More

    ಕಾಡುಗೊಲ್ಲ ಸಮುದಾಯವನ್ನು ಎಸ್ಟಿಗೆ ಸೇರಿಸಿ

    ಚಿತ್ರದುರ್ಗ: ಕಾಡುಗೊಲ್ಲ ಸಮುದಾಯವನ್ನು ಎಸ್ಟಿಗೆ ಸೇರಿಸುವಂತೆ ರಾಜ್ಯ ಸರ್ಕಾರ 2014ರಲ್ಲೇ ಶಿಫಾರಸು ಮಾಡಿದ್ದು, ಕೇಂದ್ರ ಸರ್ಕಾರ ಅಧಿವೇಶನದಲ್ಲಿ ಘೋಷಿಸಬೇಕು ಎಂದು ರಾಜ್ಯ ಕಾಡುಗೊಲ್ಲ ಕ್ಷೇಮಾಭೀವೃದ್ಧಿ ಸಂಘದ ಅಧ್ಯಕ್ಷ ಸಿ.ಶಿವುಯಾದವ್ ಒತ್ತಾಯಿಸಿದರು.

    ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, 10 ವರ್ಷ ಕಳೆದರೂ ಕೇಂದ್ರ ಸರ್ಕಾರ ಜಾರಿಗೊಳಿಸಿಲ್ಲ. ಈಗಲಾದರೂ ಎಸ್ಟಿಗೆ ಸೇರಿಸದಿದ್ದರೆ, ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಕಾಡುಗೊಲ್ಲರು ಶಕ್ತಿ ಪ್ರದರ್ಶಿಸಬೇಕಾಗುತ್ತದೆ ಎಂದು ಎಚ್ಚರಿಸಿದರು.

    ಎಸ್ಟಿ ಸೇರ್ಪಡೆ ಸಂಬಂಧ ಎಲ್ಲ ರೀತಿಯ ಅರ್ಹತೆ ಸಮುದಾಯ ಹೊಂದಿದೆ. ಅನ್ನಪೂರ್ಣಮ್ಮ ಆಯೋಗ ವರದಿ ನೀಡಿದೆ. ಅಲ್ಲದೆ, ಕುಲಶಾಸ್ತ್ರ ಅಧ್ಯಯನವೂ ಆಗಿದೆ. ಕೇಂದ್ರ ಸರ್ಕಾರ ಕೂಡ ಭರವಸೆ ನೀಡಿತ್ತು. ಆದರೆ, ಈವರೆಗೂ ಈಡೇರಿಸಿಲ್ಲ. ಸಂಸತ್‌ನಲ್ಲಿ ಚರ್ಚಿಸಿ, ಸೇರ್ಪಡೆಗೊಳಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಮುಂದಾಗಬೇಕು ಎಂದು ಒತ್ತಾಯಿಸಿದರು.

    ಎಸ್ಟಿಗೆ ಸೇರಿಸುವಂತೆ ಸಂಬಂಧಿಸಿದ ಕೇಂದ್ರ ಸಚಿವರಿಗೆ ಮನವಿ ಸಲ್ಲಿಸಲಾಗಿದೆ. ಆದರೂ ಯಾವುದೇ ಪ್ರಯೋಜನವಾಗಿಲ್ಲ. ಇನ್ನಾದರೂ ಗಮನಹರಿಸದಿದ್ದಲ್ಲಿ ವಿಧಾನಸಭಾ ಚುನಾವಣೆಯಲ್ಲಿ ಸಮುದಾಯ ಕೈಗೊಂಡ ತೀರ್ಮಾನ ಲೋಕಸಭೆಗೂ ಅನ್ವಯವಾಗಲಿದೆ. ಇದಕ್ಕೆ ಆಸ್ಪದ ನೀಡಬೇಡಿ ಎಂದು ಮನವಿ ಮಾಡಿದರು.

    ಮತಯಾಚಿಸಲು ನಮ್ಮ ಹಟ್ಟಿಗಳಿಗೆ ಬರುವ ಬಿಜೆಪಿ ನಾಯಕರು ಜನರಿಗೆ ಮುಖ ತೋರಿಸದಂತ ಪರಿಸ್ಥಿತಿ ತಂದುಕೊಳ್ಳಬೇಡಿ. ಸಚಿವ ಎ.ನಾರಾಯಣಸ್ವಾಮಿ ಅವರು ಈ ಕುರಿತು ಒತ್ತಡ ಹೇರಬೇಕು ಎಂದು ಕೋರಿದರು.

    ಜಿಲ್ಲಾ ಸಂಘದ ಅಧ್ಯಕ್ಷ ಶಿವಣ್ಣ, ಕಾರ್ಯಾಧ್ಯಕ್ಷ ಕದರಪ್ಪ, ಉಪಾಧ್ಯಕ್ಷ ತಿಮ್ಮೇಶ್, ಮುಖಂಡರಾದ ಜಗದೀಶ್, ಹರೀಶ್ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts