More

    ಕಾನೂನು ಅರಿವು ಮೂಡಿಸಿದರೆ ಉತ್ತಮ ಸಮಾಜ ನಿರ್ಮಾಣ

    ನಾಗಮಂಗಲ: ಸಮಾಜದ ಕಟ್ಟ ಕಡೆಯ ವ್ಯಕ್ತಿಗೂ ಕಾನೂನು ಅರಿವು ಮೂಡಿಸಿದರೆ ಉತ್ತಮ ಸಮಾಜ ನಿರ್ಮಿಸಬಹುದಾಗಿದ್ದು, ಆ ನಿಟ್ಟಿನಲ್ಲಿ ಗ್ರಾಮೀಣ ಪ್ರದೇಶಗಳಲ್ಲಿ ಕಾನೂನು ಸಾಕ್ಷರತೆ ಅರಿವು ಮೂಡಿಸಲಾಗುತ್ತಿದೆ ಎಂದು ತಾಲೂಕು ವಕೀಲರ ಸಂಘದ ಅಧ್ಯಕ್ಷ ಟಿ.ಕೆ.ರಾಮೇಗೌಡ ತಿಳಿಸಿದರು.

    ತಾಲೂಕಿನ ಬೋಗಾದಿಯ ಸಮುದಾಯ ಭವನದಲ್ಲಿ ಮಂಗಳವಾರ ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ, ತಾಲೂಕು ಆಡಳಿತ, ತಾಲೂಕು ಪಂಚಾಯಿತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಹಭಾಗಿತ್ವದಲ್ಲಿ ಆಯೋಜಿಸಿದ್ದ ಉಚಿತ ಕಾನೂನು ಅರಿವು ಕಾರ್ಯಕ್ರಮದಲ್ಲಿ ಮಾತನಾಡಿದರು.

    ಮಹಿಳೆಯರಲ್ಲಿ ಕಾನೂನಿನ ಅರಿವು ಮೂಡಿದರೆ ಇಡೀ ಸಮಾಜ ಕಾನೂನು ಕಲಿತಂತೆ. ಸಭ್ಯ ನಾಗರಿಕನಾದರೆ ಇಡೀ ಸಮಾಜ ಸಭ್ಯತೆಯಿಂದ ಕೂಡಿರುತ್ತದೆ. ಸಮಾಜ ಮತ್ತು ಕುಟುಂಬಕ್ಕೆ ಸದುಪಯೋಗವಾಗುವಂತೆ ಸ್ವಾತಂತ್ರ್ಯವನ್ನು ಬಳಸಿಕೊಳ್ಳಬೇಕು. ಸ್ವಾತಂತ್ರ್ಯ ಎಂಬುದು ಸ್ವೇಚ್ಛಾಚಾರವಾಗಬಾರದು. ಗ್ರಾಮೀಣ ಪ್ರದೇಶದ ಕೆಲ ಜನರಲ್ಲಿ ಇಂದಿಗೂ ಕಾನೂನು ಅರಿವಿನ ಕೊರತೆಯಿದೆ. ಇದರಿಂದಾಗಿ ಅನೇಕ ಸಮಸ್ಯೆಗಳನ್ನು ಅನುಭವಿಸುತ್ತಿದ್ದಾರೆ. ಸಣ್ಣ ಪುಟ್ಟ ಸಮಸ್ಯೆಗಳನ್ನು ಹೊತ್ತು ಅನೇಕ ಜನರು ಪೊಲೀಸ್ ಠಾಣೆ ಮತ್ತು ನ್ಯಾಯಾಲಯಗಳ ಮೆಟ್ಟಿಲು ಹತ್ತಿ ಸಮಯ, ಹಣ ವ್ಯರ್ಥ ಮಾಡಿಕೊಳ್ಳುತ್ತಿದ್ದಾರೆ. ಲೋಕ ಅದಾಲತ್ ಮೂಲಕ ನ್ಯಾಯಾಲಯಗಳಲ್ಲಿ ಅಥವಾ ಇನ್ನಿತರ ಕಚೇರಿಗಳಲ್ಲಿ ಬಾಕಿ ಇರುವ ಪ್ರಕರಣಗಳನ್ನು ಮತ್ತು ವ್ಯಾಜ್ಯಪೂರ್ವ ಪ್ರಕರಣಗಳನ್ನು ರಾಜಿಸಂಧಾನದ ಮೂಲಕ ಇತ್ಯರ್ಥ್ಯಪಡಿಸಿಕೊಳ್ಳಲು ಅವಕಾಶವಿದ್ದು, ಜನರು ಈ ಕಾರ್ಯಕ್ರಮದ ಸದುಪಯೋಗಪಡಿಸಿಕೊಳ್ಳಬೇಕು ಎಂದರು.

    ಗ್ರಾಪಂ ಅಧ್ಯಕ್ಷೆ ವರಲಕ್ಷ್ಮೀ, ಉಪಾಧ್ಯಕ್ಷ ತಿಲಕ್‌ಕುಮಾರ್, ವಕೀಲರ ಸಂಘದ ಉಪಾಧ್ಯಕ್ಷ ಪುರುಷೋತ್ತಮ್, ವಕೀಲ ಚಂದ್ರಶೇಖರ್, ಬೋಗಾದಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ರಮೇಶ್, ಸಿಡಿಪಿಒ ಕಚೇರಿಯ ಮೇಲ್ವಿಚಾರಕಿ ಮಂಜುಳಾ, ಪಿಡಿಒ ಕೃಷ್ಣಮೂರ್ತಿ, ಗ್ರಾಪಂ ಕಾರ್ಯದರ್ಶಿ ಸುದರ್ಶನ್ ಮತ್ತಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts