More

    ಕಸ ವಿಲೇವಾರಿ ಘಟಕ ನಿರ್ಮಾಣ ಕಳಪೆ

    ಶಿರಸಿ: ತಾಲೂಕಿನ ಇಸಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನಿರ್ಮಾಣ ಆಗುತ್ತಿರುವ ಕಸ ವಿಲೇವಾರಿ ಘಟಕ ಕಾಮಗಾರಿ ದೋಷಪೂರ್ಣವಾಗಿರುವ ಹಿನ್ನೆಲೆಯಲ್ಲಿ ಅದನ್ನು ಮರು ನಿರ್ವಿುಸುವಂತೆ ಗುತ್ತಿಗೆದಾರರಿಗೆ ಸೂಚಿಸಲಾಗಿದೆ.

    ಮನೆಮನೆಯಿಂದ ಒಣ ಕಸ ಸಂಗ್ರಹಿಸಿ ವಿಲೇವಾರಿ ಮಾಡಲು ಇಸಳೂರು ಪಂಚಾಯಿತಿ ವ್ಯಾಪ್ತಿಯಲ್ಲಿ ಅಂದಾಜು 10 ಲಕ್ಷ ರೂ. ವೆಚ್ಚದಲ್ಲಿ ಹೊಸ ವಿಲೇವಾರಿ ಘಟಕ ಕಾಮಗಾರಿ ಆರಂಭವಾಗಿತ್ತು. ಆದರೆ, ಕಾಮಗಾರಿ ದೋಷಪೂರ್ಣ ಹಾಗೂ ಕಳಪೆ ಮಟ್ಟ ಹೊಂದಿದೆ ಎಂದು ಸಾರ್ವಜನಿಕರ ದೂರು ಬಂದ ಹಿನ್ನೆಲೆಯಲ್ಲಿ ಜಿಲ್ಲಾ ಪಂಚಾಯಿತಿ ಸದಸ್ಯೆ ಉಷಾ ಹೆಗಡೆ, ಜಿಲ್ಲಾ ಪಂಚಾಯಿತಿ ಎಇಇ ರಾಮಚಂದ್ರ ಗಾಂವಕರ ಮಂಗಳವಾರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

    ಪ್ರಸ್ತುತ ಮಾಡಿದ ಕಾಮಗಾರಿ ಅಸಮರ್ಪಕವಾಗಿದ್ದು, ಅದನ್ನು ಮರು ನಿರ್ವಿುಸಬೇಕು. ಜತೆ, ಗುಣಮಟ್ಟಕ್ಕೆ ಆದ್ಯತೆ ನೀಡಬೇಕು ಎಂದು ಸಂಬಂಧಪಟ್ಟ ಗುತ್ತಿಗೆದಾರರಿಗೆ ಎಚ್ಚರಿಸಿದರು. ಇದಾದ ನಂತರ ಯಡಳ್ಳಿ ಪಂಚಾಯಿತಿ ವ್ಯಾಪ್ತಿಯ ಸಹಸ್ರಹಳ್ಳಿಯ ಘಟಕ ಕಾಮಗಾರಿ ವೀಕ್ಷಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts