More

    ಕಾಂಗ್ರೆಸ್ ಟಿಕೆಟ್ ತನಗೇ ಎಂದ ಶಾಸಕಿ ಶಿವಳ್ಳಿ

    ಹುಬ್ಬಳ್ಳಿ: ನಾನೇ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ. ನನ್ನನ್ನು ಬಿಟ್ಟು ಯಾರಿಗೂ ಟಿಕೆಟ್ ಕೊಡುವುದಿಲ್ಲ ಎಂದು ಕುಂದಗೋಳ ಶಾಸಕಿ ಕುಸುಮಾವತಿ ಶಿವಳ್ಳಿ ಸ್ಪಷ್ಟಪಡಿಸಿದರು.

    ಬುಧವಾರ ಬೆಳಗ್ಗೆ ಇಲ್ಲಿನ ಆದರ್ಶ ನಗರದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾಗಲು ಬಂದಿದ್ದ ಶಾಸಕಿ ಶಿವಳ್ಳಿ, ಮಾಧ್ಯಮದವರೊಂದಿಗೆ ಮಾತನಾಡಿದರು.

    ಯಾರು ಏನೇ ಮಾಡಿದರೂ ಟಿಕೆಟ್ ತಪ್ಪಿಸಲು ಸಾಧ್ಯವಿಲ್ಲ. ಕುಂದಗೋಳದಲ್ಲಿ ಯಾವುದೇ ಭಿನ್ನಮತವಿಲ್ಲ. ಇದರಿಂದಾಗಿ ಪ್ರಜಾಧ್ವನಿ ಕಾರ್ಯಕ್ರಮ ರದ್ದಾಗಿದೆ ಎಂಬುದು ಸುಳ್ಳು. ಸಿದ್ದರಾಮಯ್ಯ ಅವರಿಗೆ ಸಮಯದ ಅಭಾವದಿಂದ ಈ ಕಾರ್ಯಕ್ರಮ ರದ್ದಾಗಿದೆ ಎಂದರು.

    ಸಿಎಂ ಬಸವರಾಜ ಬೊಮ್ಮಾಯಿ ಅವರ ಬಳಿ ಬಂದಿದ್ದಕ್ಕೆ ಬೇರೆ ಅರ್ಥ ಕಲ್ಪಿಸುವುದು ಬೇಡ. ನನ್ನ ಕ್ಷೇತ್ರಕ್ಕೆ ಬರಬೇಕಾದ ಅನುದಾನ ಬಿಡುಗಡೆ ಮಾಡುವಂತೆ ಕೇಳಲು ಬಂದಿದ್ದೆ ಎಂದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts