More

    ಕಾಮಗಾರಿ ಹಣ ಮರು ವಸೂಲಿ ಮಾಡಿ

    ಸಂಶಿ: ಮಳೆಯಿಂದಾಗಿ ಇತ್ತೀಚೆಗೆ ಹುಬ್ಬಳ್ಳಿ- ಲಕ್ಷ್ಮೇಶ್ವರ ರಾಜ್ಯ ಹೆದ್ದಾರಿಯ ಶಿರೂರಿನ ಬಳಿ ಮೇಲ್ಸೇತುವೆ ಕುಸಿದ ಸ್ಥಳಕ್ಕೆ ಸಾರ್ವಜನಿಕರ ಕೋರಿಕೆ ಮೇರೆಗೆ ಭಾನುವಾರ ಕೇಂದ್ರ ಕಲ್ಲಿದ್ದಲು ಸಚಿವ ಪ್ರಲ್ಹಾದ ಜೋಶಿ ಭೇಟಿ ನೀಡಿ ಪರಿಶೀಲಿಸಿದರು.

    ಮೇಲ್ಸೇತುವೆ ಕುಸಿತ, ಪರ್ಯಾಯ ಮಾರ್ಗ ಕಲ್ಪಿಸುವ ಜತೆಗೆ ಸೇತುವೆ ದುರಸ್ತಿ ಕಾಮಗಾರಿ ಬಗೆಗೆ ಸಚಿವ ಜೋಶಿ ಸ್ಥಳೀಯ ಅಧಿಕಾರಿಗಳಿಂದ ಮಾಹಿತಿ ಪಡೆದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹುಬ್ಬಳ್ಳಿ-ಲಕ್ಷ್ಮೇಶ್ವರ ರಾಜ್ಯ ಹೆದ್ದಾರಿಯ ಶಿರೂರ ಗ್ರಾಮದ ಬಳಿ ನಿರ್ವಿುಸಿರುವ ರೈಲ್ವೆ ಮೇಲ್ಸೇತುವೆ ಕಾಮಗಾರಿ ಪೂರ್ಣಗೊಂಡು ಹಸ್ತಾಂತರವಾದ ಅಲ್ಪಾವಧಿಯಲ್ಲೇ ಹಾನಿಗೊಳಗಾಗಿರುವುದು, ಕಳಪೆ ಕೆಲಸಕ್ಕೆ ಸಾಕ್ಷಿ. ಇದನ್ನೇ ಹಸ್ತಾಂತರ ಮಾಡಿದ್ದಾರೆ. ಈ ಕುರಿತು ಮುಖ್ಯಮಂತ್ರಿಗಳು ಹಾಗೂ ಲೋಕೋಪಯೋಗಿ ಸಚಿವರೊಂದಿಗೂ ರ್ಚಚಿಸಲಾಗುವುದು. ವೆಚ್ಚ ಮಾಡಿದ ಹಣ ಮರು ವಸೂಲಿ ಮಾಡಲು ಕ್ರಮ ಕೈಗೊಳ್ಳಬೇಕು ಎಂದು ಇಲಾಖೆ ಅಧಿಕಾರಿಗಳಿಗೆ ತಾಕೀತು ಮಾಡಿದರು.

    ಕಾಮಗಾರಿ ಕೈಗೊಂಡ ಗುತ್ತಿಗೆದಾರರು, ನಿರ್ವಹಿಸಿದ ಅಂದಿನ ಕೆಆರ್​ಡಿಸಿಎಲ್ ಅಧಿಕಾರಿಗಳನ್ನು ಹೊಣೆ ಮಾಡಬೇಕು. ಗುತ್ತಿಗೆದಾರರನ್ನು ಕಪ್ಪು ಪಟ್ಟಿಗೆ ಸೇರಿಸಬೇಕು. ಈ ಕುರಿತು ವಿವರವಾದ ವರದಿಯನ್ನು ಸರ್ಕಾರಕ್ಕೆ ನೀಡಲು ಜಿಲ್ಲಾಧಿಕಾರಿಗಳಿಗೆ ಸೂಚಿಸಿದರು.

    ಎರಡು ತಿಂಗಳೊಳಗೆ ಮೇಲ್ಸೇತುವೆ ದುರಸ್ತಿ ಕಾರ್ಯ ಮಾಡಬೇಕು. ಅಲ್ಲಿಯವರೆಗೆ ವಾಹನ ಸಂಚಾರಕ್ಕೆ ಪರ್ಯಾಯ ಮಾರ್ಗದ ವ್ಯವಸ್ಥೆ ಒದಗಿಸಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ಮಾಡಿದರು. ಶಾಸಕಿ ಕುಸುಮಾವತಿ ಶಿವಳ್ಳಿ, ರಾಜ್ಯ ಕೃಷಿ ಉತ್ಪನ್ನ ರಫ್ತು ನಿಗಮದ ಅಧ್ಯಕ್ಷ

    ಎಸ್.ಐ. ಚಿಕ್ಕನಗೌಡ್ರ, ಬಿಜೆಪಿ ಗ್ರಾಮಾಂತರ ಘಟಕದ ಜಿಲ್ಲಾಧ್ಯಕ್ಷ ಬಸವರಾಜ ಕುಂದಗೋಳಮಠ, ಎಂ.ಆರ್. ಪಾಟೀಲ, ಜಿಲ್ಲಾಧಿಕಾರಿ ನಿತೇಶ ಪಾಟೀಲ, ಲೋಕೋಪಯೋಗಿ ಕಾರ್ಯ ನಿರ್ವಾಹಕ ಇಂಜಿನಿಯರ್ ಎಸ್.ಬಿ. ಚೌಡಣ್ಣವರ ಇತರರು ಉಪಸ್ಥಿತರಿದ್ದರು.

    ವಿಶೇಷ ವರದಿ ಪ್ರಕಟಿಸಿದ್ದ ವಿಜಯವಾಣಿ

    ಮಳೆಯಿಂದಾಗಿ ಶಿರೂರ ಬಳಿಯ ಮೇಲ್ಸೇತುವೆ ಕುಸಿದ ಹಲವು ದಿನಗಳು ಕಳೆದರೂ ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಸೂಕ್ತ ಕ್ರಮಕ್ಕೆ ಮುಂದಾಗದ ಹಿನ್ನೆಲೆ ಈ ಭಾಗದ ವಾಹನ ಸವಾರರು ನಿತ್ಯ ಅನುಭವಿಸುತ್ತಿರುವ ತೊಂದರೆ ಕುರಿತಾಗಿ ಮೇ 24 ರಂದು ‘ಮೇಲ್ಸೇತುವೆ ದುರಸ್ತಿಗೆ ಅನಾದಾರ’ ಎಂಬ ಶೀರ್ಷಿಕೆಯಡಿ ವಿಶೇಷ ವರದಿ ಪ್ರಕಟಿಸಿ ವಾಸ್ತವತೆ ಅನಾವರಣಗೊಳಿಸಿತ್ತು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts