More

    ಕಾಂಗ್ರೆಸ್​ನಿಂದ ಆರೋಗ್ಯ ಅಭಯ ಹಸ್ತ

    ಶಿವಮೊಗ್ಗ: ಕರೊನಾ ಹಿನ್ನೆಲೆಯಲ್ಲಿ ರಾಜ್ಯದ ಪ್ರತಿ ಮನೆಗೂ ತೆರಳಿ ಜನರ ಆರೋಗ್ಯ ತಪಾಸಣೆ ಮಾಡಲು ಕಾಂಗ್ರೆಸ್​ನಿಂದ ‘ಆರೋಗ್ಯ ಅಭಯ ಹಸ್ತ’ ಕಾರ್ಯಕ್ರಮದಡಿ ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ಸುಮಾರು 2 ಲಕ್ಷ ರೂ. ವೆಚ್ಚ ಮಾಡಲಾಗುತ್ತಿದೆ ಎಂದು ಅಭಯ ಹಸ್ತ ಕಾರ್ಯಕ್ರಮದ ರಾಜ್ಯಾಧ್ಯಕ್ಷ, ಮಾಜಿ ಸಂಸದ ಆರ್.ಧ್ರುವನಾರಾಯಣ ತಿಳಿಸಿದರು.

    120 ವಿಧಾನಸಭಾ ಕ್ಷೇತ್ರಗಳಲ್ಲಿ ಈಗಾಗಲೇ ಕಾರ್ಯಕ್ರಮ ಅನುಷ್ಠಾನಗೊಂಡಿದೆ. ಇದಕ್ಕಾಗಿ ನಮ್ಮ ಸದಸ್ಯರಿಗೆ ಸೂಕ್ತ ತರಬೇತಿ ನೀಡಲಾಗಿದೆ. ಕೆಪಿಸಿಸಿ ವೈದ್ಯಕೀಯ ಸೆಲ್​ನ 320ಕ್ಕೂ ಹೆಚ್ಚು ವೈದ್ಯರು ಮಾರ್ಗದರ್ಶನ ಮಾಡುತ್ತಿದ್ದಾರೆ ಎಂದು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.

    ಆರೋಗ್ಯ ಅಭಯ ಹಸ್ತಕ್ಕೆ ಅವಶ್ಯವಿರುವ ಆರ್ಥಿಕ ಸಂಪನ್ಮೂಲವನ್ನು ಸ್ಥಳೀಯ ಕಾಂಗ್ರೆಸ್ ಶಾಸಕರು, ಮುಖಂಡರು, ಹಿತೈಷಿಗಳು ಒದಗಿಸುತ್ತಿದ್ದಾರೆ. ಪಲ್ಸ್ ಪೋಲಿಯೋ ಮಾದರಿಯಲ್ಲಿ ಕಾರ್ಯಕ್ರಮ ರೂಪಿಸಿದ್ದು, ಪ್ರತಿಯೊಬ್ಬರನ್ನೂ ಪರೀಕ್ಷೆಗೆ ಒಳಪಡಿಸುವುದು ಪಕ್ಷದ ಉದ್ದೇಶ ಎಂದರು.

    7,800 ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ 15 ಸಾವಿರಕ್ಕೂ ಹೆಚ್ಚು ವೈದ್ಯರು ಹಾಗೂ ತರಬೇತಿ ಪಡೆದ ಕಾಂಗ್ರೆಸ್ ಕರೊನಾ ವಾರಿಯರ್ಸ್​ಗಳು ವಿಶ್ವ ಆರೋಗ್ಯ ಸಂಸ್ಥೆ ಮಾರ್ಗಸೂಚಿ ಪ್ರಕಾರ ಜನರ ಆರೋಗ್ಯ ತಪಾಸಣೆ ನಡೆಸಲಿದ್ದಾರೆ. ಅವರಿಗೆ ಫೇಸ್​ವಾಸ್ಕ್, ಫೇಸ್ ಶೀಲ್ಡ್, ಡಿಜಿಟಲ್ ಥರ್ವಮೀಟರ್, ಆಕ್ಸಿ ಮೀಟರ್​ಗಳನ್ನು ಒದಗಿಸಲಾಗಿದೆ ಎಂದು ತಿಳಿಸಿದರು.

    ವ್ಯಕ್ತಿಯ ದೇಹದ ಉಷ್ಣತೆ, ಆಮ್ಲಜನಕ ಪ್ರಮಾಣ ಸೇರಿ ಪ್ರಾಥಮಿಕ ತಪಾಸಣೆ ನಡೆಸಲಾಗುವುದು. ಕರೊನಾ ಲಕ್ಷಣಗಳು ಕಂಡು ಬಂದರೆ ಆರೋಗ್ಯ ಇಲಾಖೆಗೆ ಮಾಹಿತಿ ನೀಡಲಾಗುವುದು. ಸರ್ಕಾರ ಕರೊನಾ ನಿರ್ವಹಣೆಯಲ್ಲಿ ವಿಫಲವಾಗಿರುವುದರಿಂದ ಕಾಂಗ್ರೆಸ್ ಈ ಕಾರ್ಯಕ್ರಮ ರೂಪಿಸಿದೆ ಎಂದರು.

    ‘ಆರೋಗ್ಯ ಅಭಯ ಹಸ್ತ’ದ ಸಂಚಾಲಕ ಬಿ.ಎನ್.ಚಂದ್ರಪ್ಪ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಎಚ್.ಎಸ್.ಸುಂದರೇಶ್, ವಿಧಾನ ಪರಿಷತ್ ಸದಸ್ಯ ಆರ್.ಪ್ರಸನ್ನಕುಮಾರ್, ಮಾಜಿ ಸಚಿವ ಕಿಮ್ಮನೆ ರತ್ನಾಕರ್, ಪಾಲಿಕೆ ಪ್ರತಿಪಕ್ಷ ನಾಯಕ ಎಚ್.ಸಿ.ಯೋಗೇಶ್, ಜಿಪಂ ಸದಸ್ಯ ಕಲಗೋಡು ರತ್ನಾಕರ ಸುದ್ದಿಗೋಷ್ಠಿಯಲ್ಲಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts