More

    ಕಾಯಂಗೆ ಅತಿಥಿ ಉಪನ್ಯಾಸಕರ ಒತ್ತಾಯ – ಇಂದು ಪಾದಯಾತ್ರೆ 

    ದಾವಣಗೆರೆ: ಅತಿಥಿ ಉಪನ್ಯಾಸಕರ ಕಾಯಂಗೆ ಒತ್ತಾಯಿಸಿ ಜ.1 ರಂದು ತುಮಕೂರು ಸಿದ್ದಗಂಗಾ ಮಠದಿಂದ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದವರೆಗೆ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರ ಸಂಘದ ಜಿಲ್ಲಾಧ್ಯಕ್ಷ ಡಾ. ಕೊಸಗಿ ಶ್ಯಾಮ್‌ಪ್ರಸಾದ್ ತಿಳಿಸಿದರು.
    ಸಿದ್ಧಗಂಗಾ ಮಠದ ಸ್ವಾಮೀಜಿಯವರು ಪಾದಯಾತ್ರೆಗೆ ಚಾಲನೆ ನೀಡುವರು. ಸಂಘದ ರಾಜ್ಯಾಧ್ಯಕ್ಷ ಹನುಮಂತಪ್ಪ ಕಲ್ಮನೆ ಇತರೆ ಮುಖಂಡರು ಭಾಗವಹಿಸುವರು. ಸ್ವಾತಂತ್ರ್ಯ ಉದ್ಯಾನದಲ್ಲಿ ಬೇಡಿಕೆ ಈಡೇರುವವರೆಗೆ ಹೋರಾಟ ನಡೆಸಲಾಗುವುದು ಎಂದು ಭಾನುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
    ಅತಿಥಿ ಉಪನ್ಯಾಸಕರ ಕಾಯಂಗೆ ಒತ್ತಾಯಿಸಿ ನ. 23ರಿಂದ ರಾಜ್ಯಾದ್ಯಂತ ವಿವಿಧ ಹಂತದ ಹೋರಾಟ ನಡೆಸಿದರೂ ಸರ್ಕಾರ ಸ್ಪಂದಿಸುತ್ತಿಲ್ಲ. ಸಿದ್ದರಾಮಯ್ಯ ಅವರು ವಿಪಕ್ಷ ನಾಯಕರಾಗಿದ್ದಾಗ ವೃಂದ ಮತ್ತು ನೇಮಕಾತಿ ಕಾಯ್ದೆಗೆ ತಿದ್ದುಪಡಿ ತಂದು ಅತಿಥಿ ಉಪನ್ಯಾಸಕರನ್ನು ಕಾಯಂಗೊಳಿಸಬಹುದು ಎಂಬುದಾಗಿ ಅಂದಿನ ಸರ್ಕಾರಕ್ಕೆ ಒತ್ತಾಯಿಸಿದ್ದರು. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದಲ್ಲಿ ಕಾಯಂಗೊಳಿಸುವುದಾಗಿ ಹೇಳಿದ್ದರು. ಅದನ್ನು ಈಡೇರಿಸಿ ನಮಗೂ ಕಾಯಂ ಭಾಗ್ಯ ಒದಗಿಸಬೇಕೆಂದು ಒತ್ತಾಯಿಸಿದರು.
    40ಕ್ಕೂ ಹೆಚ್ಚು ದಿನಗಳಿಂದ ತರಗತಿ ಬಹಿಷ್ಕರಿಸಿ ಹೋರಾಟ ನಡೆಸುತ್ತಿದ್ದರೂ ಸ್ಪಂದಿಸದ ಸರ್ಕಾರ ಈಗ ಕಾನೂನು ಅಡ್ಡಿಯ ಬಗ್ಗೆ ಮಾತನಾಡುತ್ತಿದೆ. ಯಾವ ಅಡ್ಡಿ ಇದೆ ಎಂಬುದು ಗೊತ್ತಾಗುತ್ತಿಲ್ಲ. ಕಾಂಗ್ರೆಸ್ ಆಡಳಿತವಿರುವ ರಾಜ್ಯಗಳಲ್ಲಿ ಕಾಯಂ ಮಾಡಲಾ ಗಿದೆ. ಇಡೀ ದೇಶಕ್ಕೆ ಒಂದೇ ಕಾನೂನು ಇರುವಾಗ ರಾಜ್ಯದಲ್ಲೂ ಜಾರಿಗೆ ತರಬೇಕು ಎಂದರು.
    ಕೆ. ಮೋಹನ್ ಮಾತನಾಡಿ, ಉನ್ನತ ಶಿಕ್ಷಣ ಪರಿಷತ್ತು ಅತಿಥಿ ಉಪನ್ಯಾಸಕರಿಗೆ 5 ಸಾವಿರ ವೇತನದ ಹೆಚ್ಚಳ, ಆರೋಗ್ಯ ವಿಮೆ, 60 ವರ್ಷದ ನಂತರ ನಿವೃತ್ತಿ ವೇತನದ ಭರವಸೆ ನೀಡಿದೆ. 60 ವರ್ಷದವರೆಗೆ ನಮಗೆ ಕೆಲಸ ಮಾಡುವ ಅವಕಾಶ ದೊರೆಯುತ್ತದೋ ಇಲ್ಲವೋ ತಿಳಿದಿಲ್ಲ ಎಂದರು.
    ಸುದ್ದಿಗೋಷ್ಠಿಯಲ್ಲಿ ಪ್ರಧಾನ ಕಾರ್ಯದರ್ಶಿ ಎಂ. ಜಗದೀಶ್, ಉಪಾಧ್ಯಕ್ಷೆ ಎಸ್.ಶುಭಾ, ಕಳಕಪ್ಪ ಚೌರಿ, ಎಸ್.ವೈ. ಚಂದ್ರಿಕಾ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts