More

    ಕಾಂಗ್ರೆಸ್ ಕಾರ್ಯಕರ್ತರಿಂದ ವಿಜಯೋತ್ಸವ

    ಕೆ.ಎಂ.ದೊಡ್ಡಿ: ಮಳವಳ್ಳಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ, ಮಾಜಿ ಸಚಿವ ಪಿ.ಎಂ. ನರೇಂದ್ರಸ್ವಾಮಿ ಅಭೂತಪೂರ್ವ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಭಾರತೀ ಕಾಲೇಜು ಗೇಟ್ ಬಳಿ ಭಾನುವಾರ ಪಟಾಕಿ ಸಿಡಿಸಿ ವಿಜಯೋತ್ಸವ ಆಚರಿಸಿದರು.
    ಜಿಪಂ ಮಾಜಿ ಸದಸ್ಯ ಎ.ಎಸ್.ರಾಜೀವ್ ನೇತೃತ್ವದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ನೂತನ ಶಾಸಕ ಪಿ.ಎಂ. ನರೇಂದ್ರಸ್ವಾಮಿ ಅವರಿಗೆ ಬೃಹತ್ ಹಾರ ಹಾಕಿ ಅಭಿನಂದಿಸಿದರು.
    ಅಭಿನಂದನೆ ಸ್ವೀಕರಿಸಿ ಮಾತನಾಡಿದ ಪಿ.ಎಂ.ನರೇಂದ್ರಸ್ವಾಮಿ, ಮಳವಳ್ಳಿ ಕ್ಷೇತ್ರದ ನನ್ನ ಮತದಾರ ದೇವರುಗಳು ನನ್ನ ಮೇಲೆ ವಿಶ್ವಾಸವಿಟ್ಟು ಹೆಚ್ಚಿನ ಬಹುಮತದಿಂದ ನನ್ನನ್ನು ಗೆಲ್ಲಿಸಿದ್ದು, ಈ ಗೆಲುವನ್ನು ಕ್ಷೇತ್ರದ ಮತದಾರರಿಗೆ ಅರ್ಪಿಸುತ್ತೇನೆ ಎಂದರು.
    ನನ್ನ ಗೆಲುವಿಗೆ ಹಗಲಿರುಳು ಶ್ರಮಿಸಿದ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರಿಗೆ ನಾನು ತುಂಬ ಋಣಿಯಾಗಿರುತ್ತೇನೆ. ಕಾಂಗ್ರೆಸ್ ಪಕ್ಷಕ್ಕೆ ಹೆಚ್ಚಿನ ಬಹುಮತ ಬಂದಿದ್ದು, ರಾಜ್ಯದಲ್ಲಿ ಅಧಿಕಾರ ಹಿಡಿಯಲಿದ್ದು ಮಳವಳ್ಳಿ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಯೋಜನೆ ರೂಪಿಸಲಾಗುವುದು ಎಂದರು.
    ಎ.ಎಸ್.ರಾಜೀವ್ ಮಾತನಾಡಿ, ಮಂಡ್ಯ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷ ಹೆಚ್ಚಿನ ಸ್ಥಾನ ಗಳಿಸಿದ್ದು ಮದ್ದೂರು ಕ್ಷೇತ್ರದಲ್ಲೂ ಸಹ ಕಾಂಗ್ರೆಸ್ ಅಭ್ಯರ್ಥಿ ಕದಲೂರು ಉದಯ್ ಜಯಗಳಿಸುವ ಮೂಲಕ ಕಾಂಗ್ರೆಸ್ ಕಾರ್ಯಕರ್ತರಲ್ಲಿ ಉತ್ಸಾಹ ಮೂಡಿಸಿದ್ದು ಕ್ಷೇತ್ರದಲ್ಲಿ ಹೊಸ ಮನ್ವಂತರ ಸೃಷ್ಟಿ ಮಾಡಿದ್ದಾರೆ ಎಂದರು.
    ಮಳವಳ್ಳಿ ಕ್ಷೇತ್ರದಲ್ಲಿ ಮಾಜಿ ಸಚಿವ ಈ ಹಿಂದೆ ಮಾಡಿರುವ ಅಭಿವೃದ್ಧಿ ಕಾರ್ಯಗಳು ಅವರ ಗೆಲುವಿಗೆ ಸಹಕಾರಿಯಾಗಿದು,್ದ ಮಳವಳ್ಳಿ ತಾಲೂಕನ್ನು ಮಾದರಿ ಮಾಡಲು ಯೋಜನೆ ರೂಪಿಸಿದ್ದಾರೆ. ನಾಗಮಂಗಲ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಚಲುವರಾಯಸ್ವಾಮಿ ಗೆಲುವು ಮಂಡ್ಯ ಜಿಲ್ಲೆಯ ಕಾಂಗ್ರೆಸ್ ಕಾರ್ಯಕರ್ತರಲ್ಲಿ ಹರ್ಷೋದ್ಗಾರ ಸೃಷ್ಟಿಯಾಗಲು ಕಾರಣವಾಗಿದೆ ಎಂದರು.
    ಮಂಡ್ಯ ಜಿಲ್ಲೆಯಲ್ಲಿ ವಿಧಾನ ಪರಿಷತ್ ಸದಸ್ಯರಾಗಿರುವ ಮಧು ಜಿ. ಮಾದೇಗೌಡ ಮತ್ತು ದಿನೇಶ್ ಗೂಳಿಗೌಡ ಸೇರಿದಂತೆ ಜಿಲ್ಲೆಯ ಕಾಂಗ್ರೆಸ್ ಶಾಸಕರು ಜತೆಗೂಡಿ ಜಿಲ್ಲೆಯ ಅಭಿವೃದ್ಧಿಪಡಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts