More

    ಕಾಂಗ್ರೆಸ್ ಕಾರ್ಯಕರ್ತರಿಂದ ಪ್ರತಿಭಟನೆ

    ರಾಣೆಬೆನ್ನೂರ: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ ಮನೆ ಮೇಲೆ ಸಿಬಿಐ ಅಧಿಕಾರಿಗಳು ದಾಳಿ ನಡೆಸಿರುವುದನ್ನು ಖಂಡಿಸಿ ತಾಲೂಕು ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಡಿಕೆಶಿ ಅಭಿಮಾನಿ ಬಳಗದ ವತಿಯಿಂದ ಸೋಮವಾರ ನಗರದ ಬಸ್ ನಿಲ್ದಾಣದ ಎದುರು ಪ್ರತಿಭಟನೆ ನಡೆಸಲಾಯಿತು.

    ಕೇಂದ್ರ ಸರ್ಕಾರ ಉದ್ದೇಶಪೂರ್ವಕವಾಗಿ ಡಿಕೆಶಿ ಮನೆ ಮೇಲೆ ದಾಳಿ ನಡೆಸಿದೆ ಎಂದು ಆರೋಪಿಸಿ ಕೇಂದ್ರ ಹಾಗೂ ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಘೊಷಣೆ ಕೂಗಿದರು. ಟೈಯರ್​ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು.

    ಡಿಕೆಶಿ ಅಭಿಮಾನಿ ಬಳಗದ ತಾಲೂಕು ಅಧ್ಯಕ್ಷ ನಿಂಗರಾಜ ಕೋಡಿಹಳ್ಳಿ ಮಾತನಾಡಿ, ಬಿಜೆಪಿಯವರಿಗೆ ಚುನಾವಣೆ ಮೂಲಕ ಪ್ರಾಮಾಣಿಕವಾಗಿ ಗೆಲ್ಲುವ ನಂಬಿಕೆಯಿಲ್ಲ. ಹೀಗಾಗಿ ಕಾಂಗ್ರೆಸ್ ಮುಖಂಡರ ಮನೆ ಮೇಲೆ ಸಿಬಿಐ ಅಧಿಕಾರಿಗಳಿಂದ ದಾಳಿ ನಡೆಸುತ್ತಿದ್ದಾರೆ. ತಮಗೆ ಸಾಧ್ಯವಾಗದಿರುವುದನ್ನು ಅಧಿಕಾರಿಗಳ ಮೂಲಕ ಮಾಡಿಸುತ್ತಿದ್ದಾರೆ ಎಂದು ಆರೋಪಿಸಿದರು.

    ಮುಂಬರುವ ಚುನಾವಣೆಯಲ್ಲಿ ಬಿಜೆಪಿಯವರಿಗೆ ಸೋಲಿನ ಭಯ ಶುರುವಾಗಿದೆ. ಆದ್ದರಿಂದ ಡಿಕೆಶಿಯವರನ್ನು ಈಗಿನಿಂದಲೇ ತುಳಿಯುವ ಪ್ರಯತ್ನ ಮಾಡುತ್ತಿದ್ದಾರೆ. ಈ ಕುರಿತು ರಾಜ್ಯಪಾಲರು ಮಧ್ಯಪ್ರವೇಶಿಸಿ ನ್ಯಾಯ ಒದಗಿಸಿಕೊಡಬೇಕು ಎಂದು ತಹಸೀಲ್ದಾರ್ ಬಸನಗೌಡ ಕೋಟೂರ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.

    ಪ್ರಮುಖರಾದ ಏಕನಾಥ ಭಾನುವಳ್ಳಿ, ರವೀಂದ್ರಗೌಡ ಪಾಟೀಲ, ಶೇರುಖಾನ್ ಖಾಬೂಲಿ, ಚಂದ್ರಣ್ಣ ಬೇಡರ, ಬಸವರಾಜ ಸವಣೂರ, ರಾಮಣ್ಣ ನಾಯಕ, ಕೃಷ್ಣಪ್ಪ ಕಂಬಳಿ, ಮೃತ್ಯುಂಜಯ ಗುದಿಗೇರ, ಬಸವರಾಜ ಹುಚ್ಚಗೊಂಡರ, ಆನಂದ ಹುಲಬನ್ನಿ, ಬೀರಪ್ಪ ಲಮಾಣಿ ಮತ್ತಿತರರು ಪಾಲ್ಗೊಂಡಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts