More

    ಕಾಗವಾಡ ತಾಲೂಕಿನಲ್ಲಿ ಸೋಂಕಿತರ ನೆರವಿಗೆ ಸಿದ್ಧ

    ಕಾಗವಾಡ: ಕಾಗವಾಡ ತಾಲೂಕಿನಲ್ಲಿ ಕರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಸೋಂಕಿತರ ಪ್ರಾಣ ರಕ್ಷಣೆಗಾಗಿ ಶ್ರೀಮಂತ ಪಾಟೀಲ ಫೌಂಡೇಷನ್ ವತಿಯಿಂದ ಸರ್ಕಾರಿ ಆಸ್ಪತ್ರೆಗಳಿಗೆ 3 ವೆಂಟಿಲೇಟರ್, ಆಕ್ಸಿಜನ್ ಸಿಲಿಂಡರ್, ಸ್ಯಾನಿಟೈಸರ್ ಹಾಗೂ ಇನ್ನಿತರ ಸೌಲಭ್ಯ ಒದಗಿಸಲು ಸಿದ್ಧರಿರುವುದಾಗಿ ಕೈಮಗ್ಗ, ಜವಳಿ ಹಾಗೂ ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆ ಸಚಿವ ಶ್ರೀಮಂತ ಪಾಟೀಲ ಹೇಳಿದರು.

    ಸಮೀಪದ ಉಗಾರ ಖುರ್ದ ಪಟ್ಟಣದಲ್ಲಿ ಸೋಮವಾರ ಕೋವಿಡ್ ಕೇರ್ ಸೆಂಟರ್ ಉದ್ಘಾಟಿಸಿ ಮಾತನಾಡಿದ ಅವರು, ತಾಲೂಕಿನ ಕಾಗವಾಡ, ಶಿರಗುಪ್ಪಿ, ಉಗಾರ ಖುರ್ದ, ಐನಾಪುರದಲ್ಲಿ ಕೋವಿಡ್ ಕೇರ್ ಸೆಂಟರ್ ಪ್ರಾರಂಭಿಸಲಾಗಿದೆ. ಉಗಾರ ಖುರ್ದ್ ಪಟ್ಟಣದ ವಿಹಾರ ಸಭಾಂಗಣದಲ್ಲಿ ಉಗಾರ ಸಕ್ಕರೆ ಕಾರ್ಖಾನೆಯ ಸಹಕಾರದಿಂದ 30 ಬೆಡ್, ಸಿಲಿಂಡರ್ ಸೌಲಭ್ಯಗಳೊಂದಿಗೆ ಸೆಂಟರ್ ಪ್ರಾರಂಭಿಸಲಾಗಿದೆ ಎಂದರು. ಸೋಂಕಿತರ ಚಿಕಿತ್ಸೆಗೆ ಬೇಕಾಗುವ ಬೆಡ್, ಆಕ್ಸಿಜನ್, ರೆಮ್‌ಡೆಸಿವಿರ್ ಔಷಧಗಳ ಕೊರತೆಯಾಗದಂತೆ ಅಧಿಕಾರಿಗಳು ಎಚ್ಚರ ವಹಿಸಬೇಕು. ಸಾರ್ವಜನಿಕರು ಕೋವಿಡ್ ಸೋಂಕಿನಿಂದ ರಕ್ಷಿಸಿಕೊಳ್ಳಲು ಮುಖಕ್ಕೆ ಮಾಸ್ಕ್ ಧರಿಸುವುದು, ಮೇಲಿಂದ ಮೇಲೆ ಸ್ಯಾನಿಟೈಸರ್‌ನಿಂದ ಕೈತೊಳೆದುಕೊಳ್ಳುವುದು, ದೈಹಿಕ ಅಂತರ ಕಾಯ್ದುಕೊಳ್ಳುವುದು, ವಿನಾಕಾರಣ ಹೊರಗೆ ಸುತ್ತಾಡುವುದು ಮಾಡದೇ ಎಚ್ಚರ ವಹಿಸಿಕೊಳ್ಳುವಂತೆ ಕರೆ ನೀಡಿದರು. ಉಗಾರ ಶುಗರ್ಸ್ ಕಾರ್ಖಾನೆಯ ವ್ಯವಸ್ಥಾಪಕ ನಿರ್ದೇಶಕ ಚಂದನ ಶಿರಗಾವಂಕರ, ಚಿಕ್ಕೋಡಿ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಎಸ್.ಎಸ್.ಗಡದೆ, ಕಾಗವಾಡ ತಹಸಿಲ್ದಾರ್ ಪ್ರಮೀಳಾ ದೇಶಪಾಂಡೆ, ಅಥಣಿ ತಾಲೂಕು ಆರೋಗ್ಯಾಧಿಕಾರಿ ಡಾ. ಬಸಗೌಡ ಕಾಗೆ, ವೈದ್ಯಾಧಿಕಾರಿ ಡಾ.ವೀಣಾ ಲೋಕುರ, ತಾಪಂ ಇಒ ಈರನಗೌಡ ಏಗನಗೌಡರ, ಬಿಇಒ ಎಂ.ಆರ್.ಮುಂಜೆ, ಸಿಡಿಪಿಒ ಸಂಜೀವ ಸದಲಗಿ, ಉಗಾರ ಖುರ್ದ ಪುರಸಭೆಯ ಮುಖ್ಯಾಧಿಕಾರಿ ಕಮಲವ್ವ ಬಾಗೋಜಿ ಇತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts