More

    ಕಾಯ್ದೆಗಳ ವಿರುದ್ಧ ಸಿಡಿದೆದ್ದ ರೈತರು

    ಕಲಬುರಗಿ: ರೈತರು ಮತ್ತು ಕೃಷಿ ಕೂಲಿ ಕಾರ್ಮಿಕರನ್ನು ಬೀದಿಗೆ ತಳ್ಳುವಂತಹ ಭೂ ಸುಧಾರಣೆ ಕಾಯ್ದೆ ಮತ್ತು ಎಪಿಎಂಸಿ ಕಾಯ್ದೆಗಳ ತಿದ್ದುಪಡಿ ಮಾಡಿರುವ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ತಮ್ಮ ನಿರ್ಧಾರದಿಂದ ಹಿಂದೆ ಸರಿಯಬೇಕೆಂದು ಆಗ್ರಹಿಸಿ ನಗರದಲ್ಲಿ ಶುಕ್ರವಾರ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ರೈತರು ಹೋರಾಟ ನಡೆಸಿದರು. ಕೆಲವರು ಪ್ರತ್ಯೇಕ ಪ್ರತಿಭಟನೆ ಮೂಲಕ ಸರ್ಕಾರದ ನಡೆಗೆ ಆಕ್ರೋಶ ವ್ಯಕ್ತಪಡಿಸಿದರು.
    ಕಾರ್ಪೊರೇಟ್ ಕಂಪನಿಗಳ ಪರವಾಗಿರುವಂತೆ ಮಸೂದೆಗಳನ್ನು ರೂಪಿಸಿ ಜಾರಿಗೆ ತರಲು ಹೊರಟಿರುವ ಕೇಂದ್ರ ಸರ್ಕಾರ ಬಿಜೆಪಿ ಅಧಿಕಾರದಲ್ಲಿರುವ ರಾಜ್ಯಗಳಿಗೂ ಈ ಬಗ್ಗೆ ಸೂಚನೆ ನೀಡಿದೆ. ಸುಗ್ರೀವಾಜ್ಞೆಗಳ ಮೂಲಕ ರೂಪಿಸಿರುವ ಎಲ್ಲ 11 ಕಾಯ್ದೆಗಳನ್ನು ರದ್ದುಗೊಳಿಸಬೇಕು ಎಂದು ಒಕ್ಕೊರಲಿನಿಂದ ಆಗ್ರಹಿಸಿದರು.
    ಅಖಿಲ ಭಾರತ ಕಿಸಾನ ಸಂಘರ್ಷ ಸಮನ್ವಯ ಸಮಿತಿ ನೇತೃತ್ವದಲ್ಲಿ ಜಗತ್ ವೃತ್ತದಲ್ಲಿ ಸುಮಾರು ನಾಲ್ಕು ತಾಸು ಪ್ರತಿಭಟನೆ ಮತ್ತು ಧರಣಿ ನಡೆಯಿತು. ಮಾನವ ಸರಪಳಿ ನಿರ್ಮಿಸಿ ರೈತ ಮತ್ತು ಜನವಿರೋಧಿ ಕಾಯ್ದೆಗಳನ್ನು ಯಾವ ಕಾರಣಕ್ಕೂ ಜಾರಿಗೊಳಿಸಬಾರದು ಎಂದು ಜಿಲ್ಲಾಧಿಕಾರಿ ಮೂಲಕ ಪ್ರಧಾನಿಗೆ ಮನವಿಪತ್ರ ಸಲ್ಲಿಸಲಾಯಿತು.
    ಅಗತ್ಯ ವಸ್ತುಗಳ ತಿದ್ದುಪಡಿ ಮಸೂದೆ, ವಿದ್ಯುತ್ ತಿದ್ದುಪಡಿ ಕಾಯ್ದೆ, ಭೂ ಸುಧಾರಣಾ, ಎಪಿಎಂಸಿ ಕಾಯ್ದೆಗಳನ್ನು ಬಿಜೆಪಿ ರಾಜ್ಯಸಭೆಯಲ್ಲಿ ಅಂಗೀಕರಿಸುವ ಮೂಲಕ ರೈತರನ್ನು ಹಾಳು ಮಾಡಲು ಹೊರಟಿದೆ. ಕೂಡಲೇ ಎಲ್ಲ ಕಾಯ್ದೆಗಳನ್ನು ಹಿಂಪಡೆಯಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.
    ಎಐಕೆಎಸ್ ಜಿಲ್ಲಾಧ್ಯಕ್ಷ ಭೀಮಾಶಂಕರ ಮಾಡಿಯಾಳ, ಆರ್ಕೆಎಸ್ ಕಾರ್ಯದರ್ಶಿ ಮಹೇಶ ಎಸ್.ಬಿ., ಆರ್ಪಿಐ ಜಿಲ್ಲಾಧ್ಯಕ್ಷ ಎ.ಬಿ. ಹೊಸಮನಿ, ಕೆಪಿಆರ್ಎಸ್ ಜಿಲ್ಲಾಧ್ಯಕ್ಷ ಶರಣಬಸಪ್ಪ ಮಮಶೆಟ್ಟಿ, ಕೆಆರ್ಆರ್ ಅಧ್ಯಕ್ಷ ಬಸುಗೌಡ ಬಿರಾದಾರ ಇತರರಿದ್ದರು.

    ಕೋಟ್
    ಜನರು ಕರೊನಾದಿಂದ ಸಂಕಷ್ಟಕ್ಕೆ ಸಿಲುಕಿ ಪರದಾಡುತ್ತಿದ್ದರೆ, ಬಿಜೆಪಿ ಸಕರ್ಾರ ಅದನ್ನೇ ಬಂಡವಾಳ ಮಾಡಿಕೊಂಡು ರೈತ, ಕಾಮರ್ಿಕರ ವಿರೋಧಿ ಕಾಯ್ದೆಗಳನ್ನು ಸುಗ್ರೀವಾಜ್ಞೆ ಮೂಲಕ ಜಾರಿಗೊಳಿಸಿದೆ. ಅಲ್ಲದೆ ಈಗ ಬಲಪ್ರಯೋಗಿಸಿ ರೈತರ ಹೋರಾಟ ಹತ್ತಿಕ್ಕುವ ಮೂಲಕ ಸದನದಲ್ಲಿ ಒಪ್ಪಿಗೆ ಪಡೆಯುವಂಥ ದುಷ್ಟ ಕೆಲಸ ಮಾಡುತ್ತಿರುವುದು ಸರಿಯಲ್ಲ. ಸಕರ್ಾರದ ನಡೆ ಹೀಗೇ ಮುಂದುವರಿದರೆ ಜನರು ತಕ್ಕಪಾಠ ಕಲಿಸುತ್ತಾರೆ.
    | ಮಹೇಶ ಎಸ್.ಬಿ.
    ಆರ್ಕೆಎಸ್ ಜಿಲ್ಲಾ ಕಾರ್ಯದಶರ್ಿ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts