More

    ಕಾಂಗ್ರೆಸ್ ಸರ್ಕಾರ ಬಂದರೆ ಸಚಿವನಾಗುವೆ; ಎಂಪಿಎಂ ಕಾರ್ಖಾನೆ ಪುನರಾರಂಭ ಖಚಿತ: ಶಾಸಕ ಬಿ.ಕೆ.ಸಂಗಮೇಶ್ವರ್

    ಭದ್ರಾವತಿ: ಮುಂದೆ ನಮ್ಮ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುವುದು ಖಚಿತವಾಗಿದೆ. ಜನತೆ ಇದೇ ರೀತಿ ಸಹಕಾರ ನೀಡಿದರೆ ಮುಂದೆ ಸಚಿವನಾಗಿ ಕ್ಷೇತ್ರದಲ್ಲಿ ಮತ್ತಷ್ಟು ಅಭಿವೃದ್ಧಿ ಮಾಡಲು ಸಾಧ್ಯವಾಗುತ್ತದೆ ಎಂದು ಶಾಸಕ ಬಿ.ಕೆ.ಸಂಗಮೇಶ್ವರ್ ಹೇಳಿದರು.
    ಶನಿವಾರ ನಗರದಲ್ಲಿ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣ ಸಮೀಪದಲ್ಲಿ 2.17 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಿರುವ ಖಾಸಗಿ ಬಸ್ ನಿಲ್ದಾಣ ಉದ್ಘಾಟಿಸಿ ಮಾತನಾಡಿ, ಇಲ್ಲಿನ ಎಂಪಿಎಂ ಕಾರ್ಖಾನೆಯನ್ನು ಪುನರಾರಂಭ ಮಾಡುವುದು ಮಾತ್ರ ಖಚಿತ. ಆದರೆ ವಿಐಎಸ್‌ಎಲ್ ಕೇಂದ್ರ ಸರ್ಕಾರದ ಒಡೆತನದಲ್ಲಿರುವುದರಿಂದ ಅದನ್ನು ರಾಜ್ಯ ಸರ್ಕಾರಕ್ಕೆ ಹಿಂಪಡೆಯುವ ಪ್ರಯತ್ನ ಮಾಡುತ್ತಿದ್ದೇವೆ. ಆದರೆ ಇಲ್ಲಿನ ಬಿಜೆಪಿ ಸರ್ಕಾರ ಕಾರ್ಖಾನೆಯನ್ನು ಸಂಪೂರ್ಣ ರಾಜ್ಯ ಸರ್ಕಾರಕ್ಕೆ ಹಿಂಪಡೆಯುವ ಪ್ರಯತ್ನ ಮಾಡುವಲ್ಲಿ ವಿಳಂಬ ನೀತಿ ಅನುಸರಿಸುತ್ತಿದೆ ಎಂದು ದೂರಿದರು.
    ನಗರಕ್ಕೆ ಖಾಸಗಿ ಬಸ್ ನಿಲ್ದಾಣದ ಅವಶ್ಯಕತೆ ಅರಿತು ನಗರಸಭೆಯಿಂದ ಸುಸಜ್ಜಿತ ಬಸ್‌ನಿಲ್ದಾಣ ನಿರ್ಮಿಸಲಾಗಿದೆ. ಸರ್ಕಾರಿ ಬಸ್ ನಿಲ್ದಾಣದಲ್ಲಿರುವಂತೆ ಇಲ್ಲಿಯೂ ವಿಶ್ರಾಂತಿ ಕೊಠಡಿ, ಶೌಚಾಲಯ ಸೇರಿದಂತೆ ಸುಸಜ್ಜಿತ ವ್ಯವಸ್ಥೆ ಕಲ್ಪಿಸಿಕೊಡಲಾಗುವುದು. ನಿಮ್ಮೆಲ್ಲರ ಸಹಕಾರದಿಂದಲೇ ನಾನು ಶಾಸಕನಾಗಿ, ಸರ್ಕಾರದಿಂದ ಅನುದಾನ ತಂದು ಬಸ್ ನಿಲ್ದಾಣ ನಿರ್ಮಾಣ ಮಾಡಲು ಸಾಧ್ಯವಾಯಿತು. ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯ ಮಾಡಲು ಸಹಕರಿಸಿದ ನಿಮ್ಮೆಲ್ಲರಿಗೂ ನನ್ನ ಧನ್ಯವಾದಗಳು ಎಂದರು.
    ಪೌರಾಯುಕ್ತ ಮನುಕುಮಾರ್ ಮಾತನಾಡಿ, ನಗರವನ್ನು ಸ್ಮಾರ್ಟ್ ಸಿಟಿ ಮಾಡಲು ಶಾಸಕರು ಇತ್ತೀಚೆಗೆ 7 ಕೋಟಿ ರೂ. ಅನುದಾನ ಸಹ ತಂದಿದ್ದಾರೆ. ಅಲ್ಲದೆ ಬೀದಿದೀಪ ಅಳವಡಿಕೆಗೆ 4.17 ಕೋಟಿ ರೂ. ಅನುದಾನ ತರುವ ಪ್ರಯತ್ನ ಸಹ ನಡೆಸಿದ್ದಾರೆ. ಪಾರದರ್ಶಕ ಆಡಳಿತ ಸೇರಿದಂತೆ ಎಲ್ಲಾ ಅಭಿವೃದ್ಧಿ ವಿಚಾರಗಳಲ್ಲಿಯೂ ರಾಜ್ಯದ 214 ನಗರ ಸ್ಥಳೀಯ ಸಂಸ್ಥೆಗಳಲ್ಲಿ ಭದ್ರಾವತಿ ನಗರಸಭೆ ಮೊದಲ ಸ್ಥಾನದಲ್ಲಿರುವುದು ನಮ್ಮೆಲ್ಲರಿಗೂ ಹೆಮ್ಮೆಯ ವಿಚಾರ ಎಂದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts