More

    ಕಾಡುಗೊಲ್ಲರಿಗೆ ಕೇಂದ್ರ ಸರ್ಕಾರ ಅನ್ಯಾಯ

    ಚಿತ್ರದುರ್ಗ: ಕಳೆದ ಲೋಕಸಭೆ-ವಿಧಾನಸಭೆ ಚುನಾವಣೆ ಪೂರ್ವದಲ್ಲಿ ಬಿಜೆಪಿ ನೀಡಿದ ಭರವಸೆಗಳಲ್ಲಿ ಒಂದನ್ನೂ ಈಡೇರಿಸಿಲ್ಲ ಎಂದು ಕೆಪಿಸಿಸಿ ಪ್ರಚಾರ ಸಮಿತಿ ಸಂಯೋಜಕ ಸಿ.ಶಿವುಯಾದವ್ ದೂರಿದರು.
    ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ದುರ್ಗದಲ್ಲಿ ಮದಕರಿ ನಾಯಕ ಥೀಮ್‌ಪಾರ್ಕ್ ನಿರ್ಮಾಣವಾಗಿಲ್ಲ. ಭದ್ರಾ ಮೇಲ್ದಂಡೆಗೆ 5300 ಕೋಟಿ ರೂ. ಅನುದಾನ ಬಂದಿಲ್ಲ. ಕಾಡುಗೊಲ್ಲರನ್ನು ಎಸ್‌ಟಿಗೆ ಸೇರಿಸಿಲ್ಲ, ಒಳ ಮೀಸಲಾತಿ ಸೌಲಭ್ಯ ದೊರೆತಿಲ್ಲ ಎಂದು ಬೇಸರಿಸಿದರು.
    ನೇರ ರೈಲು ಮಾರ್ಗ ಯೋಜನೆ ವಿಳಂಬವಾಗುತ್ತಿದೆ.‘ಭದ್ರೆ’ಗೆ ಕೇಂದ್ರದ ಅನುದಾನ ಬಿಡುಗಡೆ ಕೋರಿ ರೈತರು, ಸಚಿವ ನಾರಾಯಣಸ್ವಾಮಿ ಅವರ ಚಿತ್ರದುರ್ಗ ಕಚೇರಿ ಎದುರು ಅನಿರ್ದಿಷ್ಟಾವಧಿ ಧರಣಿ ನಡೆಸುತ್ತಿದ್ದಾರೆ. ಈ ಬಗ್ಗೆ ಸಚಿವರು ಚಕಾರವೆತ್ತಿಲ್ಲ ಎಂದರು.
    ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಅನ್ಯ ಪಕ್ಷಗಳ ಮುಖಂಡರನ್ನು ಪಕ್ಷಕ್ಕೆ ಬನ್ನಿ ಎಂದು ಬೀದಿಯಲ್ಲಿ ಭೀಕ್ಷೆ ಬೇಡುತ್ತಿದ್ದಾರೆಂಬ ಕೇಂದ್ರ ಸಚಿವ ಎ.ನಾರಾಯಣಸ್ವಾಮಿ ಅವರ ಹೇಳಿಕೆ ಸೌಜನ್ಯ ರಹಿತವಾಗಿದೆ ಎಂದು ಹೇಳಿದರು.
    ಸಚಿವರು ಬಿಜೆಪಿ ಸರ್ಕಾರ ಏನಾದ್ರೂ ಅಭಿವೃದ್ಧಿ ಕೆಲಸ ಮಾಡಿದ್ದರೆ ಅದನ್ನು ಜನರಿಗೆ ತಿಳಿಸಲಿ, ಅನಗತ್ಯವಾಗಿ ಕಾಂಗ್ರೆಸ್ ನಾಯಕರ ವಿರುದ್ಧ ಹೇಳಿಕೆ ನಿಡುವುದು ಕೈಬಿಡಬೇಕು ಎಂದು ತಿಳಿಸಿದರು.
    ನರೇಂದ್ರ ಮೋದಿ ಮತ್ತೆ ಪ್ರಧಾನಿ ಆಗಲಿ ಎಂದು ಜನರು ಜಪ-ತಪ ಮಾಡುತ್ತಿದ್ದಾರೆ. ಅಸಂವಿಧಾನಿಕ ಆಡಳಿತ ನಡೆಸುತ್ತಿರುವ ಬಿಜೆಪಿಗೆ ಬಡವರು, ರೈತರ ಪರ ಕಾಳಜಿ ಇಲ್ಲ. ಈ ಬಾರಿ ಚುನಾವಣೆಯಲ್ಲಿ ತಕ್ಕಪಾಠ ಕಲಿಸುತ್ತಾರೆ ಎಂದು ಹೇಳಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts