More

    ಕಾಂಗ್ರೆಸ್‌ನಿಂದ ಹನೂರು ಅಭಿವೃದ್ಧಿ

    ಹನೂರು: ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯಗಳು ನಡೆದಿದೆಯೆಂದರೆ ಅದು ಕಾಂಗ್ರೆಸ್ ಸರ್ಕಾರದಿಂದ ಮಾತ್ರ. ಈ ಬಗ್ಗೆ ಪ್ರತಿಯೊಬ್ಬರೂ ಮನದಟ್ಟು ಮಾಡಿಕೊಳ್ಳಬೇಕು ಎಂದು ಶಾಸಕ ಆರ್.ನರೇಂದ್ರ ತಿಳಿಸಿದರು.

    ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಚಿಕ್ಕಮಾಲಾಪುರ ಗ್ರಾಮದಲ್ಲಿ ಬುಧವಾರ ಕಾರ್ಯಕರ್ತರು ಹಾಗೂ ಮುಖಂಡರೊಂದಿಗೆ ತೆರಳಿ ಮತಯಾಚಿಸಿದ ಬಳಿಕ ಆಯೋಜಿಸಿದ್ದ ಸಭೆಯಲ್ಲಿ ಮಾತನಾಡಿದರು.

    ಸಿದ್ದರಾಮಯ್ಯ ಸರ್ಕಾರದ ಅವಧಿಯಲ್ಲಿ ಕ್ಷೇತ್ರಕ್ಕೆ ಮೂರೂವರೆ ಸಾವಿರ ಕೋಟಿ ರೂ. ಅನುದಾನ ನೀಡಿದ್ದು, ಹಲವು ಅಭಿವೃದ್ಧಿ ಕಾರ್ಯಗಳು ನಡೆದಿದೆ. ಕ್ಷೇತ್ರದ ಅಭಿವೃದ್ಧಿಗೆ ಒತ್ತು ನೀಡಲಾಗಿದೆ. ಮುಖ್ಯವಾಗಿ 132 ಕೋಟಿ ರೂ. ವೆಚ್ಚದಲ್ಲಿ ಕೆರೆಗಳಿಗೆ ನೀರು ತುಂಬಿಸುವ ಯೋಜನೆ, 108 ಕೋಟಿ ರೂ. ವೆಚ್ಚದಲ್ಲಿ ಕೆ-ಶಿಪ್ ಯೋಜನೆಯಡಿ ರಸ್ತೆ ಅಭಿವೃದ್ಧಿ, 128 ಕೋಟಿ ರೂ. ವೆಚ್ಚದಲ್ಲಿ ಮೊದಲ ಹಂತದ ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಅನುಷ್ಠಾನ, 2ನೇ ಹಂತದ ಕಾಮಗಾರಿ ಪ್ರಗತಿಯಲ್ಲಿದೆ. ಇನ್ನು ತಂದೆ ದಿ.ರಾಜುಗೌಡ ಅವರ ಕನಸಿನ ಹನೂರು ತಾಲೂಕು ರಚನೆಯಾಗಿದೆ. 3.5 ಕೋಟಿ ರೂ. ವೆಚ್ಚದಲ್ಲಿ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣ ಸ್ಥಾಪನೆ, 80 ಕೋಟಿ ರೂ. ವೆಚ್ಚದಲ್ಲಿ ಏಕಲವ್ಯ, ಮುರಾರ್ಜಿ, ಇಂದಿರಾಗಾಂಧಿ ಮಾದರಿ ವಸತಿ ಶಾಲೆಗಳ ಸ್ಥಾಪನೆ, ಹಾಸ್ಟೆಲ್‌ಗಳ ಸ್ಥಾಪನೆ ಹಾಗೂ 163 ಸಮುದಾಯ ಭವನಗಳ ನಿರ್ಮಾಣ ಹಾಗೂ ಮ.ಬೆಟ್ಟದಲ್ಲಿ ಪ್ರಾಧಿಕಾರ ರಚನೆಯಾದ ಬಳಿಕ 120 ಕೋಟಿ ರೂ. ವೆಚ್ಚದಲ್ಲಿ ವಿವಿಧ ಅಭಿವೃದ್ಧಿ ಕಾರ್ಯಗಳು ಸೇರಿದಂತೆ ಇನ್ನು ಕ್ಷೇತ್ರದಲ್ಲಿ ಇನ್ನು ಅನೇಕ ಅಭಿವೃದ್ಧಿ ಕಾರ್ಯಗಳು ನಡೆದಿದೆ ಎಂದರು.

    ಬಳಿಕ ದೊಡ್ಡಮಾಲಾಪುರ, ಕಂಡಯ್ಯನಪಾಳ್ಯ, ಲೊಕ್ಕನಹಳ್ಳಿ, ಸೇಬಿನಕೋಬೆ, ಜಡೇಸ್ವಾಮಿ ದೊಡ್ಡಿ, ಬೂದಿಪಡಗ, ಕೌಳಿಹಳ್ಳ, ಬೋರೆದೊಡ್ಡಿ ಹಾಗೂ ಇನ್ನಿತರ ಗ್ರಾಮಗಳಲ್ಲಿ ಮತ ಯಾಚಿಸಲಾಯಿತು.

    ಪಪಂ ಉಪಾಧ್ಯಕ್ಷ ಗಿರೀಶ್, ಸದಸ್ಯರಾದ ಸುದೇಶ್, ಹರೀಶ್‌ಕುಮಾರ್, ಗ್ರಾಪಂ ಸದಸ್ಯ ನಾಗಣ್ಣ, ನಿವೃತ್ತ ಸಬ್‌ಇನ್ಸ್‌ಪೆಕ್ಟರ್ ಸಿದ್ದಲಿಂಗೇಗೌಡ, ಎಂಡಿಸಿಸಿ ಬ್ಯಾಂಕ್ ನಿವೃತ್ತ ವ್ಯವಸ್ಥಾಪಕ ಸೋಮಣ್ಣ, ರಾಜ್ಯ ಯೂತ್ ಕಾಂಗ್ರೆಸ್ ಕಾರ್ಯದರ್ಶಿ ಚೇತನ್ ದೊರೆರಾಜು, ಮುಖಂಡರಾದ ಜಗದೀಶ್, ಸಿದ್ದರಾಜು, ಶಿವಣ್ಣ, ನಾಗೇಂದ್ರ, ಚೆಲುವರಾಜು, ಮಾದೇಶ್, ವೇಲುಸ್ವಾಮಿ, ಚಂದ್ರು, ಕುಮಾರ್, ನಟರಾಜು ಇತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts