More

    ಕಸದ ಬಿದ್ದಿದ್ದ ಸ್ಥಳಗಳ ದಿಢೀರ್ ಪರಿಶೀಲನೆ ನಡೆಸಿದ ಲೋಕಯುಕ್ತರು

    ಬೆಂಗಳೂರು: ಮಾಗಡಿ ಮುಖ್ಯರಸ್ತೆಯಲ್ಲಿ ಮತ್ತು ಸುತ್ತ ಮುತ್ತಲಿನ ಪಾದಚಾರಿ ಮಾರ್ಗದಲ್ಲಿ ಎಲ್ಲೆಂದರೆ ಅಲ್ಲಿ ಕಸ ಎಸೆಯಲಾಗಿದ್ದು ಈ ಸಂಬಂಧ ಸ್ವಯಂ ಪ್ರೇರಿತವಾಗಿ ದೂರು ದಾಖಲಿಸಿಕೊಂಡಿರುವ ಲೋಕಾಯುಕ್ತ ಸಂಬಂಧಪಟ್ಟ ಅಧಿಕಾರಿಗಳಿಗೆ ನೋಟಿಸ್ ಜಾರಿಗೊಳಿಸಿದೆ.
    ಬೆಂಗಳೂರು ಉತ್ತರ ತಾಲೂಕಿನ ಕಾಚೋಹಳ್ಳಿ ಗ್ರಾಮ ಪಂಚಾಯಿತಿ ಮತ್ತು ಕಡಬಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಾಗಡಿ ಮುಖ್ಯರಸ್ತೆಯಲ್ಲಿನ ರಸ್ತೆ ಮತ್ತು ುಟ್‌ಪಾತ್ ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ವಿಚೇಚನಾರಹಿತವಾಗಿ ಕಸ ವಿಲೇವಾರಿ ಮಾಡುತ್ತಿರುವ ಬಗ್ಗೆ ಮಾಹಿತಿ ಬಂದ ಹಿನ್ನೆಲೆಯಲ್ಲಿ ಸ್ಥಳಕ್ಕೆ ಖುದ್ದು ಲೋಕಾಯುಕ್ತ ನ್ಯಾ.ಬಿ.ಎಸ್. ಪಾಟೀಲ್ ಭೇಟಿ ನೀಡಿ ದಿಢೀರ್ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ರಸ್ತೆ ಮತ್ತು ುಟ್‌ಪಾತ್‌ಗಳ ಮೇಲೆ ರಾಶಿ ರಾಶಿ ಕಸವನ್ನು ಕಂಡು ಕೆಂಡಾಮಂಡಲರಾದ ಲೋಕಾಯುಕ್ತರು ಸಂಬಂಧಪಟ್ಟ ಅಧಿಕಾರಿಗಳನ್ನು ಸ್ಥಳಕ್ಕೆ ಕರೆಸಿ ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ.
    ಲೋಕಾಯುಕ್ತ ಪೊಲೀಸ್ ತಂಡದೊಂದಿಗೆ ಸ್ಥಳಕ್ಕೆ ಹೋದ ಲೋಕಾಯುಕ್ತರು ವ್ಯಾಪಕವಾಗಿ ತಪಾಸಣೆ ನಡೆಸಿದ್ದಾರೆ. ಈ ವೇಳೆ ರಸ್ತೆ ಮತ್ತು ುಟ್‌ಪಾತ್ ಮೇಲೆ ಕಸ ಬಿದ್ದಿರುವುದು ಮತ್ತು ರಸ್ತೆಯ ಮೇಲೆ ಕೊಳಚೆ ನೀರು ಹರಿಯುತ್ತಿರುವುದು ಕಂಡುಬಂದಿದೆ. ಜತೆಗೆ ಹಲವು ತಿಂಗಳಿನಿಂದ ಈ ಭಾಗದಲ್ಲಿ ಕಸ ವಿಲೇವಾರಿ ಮಾಡದಿರುವುದು ಕಂಡು ಬಂದಿದ್ದು, ಇದನ್ನು ಕಂಡು ಕಂಡು ಗರಂ ಆದ ಲೋಕಾಯುಕ್ತರು ಮುಖ್ಯ ನಿರ್ವಹಣಾಧಿಕಾರಿ, ಜಿಲ್ಲಾ ಪಂಚಾಯಿತ್, ಬೆಂಗಳೂರು ನಗರ ಮತ್ತು ತಾಲೂಕು ಪಂಚಾಯತ್ ಮತ್ತು ಗ್ರಾಮ ಪಂಚಾಯತ್‌ಗೆ ಸಂಬಂಧಿಸಿದ ಅಧಿಕಾರಿಗಳನ್ನು ಸ್ಥಳಕ್ಕೆ ಕರೆಯಿಸಿ ಇಲ್ಲಿನ ಕಸದ ಸಮಸ್ಯೆ ಶಾಶ್ವತವಾಗಿ ಬಗೆಹರಿಸಲು ಸೂಚಿಸಿದ್ದಾರೆ.
    ಲೋಕಾಯುಕ್ತರು ಪರಿಶೀಲನೆ ನಡೆಸಲು ತೆರಳಿದ ಸಂದರ್ಭದಲ್ಲಿ ಪ್ಲಾಸ್ಟಿಕ್ ಕವರ್‌ಗಳಿದ್ದ ಆಹಾರವನ್ನು ಹಸುಗಳು ತಿನ್ನುತ್ತಿರುವುದು ಕಂಡು ಬಂದಿದೆ. ಇದರಿಂದ ಮತ್ತಷ್ಟು ಕೆರಳಿದ ಲೋಕಾಯುಕ್ತರು ಇಷ್ಟೆಲ್ಲಾ ಅವ್ಯವಸ್ಥೆ ಆಗಿದ್ದರೂ ಕೂಡ ಕ್ರಮ ವಹಿಸದೇ ಏನು ಮಾಡುತ್ತಿದ್ದೀರಿ ಎಂದು ಅಧಿಕಾರಿಗಳಿಗೆ ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ.

    ಅಧಿಕಾರಿಗಳಿಗೆ ನೋಟಿಸ್ ಜಾರಿ:
    ಪಂಚಾಯತ್ ರಾಜ್ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ, ಬೆಂಗಳೂರು ನಗರ ಜಿಲ್ಲೆಯ ಮುಖ್ಯ ನಿರ್ವಹಣಾಧಿಕಾರಿ, ತಾಲೂಕು ಪಂಚಾಯಿತಿಯ ಕಾರ್ಯನಿರ್ವಾಹಕ ಅಧಿಕಾರಿ, ಕಾಚೋಹಳ್ಳಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ, ಕಡಬಗೆರೆ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ, ರಾಜ್ಯ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಯ ಹಿರಿಯ ಪರಿಸರ ಅಧಿಕಾರಿಗಳನ್ನು ಈ ಪ್ರಕರಣದಲ್ಲಿ ಪ್ರತಿವಾದಿಗಳನ್ನು ಮಾಡಿ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಜಾರಿಗೊಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts