More

    ಕಳ್ಳಬಟ್ಟಿ ತಯಾರಿಕೆ ತಡೆಗೆ ಮುಂದಾಗಿ

    ಕಾರವಾರ: ಕಳ್ಳಬಟ್ಟಿ ಸಾರಾಯಿ ತಯಾರಿಕೆ ಹಾಗೂ ಮಾರಾಟ ತಡೆಗಟ್ಟಲು ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ. ಹರೀಶ ಕುಮಾರ ಕೆ. ಸೂಚಿಸಿದರು. ಜಿಲ್ಲಾಧಿಕಾರಿ ಕಚೇರಿ ಸಂಭಾಂಗಣದಲ್ಲಿ ಸೋಮವಾರ ಆಯೋಜಿಸಿದ್ದ ಜಿಲ್ಲಾ ಅಬಕಾರಿ ಇಲಾಖೆಯ ಸ್ಥಾಯಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಅಕ್ರಮಗಳ ಕುರಿತು ದೂರು ನೀಡಲು ಜನರಲ್ಲಿ ಅರಿವು ಮೂಡಿಸಬೇಕು, ಗ್ರಾಮಸಭೆಗಳಲ್ಲಿ ಅಬಕಾರಿ ಉಪ ಆಯುಕ್ತರು ಸೇರಿ ಹಿರಿಯ ಅಧಿಕಾರಿಗಳು ಪಾಲ್ಗೊಂಡು ಕಳ್ಳಬಟ್ಟಿಯಿಂದಾಗುವ ದುಷ್ಪರಿಣಾಮಗಳ ಬಗ್ಗೆ ತಿಳಿವಳಿಕೆ ನೀಡಬೇಕು ಎಂದರು. ಅಬಕಾರಿ ಇಲಾಖೆ ಉಪ ಆಯುಕ್ತ ಶಿವನಗೌಡ ಮಾತನಾಡಿ, ರಾಜಸ್ವ ಸಂಗ್ರಹಣೆ ಒಂದೇ ಅಬಕಾರಿ ಇಲಾಖೆಯ ಮುಖ್ಯ ಉದ್ದೇಶವಲ್ಲ. ಸಾರ್ವಜನಿಕರಿಗೆ ಗುಣ್ಣಮಟ್ಟದ ಮದ್ಯ ಒದಗಿಸುವುದು ಹಾಗೂ ಅನಧಿಕೃತ ಮದ್ಯ ಸೇವನೆಯಿಂದಾಗುವ ದುಷ್ಪರಿಣಾಮ ತಡೆಗಟ್ಟುವ ಉದ್ದೇಶ ಹೊಂದಿದೆ ಎಂದರು. ಜಿಲ್ಲೆಯಲ್ಲಿ ಎಲ್ಲ ಕಳ್ಳಬಟ್ಟಿ ಕೇಂದ್ರಗಳನ್ನು ನಿಮೂಲನೆ ಮಾಡಿದ್ದರೂ ಮತ್ತೆ ಹುಟ್ಟಿಕೊಳ್ಳುತ್ತಿವೆ. ಇದರಿಂದ 8 ಸಣ್ಣ ಮತ್ತು 5 ಮಧ್ಯಮ ಕಳ್ಳಬಟ್ಟಿ ಕೇಂದ್ರಗಳನ್ನು ವಿಚಕ್ಷಣೆಯಲ್ಲಿ ಇಡಲಾಗಿದೆ ಎಂದು ಮಾಹಿತಿ ನೀಡಿದರು. ಎಸ್​ಪಿ ಶಿವಪ್ರಕಾಶ ದೇವರಾಜು, ಜಿಪಂ ಸಿಇಒ ಎಂ. ರೋಶನ್, ಉಪವಿಭಾಗಾಧಿಕಾರಿ ಪ್ರಿಯಾಂಗಾ ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts