More

    ಕಳಚೆ ಗ್ರಾಮಸ್ಥರಿಗೆ ಪುನರ್ವಸತಿ ಕಲ್ಪಿಸಿ

    ಯಲ್ಲಾಪುರ: ತಾಲೂಕಿನ ಕಳಚೆಯಲ್ಲಿ ಕಳೆದ ವರ್ಷ ಭೂ ಕುಸಿತದಿಂದ ಹಾನಿಯಾಗಿದ್ದು, ಸೂಕ್ತ ಪರಿಹಾರ, ಗ್ರಾಮಸ್ಥರಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸಬೇಕು ಎಂದು ಆಗ್ರಹಿಸಿ ಕಳಚೆ ಭೂ ಕುಸಿತ ಪುನರ್ವಸತಿ, ಪರಿಹಾರ ಸಮಿತಿಯ ನಿಯೋಗದ ಪ್ರಮುಖರು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮಂಗಳವಾರ ಮನವಿ ಸಲ್ಲಿಸಿದರು. ಸ್ವರ್ಣವಲ್ಲಿ ಶ್ರೀ ಗಂಗಾಧರೇಂದ್ರ ಸರಸ್ವತೀ ಸ್ವಾಮೀಜಿ ಅವರ ಮಾರ್ಗದರ್ಶನದಂತೆ ಬೆಂಗಳೂರಿಗೆ ತೆರಳಿದ ನಿಯೋಗ ಮುಖ್ಯಮಂತ್ರಿಗೆ ಕಳಚೆಯ ಸಂಕಷ್ಟದ ಬಗೆಗೆ ವಿವರಿಸಿತು. ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ, ಕಾರ್ವಿುಕ ಸಚಿವ ಶಿವರಾಮ ಹೆಬ್ಬಾರ ಉಪಸ್ಥಿತರಿದ್ದು, ಕಳಚೆಯ ಜನರ ಸ್ಥಿತಿಗತಿ ಬಗೆಗೆ ಮುಖ್ಯಮಂತ್ರಿಗಳ ಗಮನಕ್ಕೆ ತಂದರು. 2021ರ ಜುಲೈನಲ್ಲಿ ಸುರಿದ ಮಳೆಯಿಂದ ಕಳೆಚೆ ಗ್ರಾಮದಲ್ಲಿ ಭೂ ಕುಸಿತ ಉಂಟಾಗಿ ಮನೆಗಳು, ಕೃಷಿ ಭೂಮಿ ಹಾಗೂ ಆಸ್ತಿಪಾಸ್ತಿಗಳಿಗೆ ಅಪಾರ ಹಾನಿ ಉಂಟಾಗಿದೆ. ಕಳಚೆ ಗ್ರಾಮದ 667 ಕುಟುಂಬಗಳಿಗೆ ಪುನರ್ವಸತಿ ಕಲ್ಪಿಸಲು ಅನುಮತಿ ನೀಡುವಂತೆ ಹಾಗೂ ಪ್ರಕೃತಿ ವಿಕೋಪ ಪರಿಹಾರ ನಿಧಿಯಡಿ ಪುನರ್ವಸತಿ ಕಲ್ಪಿಸಲು ಅನುದಾನ ಮಂಜೂರು ಮಾಡುವಂತೆ ಮನವಿ ಮಾಡಿದರು. ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ ಸಿಎಂ, ಕಳಚೆ ಗ್ರಾಮಸ್ಥರ ಸಮಸ್ಯೆಯ ಬಗ್ಗೆ ಅರಿವಿದೆ. ಪುನರ್ವಸತಿ ಕಲ್ಪಿಸಲು ಕ್ರಮ ವಹಿಸುವೆ. ಕಾಗೇರಿ, ಹೆಬ್ಬಾರ ಅವರ ಉಪಸ್ಥಿತಿಯಲ್ಲಿ ಆರ್ಥಿಕ ಹಾಗೂ ಸಹಕಾರಿ ಇಲಾಖೆಯ ಹಿರಿಯ ಅಧಿಕಾರಿಗಳ ಸಭೆ ನಡೆಸಿ ಸೂಕ್ತ ನಿರ್ಣಯ ಕೈಗೊಳ್ಳುತ್ತೇನೆ ಎಂದರು. ಪುನರ್ವಸತಿ ಪರಿಹಾರ ಸಮಿತಿ ಕಾರ್ಯಾಧ್ಯಕ್ಷ ಗಜಾನನ ಭಟ್ಟ, ಕಾರ್ಯದರ್ಶಿ ಅನಂತ ಹೆಗಡೆ, ಉಮಾಮಹೇಶ್ವರ ಭಾಗ್ವತ, ರಾಮನಾಥ ಹೆಗಡೆ, ವೆಂಕಟ್ರಮಣ ಭಟ್ಟ ಬೆಳ್ಳಿ, ರಾಮಚಂದ್ರ ಭಟ್ಟ, ವಿಶ್ವೇಶ್ವರ ಭಟ್ಟ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts