More

    ಕಾಡಾನೆ ಹಾವಳಿ ತಡೆಗಟ್ಟಲು ಕ್ರಮವಹಿಸಿ

    ಕುಶಾಲನಗರ: ಕಾಡಾನೆ ಹಾವಳಿ ತಡೆಗಟ್ಟಲು ಅರಣ್ಯ ಇಲಾಖೆ ಅಗತ್ಯ ಕ್ರಮ ಕೈಗೊಳ್ಳಬೇಕೆಂದು ನಂಜರಾಜಪಟ್ಟಣ ಗ್ರಾಮ ಪಂಚಾಯಿತಿ ವತಿಯಿಂದ ಹೊಸಪಟ್ಟಣದ ಸಮುದಾಯ ಭವನದಲ್ಲಿ ಆಯೋಜಿಸಿದ್ದ ಗ್ರಾಮಸಭೆಯಲ್ಲಿ ಗ್ರಾಮಸ್ಥರು ಒತ್ತಾಯಿಸಿದರು.

    ಗ್ರಾಪಂ ಅಧ್ಯಕ್ಷ ಸಿ.ಎಲ್.ವಿಶ್ವ ಅಧ್ಯಕ್ಷತೆಯಲ್ಲಿ ಆಯೋಜಿಸಿದ್ದ ಗ್ರಾಮಸಭೆಯಲ್ಲಿ ಕಾಡಾನೆ ಹಾವಳಿ ವಿಷಯವಾಗಿ ಗಂಭೀರ ಚರ್ಚೆ ನಡೆಯಿತು. ಅರಣ್ಯ ಇಲಾಖೆ ವತಿಯಿಂದ ಅಳವಡಿಸಿರುವ ರೈಲು ಹಳಿಯ ಬ್ಯಾರಿಕೇಡ್, ಹ್ಯಾಂಗಿಂಗ್ ಸೋಲಾರ್ ಫೆನ್ಸ್ ಕಳಪೆಯಾಗಿರುವ ಕಾರಣ ಈ ಯೋಜನೆಗಳು ವಿಫಲವಾಗಿದ್ದು, ಕಾಡಾನೆ ಹಾವಳಿ ನಿರಂತರವಾಗಿ ಮುಂದುವರಿದಿದೆ ಎಂದು ಗ್ರಾಮಸ್ಥರು ತಿಳಿಸಿದರು.

    ಈ ಯೋಜನೆ ವಿಫಲವಾಗಿರುವ ಬಗ್ಗೆ ಅರಣ್ಯ ಇಲಾಖೆ ಮೇಲಧಿಕಾರಿಗಳ ಗಮನಕ್ಕೆ ತರಲಾಗಿದೆ. ಕಳಪೆ ಕಾಮಗಾರಿ ನಡೆಸಿದ ಗುತ್ತಿಗೆದಾರನ ವಿರುದ್ಧ ತನಿಖೆಗೆ ಆಗ್ರಹಿಸಲಾಗಿದೆ. ವನ್ಯಜೀವಿಗಳ ಹಾವಳಿ ತಡೆಗೆ ಡಿಸಿಎಫ್ ನೇತೃತ್ವದಲ್ಲಿ ವಿಶೇಷ ಗ್ರಾಮಸಭೆ ಹಮ್ಮಿಕೊಳ್ಳುವ ಬಗ್ಗೆ ಹಾಗೂ ಕಾಡಾನೆ ಹಾವಳಿ ನಿಯಂತ್ರಣಕ್ಕೆ ಬರದಿದ್ದಲ್ಲಿ ಪಂಚಾಯಿತಿ ವತಿಯಿಂದ ಪ್ರತಿಭಟನೆ ನಡೆಸಲಾಗುವುದು ಎಂದು ಅಧ್ಯಕ್ಷ ಸಿ.ಎಲ್.ವಿಶ್ವ ತಿಳಿಸಿದರು. ಇದಕ್ಕೆ ಸದಸ್ಯ ಆರ್.ಕೆ.ಚಂದ್ರ ದನಿಗೂಡಿಸಿ, ಕಳಪೆ ಕಾಮಗಾರಿ ನಡೆಸಿದ ಗುತ್ತಿಗೆದಾರನ ವಿರುದ್ಧ ಸೂಕ್ತ ತನಿಖೆಗೆ ಆಗ್ರಹಿಸಿದರು.

    ಸ್ಮಶಾನಕ್ಕೆ ಬೇರೆ ಜಾಗ ಗುರುತಿಸಿ: ಗ್ರಾಮದಲ್ಲಿ ಸ್ಮಶಾನ ಸಮಸ್ಯೆ ಬಗ್ಗೆ ಗ್ರಾಮಸ್ಥರು ಸಭೆಯ ಗಮನಕ್ಕೆ ತಂದರು. ಅರಣ್ಯ ಪೈಸಾರಿ ಜಾಗದಲ್ಲಿ ಶವಸಂಸ್ಕಾರಕ್ಕೆ ಅರಣ್ಯ ಇಲಾಖೆಯಿಂದ ಅನನುಕೂಲ ಉಂಟಾಗುತ್ತಿದೆ ಎಂದು ಗ್ರಾಮದ ಅಪ್ಪು ಆರೋಪಿಸಿದರು. ಹೊಸದಾಗಿ ನಂಜರಾಯಪಟ್ಟಣ ಮತ್ತು ವಿರೂಪಾಕ್ಷಪುರದಲ್ಲಿ ಗುರುತಿಸಿರುವ ಸ್ಮಶಾನದಿಂದ ಸಾರ್ವಜನಿಕರಿಗೆ ಸಮಸ್ಯೆ, ರಸ್ತೆ ಸಂಪರ್ಕ ಕೊರತೆ ಎದುರಾಗಿದೆ. ಸಮಸ್ಯೆ ಒಳಗೊಂಡ ಸ್ಮಶಾನಕ್ಕೆ ಬದಲಾಗಿ ಗ್ರಾಪಂ ವ್ಯಾಪ್ತಿಯಲ್ಲಿ ಒಂದೆಡೆ ಸ್ಮಶಾನಕ್ಕೆ ಸೂಕ್ತ ಸ್ಥಳ ಗುರುತಿಸಲು ಗ್ರಾಮಸ್ಥರು ಆಗ್ರಹಿಸಿದರು. ಈ ಬಗ್ಗೆ ಸಭೆಯಲ್ಲಿ ತೀವ್ರ ಚರ್ಚೆ ನಡೆದು ಸಾರ್ವಜನಿಕರಿಗೆ ಅನುಕೂಲವಾಗುವ ಪ್ರದೇಶದಲ್ಲಿ ಸ್ಮಶಾನಕ್ಕೆ ಜಾಗ ಗುರುತಿಸಲು ನಿರ್ಣಯ ಕೈಗೊಳ್ಳಲಾಯಿತು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts