More

    ಕಾನೂನು ವಿವಿ ಕುಲಪತಿಗೆ ಮಸಿ ಎರಚಿ ಗಲಾಟೆ

    ಹುಬ್ಬಳ್ಳಿ: ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದಿಂದ ತಮಗೆ ಅನ್ಯಾಯವಾಗುತ್ತಿದೆ ಎಂದು ಆರೋಪಿಸಿ ರಾಜ್ಯದ ವಿವಿಧೆಡೆಯಿಂದ ಆಗಮಿಸಿದ್ದ ನೂರಾರು ವಿದ್ಯಾರ್ಥಿಗಳು ಇಲ್ಲಿಯ ನವನಗರದಲ್ಲಿರುವ ಕಾನೂನು ವಿಶ್ವವಿದ್ಯಾಲಯದ ಗೇಟ್ ಬಳಿ ಬುಧವಾರ ಪ್ರತಿಭಟನೆ ನಡೆಸಿದ್ದ ವೇಳೆ ಕೆಲವರು ಕುಲಪತಿಯತ್ತ ಮಸಿ ಎಸೆದು ಅತಿರೇಕ ವರ್ತನೆ ಪ್ರದರ್ಶಿಸಿದ ಘಟನೆ ನಡೆಯಿತು.

    ಮೂರು ವರ್ಷದ ಕಾನೂನು ಪದವಿಯ 3 ಮತ್ತು 5ನೇ ಸೆಮಿಸ್ಟರ್ ವಿದ್ಯಾರ್ಥಿಗಳನ್ನು ಪ್ರಮೋಟ್ ಮಾಡಬೇಕು. ಇದನ್ನು ಐದು ವರ್ಷದ ಕೋರ್ಸ್​ನವರಿಗೂ ಅನ್ವಯಿಸಬೇಕು. ಆನ್​ಲೈನ್ ಪರೀಕ್ಷೆ ನಡೆಸಬೇಕು ಎಂಬುದು ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕಳೆದೊಂದು ತಿಂಗಳಿಂದ ವಿವಿ ಎದುರು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದಾರೆ. ವಿದ್ಯಾರ್ಥಿ ಕಾಂಗ್ರೆಸ್ (ಎನ್​ಎಸ್​ಯುುಐ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಬುಧವಾರ ರಾಜ್ಯದ ವಿವಿಧ ಜಿಲ್ಲೆಗಳಿಂದ ಆಗಮಿಸಿದ್ದ ನೂರಾರು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

    ಪ್ರತಿಭಟನಾ ಸ್ಥಳಕ್ಕೆ ಕುಲಪತಿಗಳು ಆಗಮಿಸಬೇಕು. ತಮ್ಮ ಬೇಡಿಕೆ ಈಡೇರಿಸಬೇಕು ಎಂದು ಪಟ್ಟು ಹಿಡಿದ ಹಿನ್ನೆಲೆಯಲ್ಲಿ ಕುಲಪತಿ ಡಾ. ಈಶ್ವರ ಭಟ್ಟ ಅವರು ವಿದ್ಯಾರ್ಥಿಗಳ ಮನವಿ ಸ್ವೀಕರಿಸಲು ಸ್ಥಳಕ್ಕೆ ಬಂದರು.

    ‘ಕಾನೂನು ಪ್ರಕಾರ ಏನು ಸಾಧ್ಯವೋ ಅದನ್ನು ಮಾಡುತ್ತೇವೆ. ಪ್ರಮೋಟ್ ಮಾಡುವುದು ಬಾರ್ ಕೌನ್ಸಿಲ್ ನಿಯಮಕ್ಕೆ ವಿರುದಟಛಿವಾಗುತ್ತದೆ’ ಎಂದು ಹೇಳಿ ಕುಲಪತಿಗಳು ವಾಪಸ್ ತೆರಳುತ್ತಿದ್ದರು. ಈ ಸಂದರ್ಭದಲ್ಲಿ ಕೆಲ ವಿದ್ಯಾರ್ಥಿಗಳು, ಬೇಡಿಕೆಗೆ ಸಮರ್ಪಕ ಉತ್ತರ ಸಿಗುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

    ಕುಲಪತಿ ಡಾ. ಈಶ್ವರ ಭಟ್ಟ ಅವರು ವಾಪಸ್ ಹೋಗುವ ಸಂದರ್ಭದಲ್ಲಿ ಕೆಲ ವಿದ್ಯಾರ್ಥಿಗಳು ಮಸಿ ಎಸೆದರು. ಪರಿಸ್ಥಿತಿ ವಿಕೋಪಕ್ಕೆ ಹೋಗುತ್ತಿದ್ದಂತೆ ಪೊಲೀಸರು ಕುಲಪತಿಯವರನ್ನು ರಕ್ಷಣೆ ಮಾಡಿ ಕಚೇರಿಯತ್ತ ಕರೆದೊಯ್ದರು. 15ಕ್ಕೂ ಹೆಚ್ಚು ವಿದ್ಯಾರ್ಥಿಗಳನ್ನು ವಶಕ್ಕೆ ಪಡೆದರು.

    ಬಂಧನ, ಬಿಡುಗಡೆ: ಕಾನೂನು ವಿವಿ ಕುಲಪತಿ ಈಶ್ವರ ಭಟ್ ಹಾಗೂ ಪೊಲೀಸ್ ಅಧಿಕಾರಿಗಳ ಮೇಲೆ ಮಸಿ ಚೆಲ್ಲಿದ ಆರೋಪದಡಿ ಪೊಲೀಸರು ಎಂಟು ವಿದ್ಯಾರ್ಥಿಗಳನ್ನು ಬಂಧಿಸಿ, ನಂತರ ನೋಟಿಸ್ ಕೊಟ್ಟು ಬಿಡುಗಡೆ ಮಾಡಿದ್ದಾರೆ. ಸರ್ಕಾರಿ ಕರ್ತವ್ಯಕ್ಕೆ ಅಡ್ಡಿ, ಇಂಕ್ ಚೆಲ್ಲಿದ ಆರೋಪದಡಿ ವಿದ್ಯಾರ್ಥಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ಈ ಕುರಿತು ಈಶ್ವರ ಭಟ್ ಅವರು ಎಪಿಎಂಸಿ- ನವನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts