More

    ಕಾಂಗ್ರೆಸ್ ಪಕ್ಷದಿಂದ ಬೃಹತ್ ಪಾದಯಾತ್ರೆ

    ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ಧ್ರುವನಾರಾಯಣ ಚಾಲನೆ


    ಚಾಮರಾಜನಗರ:
    ಸ್ವಾತಂತ್ರ್ಯದ ಅಮೃತ ಮಹೋತ್ಸವ ಅಂಗವಾಗಿ ಚಾಮರಾಜನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಸೋಮವಾರ ಕಾಂಗ್ರೆಸ್ ಪಕ್ಷದಿಂದ ಬೃಹತ್ ಪಾದಯಾತ್ರೆ ನಡೆಯಿತು.
    ತಾಲೂಕಿನ ವೀರನಪುರ ಕ್ರಾಸ್ ಬಳಿಯ ಬಣ್ಣಾರಿ ಅಮ್ಮನ್ ದೇವಸ್ಥಾನ ಮುಂಭಾಗ ನಗರ ಹಾಗೂ ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ವತಿಯಿಂದ ಆಯೋಜಿಸಿದ್ದ ಪಾದಯಾತ್ರೆಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ಧ್ರುವನಾರಾಯಣ ನಗಾರಿ ಬಾರಿಸುವ ಮೂಲಕ ಚಾಲನೆ ನೀಡಿದರು.


    ವಿಶೇಷ ಪೂಜೆ: ಇದಕ್ಕೂ ಮುನ್ನ ಶಾಸಕ ಸಿ.ಪುಟ್ಟರಂಗಶೆಟ್ಟಿ ಬಣ್ಣಾರಿ ಅಮ್ಮನ್ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಕಾಂಗ್ರೆಸ್ ಶಾಸಕರು, ಮಾಜಿ ಶಾಸಕರು, ಸಂಸದರು ಹಾಗೂ ಮುಖಂಡರು ಮತ್ತು ಕಾರ್ಯಕರ್ತರು ಪಾದಯಾತ್ರೆಯಲ್ಲಿ ಹೆಜ್ಜೆ ಹಾಕಿದರು.75 ವರ್ಷದ ತುಂಬಿದ ಹಿರಿಯ ಕಾಂಗ್ರೆಸ್ ಕಾರ್ಯಕರ್ತರನ್ನು ಸನ್ಮಾನಿಸಲಾಯಿತು.


    ಕಡುಕಟ್ಟೆಹುಂಡಿ, ಶಿವಪುರ, ಉತ್ತುವಳ್ಳಿ, ಮಲ್ಲಯ್ಯನಪುರ ಗ್ರಾಮದ ಮುಂಭಾಗದ ಪಾದಯಾತ್ರೆಯಲ್ಲಿ ಬರುತ್ತಿದ್ದ ಕಾಂಗ್ರೆಸ್ ಕಾರ್ಯಕರ್ತರಿಗೆ ಮಜ್ಜಿಗೆ, ಪಾನಕ, ನೀರು, ಬಾಳೆಹಣ್ಣು ವಿವಿಧ ಬಗೆಯ ಹಣ್ಣುಗಳು, ರೈಸ್‌ಬಾತ್ ನೀಡಲಾಯಿತು. ಚಾ.ನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಮಂಗಲ ಗ್ರಾಮಕ್ಕೆ ಮಧ್ಯಾಹ್ನ 3 ಗಂಟೆಗೆ ತಲುಪುತ್ತಿದ್ದಂತೆ ಕಾರ್ಯಕರ್ತರು ಹಾಗೂ ಮುಖಂಡರಿಗೆ ಊಟ ವ್ಯವಸ್ಥೆ ಮಾಡಲಾಗಿತ್ತು.

    ಪಾದಯಾತ್ರೆಯಲ್ಲಿ ಶಾಸಕ ಸಿ.ಪುಟ್ಟರಂಗಶೆಟ್ಟಿ,ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಪಿ.ಮರಿಸ್ವಾಮಿ, ಶಾಸಕ ಯತೀಂದ್ರ ಸಿದ್ದರಾಮಯ್ಯ, ಮಾಜಿ ಶಾಸಕರಾದ ಎ.ಆರ್.ಕೃಷ್ಣಮೂರ್ತಿ, ಜಯಣ್ಣ, ಎಸ್.ಬಾಲರಾಜು, ಮಾಜಿ ಸಂಸದ ಎಂ.ಶಿವಣ್ಣ, ಯುವ ಮುಖಂಡ ಗಣೇಶ್ ಪ್ರಸಾದ್, ಕಾಂಗ್ರೆಸ್ ಜಿಲ್ಲಾ ವಕ್ತಾರ ಕೆರೆಹಳ್ಳಿ ನವೀನ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಮಹಮದ್ ಅಸ್ಗರ್, ಎ.ಎಸ್.ಗುರುಸ್ವಾಮಿ, ಎಸ್ಟಿ ಘಟಕದ ರಾಜ್ಯ ಕಾರ್ಯದರ್ಶಿ ಪು.ಶ್ರೀನಿವಾಸನಾಯಕ, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಬಿ.ಕೆ.ರವಿಕುಮಾರ್, ಪ್ರಧಾನ ಕಾರ್ಯದರ್ಶಿಗಳಾದ ಆರ್.ಮಹದೇವ್, ಚಿಕ್ಕಮಹದೇವ್, ಜಿ.ಪಂ. ಮಾಜಿ ಸದಸ್ಯರಾದ ರಮೇಶ್, ಕಬ್ಬಳ್ಳಿ ಮಹೇಶ್, ಎಸ್‌ಪಿಕೆ ಉಮೇಶ್, ಮಹೇಶ್ ಕುದರ್, ಜಿಲ್ಲಾ ಮಾಧ್ಯಮ ಕಾರ್ಯದರ್ಶಿ ಅರುಣ್ ಕುಮಾರ್, ಜಿಲ್ಲಾ ವೀಕ್ಷಕ ಎಸ್.ಸಿ.ಬಸವರಾಜು, ಚಾಮುಲ್ ನಿರ್ದೇಶಕ ನಂಜುಂಡಪ್ರಸಾದ್ ಸೇರಿದಂತೆ ಇತರರು ಭಾಗವಹಿಸಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts