More

    ಕಾಮಗಾರಿ ತ್ವರಿತವಾಗಿ ಮುಗಿಸಿ

    ಹುಬ್ಬಳ್ಳಿ: ಅಭಿವೃದ್ಧಿ ಕಾರ್ಯಗಳಿಗೆ ಸರ್ಕಾರ ಸಾಕಷ್ಟು ಹಣ ಬಿಡುಗಡೆ ಮಾಡಿದೆ. ಇದನ್ನು ಸಂಪೂರ್ಣವಾಗಿ ಬಳಸಿಕೊಳ್ಳಬೇಕು. ತಾಂತ್ರಿಕ ಕಾರಣ ನೀಡಿ ಅಭಿವೃದ್ಧಿ ಕಾರ್ಯಗಳನ್ನು ತಡೆ ಹಿಡಿಯದೆ ತ್ವರಿತವಾಗಿ ಪೂರ್ಣಗೊಳಿಸಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ್ ಸೂಚಿಸಿದರು.

    ಕುಡಿಯುವ ನೀರು ಸರಬರಾಜು, ಪಾಲಿಕೆ ಹಾಗೂ ಸ್ಮಾರ್ಟ್ ಸಿಟಿ ಸೇರಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಕುರಿತು ನಗರದ ಸರ್ಕ್ಯೂಟ್ ಹೌಸ್​ನಲ್ಲಿ ಅಧಿಕಾರಿಗಳೊಂದಿಗೆ ಭಾನುವಾರ ಸಭೆ ನಡೆಸಿ ಅವರು ಮಾತನಾಡಿದರು. ನಗರದ ಹಲವು ಬಡಾವಣೆಗಳಿಗೆ ಏಳು ದಿನಕ್ಕೊಮ್ಮೆ ಕುಡಿಯುವ ನೀರು ಪೂರೈಕೆಯಾಗುತ್ತಿರುವ ಕುರಿತು ಸಾರ್ವಜನಿಕರು ಗಮನಕ್ಕೆ ತಂದಿದ್ದಾರೆ. ನೀರಸಾಗರ, ಮಲಪ್ರಭಾದಲ್ಲಿ ನೀರಿನ ಕೊರತೆಯಿಲ್ಲ. ಆದರೂ ನೀರು ಸರಬರಾಜಿನಲ್ಲಿ

    ಏಕೆ ಹೀಗಾಗುತ್ತಿದೆ ? ಎಂದು ಜಲ ಮಂಡಳಿ ಅಧಿಕಾರಿಗಳು ಹಾಗೂ ಗುತ್ತಿಗೆದಾರರನ್ನು ಪ್ರಶ್ನಿಸಿದರು. ಪೈಪ್​ಲೈನ್ ದುರಸ್ತಿ ಕಾಮಗಾರಿ ನಿಮಿತ್ತ ನೀರು ಪೂರೈಕೆಯಲ್ಲಿ ವ್ಯತ್ಯಯವಾಗಿದೆ ಎಂದು ಅಧಿಕಾರಿಗಳು ತಿಳಿಸಿದರು. ಜಲ ಮಂಡಳಿಯಿಂದ 4 ಕೋಟಿ ರೂ. ಪಾವತಿಯಾಗದೇ ಇರುವುದರಿಂದ ನಿರ್ವಹಣೆ ಕೆಲಸಕ್ಕೆ ತೊಂದರೆಯಾಗುತ್ತಿದೆ ಎಂದು ಗುತ್ತಿಗೆದಾರರು ಸಚಿವರಲ್ಲಿ ಮನವಿ ಮಾಡಿದರು.

    ಅವಳಿ ನಗರದ ಎಲ್ಲ ವಾರ್ಡ್​ಗಳಿಗೆ ನಿರಂತರ ನೀರು ಪೂರೈಕೆ ಮಾಡಲು ಗುತ್ತಿಗೆ ಪಡೆದಿರುವ ಎಲ್ ಆಂಡ್ ಟಿ ಕಂಪನಿ ಸರ್ವೆ ಕಾರ್ಯ ಆರಂಭಿಸಿದೆ. ಕಂಪನಿಗೆ ನೀರು ಪೂರೈಕೆ ವ್ಯವಸ್ಥೆ ಹಸ್ತಾಂತರಿಸುವ ಮುನ್ನಾ ಎಲ್ಲ ಗುತ್ತಿಗೆದಾರರ ಬಾಕಿ ಹಣ ಪಾವತಿ ಮಾಡಲಾಗುವುದು. ಈ ಕುರಿತು ರಾಜ್ಯ ಮಟ್ಟದ ಅಧಿಕಾರಿಗಳೊಂದಿಗೆ ಶೀಘ್ರವಾಗಿ ಸಭೆ ನಡೆಸಲಾಗುವುದು ಎಂದು ಶೆಟ್ಟರ್ ಭರವಸೆ ನೀಡಿದರು.

    ವಿಳಂಬ ಸಲ್ಲದು: ಮಹಾತ್ಮಗಾಂಧಿ ನಗರ ವಿಕಾಸ ಯೋಜನೆಯಡಿ ಅನುದಾನ ಬಿಡುಗಡೆಯಾಗಿದೆ. ಯೋಜನೆಯ ಕಾಮಗಾರಿಗಳಿಗೆ ತ್ವರಿತವಾಗಿ ಕಾರ್ಯಾ ದೇಶ ನೀಡಿ ಎಂದರು.

    ನಗರೋತ್ಥಾನ ಯೋಜನೆಯಡಿ ಸಂಚಾರ ವೃತ್ತಗಳ ಅಭಿವೃದ್ಧಿ, ಸಿಸಿ ಟಿವಿ ಕ್ಯಾಮರಾಗಳ ಅಳವಡಿಕೆ, ಸ್ಮಾರ್ಟ್ ಸಿಟಿ ಯೋಜನೆಯಡಿ ಸಂಚಾರಿ ಗ್ರಂಥಾಲಯ ಸ್ಥಾಪನೆ, ವಿದ್ಯಾನಗರ ಹಾಗೂ ಕಮರೀಪೇಟೆ ಪೊಲೀಸ್ ಠಾಣೆಗಳ ನಿರ್ವಣಕ್ಕೆ ಜಾಗ ಒದಗಿಸುವುದು, ಇತ್ಯಾದಿ ವಿಷಯಗಳ ಕುರಿತು ಬೆಳಗಾವಿ ವಿಭಾಗ ಪ್ರಾದೇಶಿಕ ಆಯುಕ್ತ ಅಮ್ಲಾನ್ ಆದಿತ್ಯ ಬಿಸ್ವಾಸ್ ಹಾಗೂ ಪೊಲೀಸ್ ಆಯುಕ್ತ ಲಾಬುರಾಮ ಅವರು ಸಚಿವರೊಂದಿಗೆ ರ್ಚಚಿಸಿದರು.

    ಜಿಲ್ಲಾಧಿಕಾರಿ ನಿತೇಶ ಪಾಟೀಲ, ಪಾಲಿಕೆ ಆಯುಕ್ತ ಡಾ. ಸುರೇಶ ಇಟ್ನಾಳ, ಸ್ಮಾರ್ಟ್ ಸಿಟಿ ಎಂಡಿ ಶಕೀಲ ಅಹ್ಮದ್, ಕರ್ನಾಟಕ ಜಲ ಮಂಡಳಿ ಇಇ ಡಿ. ಸುರೇಶ, ಇಂಜಿನಿಯರ್ ವಿ.ಟಿ. ಗುಡಿ, ಇತರರು ಇದ್ದರು.</

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts