More

    ಕಾಟಾಚಾರಕ್ಕೆ ಸಭೆ ನಡೆಸಿದರೆ ಏನು ಪ್ರಯೋಜನ?

    ಬಾಗೇಪಲ್ಲಿ : ಅಧಿಕಾರಿಗಳ ಬಳಿ ಮಾಹಿತಿ ಇಲ್ಲವೆಂದರೆ ಏತಕ್ಕಾಗಿ ಸಭೆ ಮಾಡಬೇಕು. ಕತ್ತೆ ಕಾಯೋದಕ್ಕಾ? ಎಂದು ತಾಪಂ ಸಾಮಾನ್ಯ ಸಭೆಯಲ್ಲಿ ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ಗರಂ ಆದರು.

    ತಾಪಂ ಸಭಾಂಗಣದಲ್ಲಿ ಬುಧವಾರ ಆಯೋಜಿಸಿದ್ದ ತ್ರೈಮಾಸಿಕ ಕೆಡಿಪಿ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಸರ್ಕಾರಿ ಕೆಲಸಗಳ ಬಗ್ಗೆ ಅಧಿಕಾರಿಗಳಿಗೆ ಸಮರ್ಪಕ ಮಾಹಿತಿ ಇರಬೇಕು. ಇದರ ಬಗ್ಗೆ ಸಭೆಗಳಲ್ಲಿ ಪ್ರಶ್ನೆ ಕೇಳಿದಾಗ ಉತ್ತರ ನೀಡಬೇಕು. ಕಾಟಾಚಾರಕ್ಕೆ ಬಂದು ಹೋಗುವುದಾದರೆ ಸಭೆಗಳನ್ನು ನಡೆಸುವುದೇಕೆ ಎಂದು ಬೆಸ್ಕಾಂ ಅಧಿಕಾರಿಗಳ ವಿರುದ್ಧ ಕಿಡಿಕಾರಿದರು.

    ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳು ಜನರ ಹಿತ ಕಾಪಾಡಲು ಪ್ರಾಮಾಣಿಕವಾಗಿ ಕೆಲಸ ಮಾಡಬೇಕು. ಸರ್ಕಾರಿ ಸವಲತ್ತುಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸಬೇಕು ಎಂದರು.ತಾಲೂಕಿನಲ್ಲಿ ವಾಡಿಕೆ ಪ್ರಮಾಣಕ್ಕಿಂತಲೂ ಹೆಚ್ಚಿಗೆ ಮಳೆ ಬಿದ್ದಿದೆ. ಬಿತ್ತನೆ ಬೀಜಕ್ಕೆ ಯಾವುದೇ ಕೊರತೆಯಿಲ್ಲ, ರಸಗೊಬ್ಬರಗಳ ಪೈಕಿ ಯೂರಿಯಾ ಬಿಟ್ಟು ಇತರ ಗೊಬ್ಬರಗಳ ದಾಸ್ತಾನು ಸಾಕಷ್ಟಿದೆ ಎಂದು ಕೃಷಿ ಇಲಾಖೆ ಅಧಿಕಾರಿಗಳು ತಿಳಿಸಿದಾಗ, ರೈತರಿಗೆ ತೊಂದರೆಯಾಗದಿರಲು ಸೂಕ್ತ ಹಂಚಿಕೆಯ ವ್ಯವಸ್ಥೆ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.ಜಿಪಂ ಸದಸ್ಯ ನರಸಿಂಹಪ್ಪ, ತಹಸೀಲ್ದಾರ್ ಎಂ. ನಾಗರಾಜ್, ಇಒ ಶ್ರೀನಿವಾಸ್ ತಾಪಂ ಅಧ್ಯಕ್ಷ ಕೆ. ಆರ್. ನರೇಂದ್ರ, ಉಪಾಧ್ಯಕ್ಷೆ ಸರಸ್ವತಮ್ಮ ಮತ್ತಿತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts