More

    ಕಸ್ತೂರಿ ಕರ್ನಾಟಕ ಜನಪರ ವೇದಿಕೆಯಿಂದ ಮನವಿ ಸಲ್ಲಿಕೆ

    ಮದ್ದೂರು: ರಾಷ್ಟ್ರೀಕೃತ ಹಾಗೂ ಸಹಕಾರಿ ಬ್ಯಾಂಕ್‌ಗಳ ರೈತ ವಿರೋಧಿ ನೀತಿ ಖಂಡಿಸಿ ಕಸ್ತೂರಿ ಕರ್ನಾಟಕ ಜನಪರ ವೇದಿಕೆ ವತಿಯಿಂದ ಪಟ್ಟಣದ ತಾಲೂಕು ಕಚೇರಿಯಲ್ಲಿ ಅಪರ ಜಿಲ್ಲಾಧಿಕಾರಿ ಡಾ.ಎಚ್.ಎಲ್.ನಾಗರಾಜು ಹಾಗೂ ತಹಸೀಲ್ದಾರ್ ಟಿ.ಎನ್.ನರಸಿಂಹಮೂರ್ತಿ ಅವರಿಗೆ ಬುಧವಾರ ಮನವಿ ಸಲ್ಲಿಸಲಾಯಿತು.

    ವೇದಿಕೆ ಜಿಲ್ಲಾಧ್ಯಕ್ಷ ವಿ.ಸಿ.ಉಮಾಶಂಕರ್ ಮಾತನಾಡಿ, ರಾಷ್ಟ್ರೀಕೃತ ಹಾಗೂ ಸಹಕಾರ ಬ್ಯಾಂಕ್‌ಗಳಲ್ಲಿ ರೈತರು ಬೆಳೆ ಸಾಲ ಪಡೆದಿದ್ದು, ವೃದ್ಧಾಪ್ಯ ವೇತನ, ಸಂಧ್ಯಾ ಸುರಕ್ಷಾ, ವಿಧವಾ ವೇತನ, ಅಂಗವಿಕಲರ ವೇತನ, ಸಾಮಾಜಿಕ ಭದ್ರತೆ ಹಣ ಹಾಗೂ ಪ್ರಧಾನಮಂತ್ರಿ ಮತ್ತು ಮುಖ್ಯಮಂತ್ರಿಗಳ ಪಿಎಂ ಕಿಸಾನ್ ಸಮ್ಮಾನ್ ಯೋಜನೆ ಹಣವನ್ನು ಸಾಲಕ್ಕೆ ಜಮಾ ಮಾಡಿಕೊಳ್ಳುತ್ತಿರುವುದು ಖಂಡನೀಯ ಎಂದು ದೂರಿದರು.

    ಪಹಣಿ ಇರುವಂತಹ ರೈತರಿಗೆ 2000 ರೂ.ಗಳನ್ನು 6 ಕಂತುಗಳಲ್ಲಿ ವಿತರಿಸಲಾಗುತ್ತಿತ್ತು. ಆದರೆ ಬ್ಯಾಂಕ್‌ಗಳು ರೈತರ ಕಣ್ಣಿಗೆ ಮಣ್ಣೆರಚುವ ಕೆಲಸಕ್ಕೆ ಮುಂದಾಗಿವೆ. ಅಲ್ಲದೆ ಬೇರೆ ಬ್ಯಾಂಕ್‌ಗಳಲ್ಲಿ ಸಾಲ ಪಡೆಯಲು ಸಾಲವಿಲ್ಲ ಎಂಬ ಪ್ರಮಾಣ ಪತ್ರ (ಎನ್‌ಡಿಸಿ) ನೀಡಲು ಸಹ 50 ರಿಂದ 200 ರೂ. ಪಡೆಯಲಾಗುತ್ತಿದೆ ಎಂದು ಆರೋಪಿಸಿದರು.

    ಜಿಲ್ಲಾಧಿಕಾರಿಗಳು ಕೂಡಲೇ ಬ್ಯಾಂಕಿನ ವ್ಯವಸ್ಥಾಪಕರ ಸಭೆ ಕರೆದು ವ್ಯವಸ್ಥೆ ಸರಿಪಡಿಸಬೇಕೆಂದು ಎಂದು ಅಪರ ಜಿಲ್ಲಾಧಿಕಾರಿ ಎಚ್.ಎಲ್.ನಾಗರಾಜು ಹಾಗೂ ತಹಸೀಲ್ದಾರ್ ನರಸಿಂಹಮೂರ್ತಿ ಅವರಿಗೆ ಮನವಿ ಸಲ್ಲಿಸಿ ಒತ್ತಾಯಿಸಿದರು.

    ಮನವಿ ಸ್ವೀಕರಿಸಿ ಮಾತನಾಡಿದ ಎಡಿಸಿ ಡಾ.ಎಲ್.ನಾಗರಾಜು, ಲೀಡ್ ಬ್ಯಾಂಕ್ ಸೇರಿದಂತೆ ಎಲ್ಲ ಬ್ಯಾಂಕ್‌ಗಳ ಮುಖ್ಯಸ್ಥರ ಸಭೆ ಕರೆದು ಪರಿಶೀಲಿಸಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು. ಗ್ರೇಡ್-2 ತಹಸೀಲ್ದಾರ್ ಸೋಮಶೇಖರ್, ರಾಜಸ್ವ ನಿರೀಕ್ಷಕ ಜಗದೀಶ್, ಮುಖಂಡರಾದ ಸೊ.ಪ್ರಕಾಶ್, ಶ್ರೀನಿವಾಸ್, ಮ.ನ.ಪ್ರಸನ್ನಕುಮಾರ್ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts