ಶಶಿಧರ್ ಇತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts