More

    ಕಾಯಕ ಶರಣರ ಜಯಂತಿ 10ಕ್ಕೆ

    ಚಿತ್ರದುರ್ಗ: ಕಾಯಕ ಶರಣರಾದ ಮಾದರ ಚನ್ನಯ್ಯ, ಧೂಳಯ್ಯ, ಡೋಹರ ಕಕ್ಕಯ್ಯ, ಉರಿಲಿಂಗ ಪೆದ್ದಿ, ಸಮಗಾರ ಹರಳಯ್ಯ ಜಯಂತಿಯನ್ನು ಜಿಲ್ಲಾಡಳಿತದಿಂದ ಫೆ. 10ರಂದು ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ತಿಳಿಸಿದರು.

    ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶನಿವಾರ ಜಯಂತಿ ಆಚರಣೆ ಸಂಬಂಧ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.

    ಅಂದು ಕಾಯಕ ಶರಣರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಕೆ, ಅವರ ವಚನಗಳ ಗೀತಗಾಯನ, ಸಂಪನ್ಮೂಲ ವ್ಯಕ್ತಿಗಳಿಂದ ವಿಶೇಷ ಉಪನ್ಯಾಸ ಆಯೋಜಿಸಲಾಗುವುದು. ಹೀಗಾಗಿ ಜಯಂತಿಗೆ ಅಗತ್ಯ ಸಿದ್ಧತೆ ಕೈಗೊಳ್ಳಿ. ಶಿಷ್ಟಾಚಾರದ ಅನ್ವಯ ಗಣ್ಯರನ್ನು ಆಹ್ವಾನಿಸಿ ಎಂದು ಸಲಹೆ ನೀಡಿದರು.

    ಕಾರ್ಯಕ್ರಮಕ್ಕೂ ಮುನ್ನ ನಗರದ ಮದಕರಿನಾಯಕ ವೃತ್ತದಿಂದ ಭಾವಚಿತ್ರಗಳ ಮೆರವಣಿಗೆ ನಡೆಯಲಿದೆ. ಅಂಬೇಡ್ಕರ್ ವೃತ್ತ, ಪ್ರವಾಸಿ ಮಂದಿರ, ವೀರವನಿತೆ ಒನಕೆ ಓಬವ್ವ ವೃತ್ತ ಮಾರ್ಗವಾಗಿ ಸಂಚರಿಸಿ ಜಿಲ್ಲಾಧಿಕಾರಿ ಕಚೇರಿ ತಲುಪಲಿದೆ. ಕಲಾತಂಡಗಳು ಮೆರುಗು ನೀಡಲಿವೆ ಎಂದರು.

    ಜಯಂತಿಯಲ್ಲಿ ಜಿಲ್ಲಾ, ತಾಲೂಕು ಮಟ್ಟದ ಅಧಿಕಾರಿಗಳು ಕಡ್ಡಾಯವಾಗಿ ಹಾಜರಾಗಬೇಕು. ನಗರದ ಪ್ರಮುಖ ರಸ್ತೆಗಳಲ್ಲಿ ಬ್ಯಾನರ್ ಅಳವಡಿಸಬೇಕು ಎಂದು ಮುಖಂಡರಾದ ಡಿ.ಎನ್.ಮೈಲಾರಪ್ಪ, ಬಿ.ರಾಜಪ್ಪ ಸಭೆಗೆ ಮನವಿ ಮಾಡಿದರು.

    ವಿವಿಧ ಸಂಘ, ಸಮುದಾಯಗಳ ಮುಖಂಡರಾದ ಎಂ.ತಿಪ್ಪೇಸ್ವಾಮಿ, ಅಣ್ಣಪ್ಪ, ಆನಂದಕುಮಾರ್, ನಿವೃತ್ತ ಪ್ರಾಧ್ಯಾಪಕ ಪ್ರೊ.ನಾಗರಾಜಪ್ಪ, ತಹಸೀಲ್ದಾರ್ ಡಾ. ನಾಗವೇಣಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಎಸ್.ಕೆ.ಮಲ್ಲಿಕಾರ್ಜುನ, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಹರೀಶ್, ಶಿಕ್ಷಣ ಇಲಾಖೆಯ ಚಿದಾನಂದ, ನಗರಸಭೆಯ ಪುಟ್ಟಪ್ಪ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts