More

    ಕಾಯ್ದೆ ತಿದ್ದುಪಡಿ ವಿರೋಧಿಸಿ ಪ್ರತಿಭಟನೆ

    ಜಮಖಂಡಿ: ಭೂಸುಧಾರಣೆ, ಎಪಿಎಂಸಿ ಹಾಗೂ ಕಾರ್ಮಿಕ ಕಾಯ್ದೆ ತಿದ್ದುಪಡಿ ವಿರೋಧಿಸಿ, ಉತ್ತರ ಪ್ರದೇಶದ ಅತ್ಯಾಚಾರ, ಕೊಲೆ ಘಟನೆ ಹಾಗೂ ರಾಷ್ಟ್ರೀಯ ನಾಯಕರಾದ ರಾಹುಲ್ ಗಾಂಧಿ, ಪ್ರೀಯಾಂಕಾ ಗಾಂಧಿ ಮೇಲಿನ ಪೊಲೀಸ್ ದೌರ್ಜನ್ಯ ಖಂಡಿಸಿ ಬ್ಲಾಕ್ ಕಾಂಗ್ರೆಸ್ ಸಮಿತಿ ಆಶ್ರಯದಲ್ಲಿ ಪಕ್ಷದ ಮುಖಂಡರು ಕಾರ್ಯಕರ್ತರು ನಗರದ ದೇಸಾಯಿ ಸರ್ಕಲ್‌ನಲ್ಲಿ ಮಾನವ ಸರಪಳಿ ನಿರ್ಮಿಸಿ ಕೆಲ ಕಾಲ ರಸ್ತೆ ಸಂಚಾರ ತಡೆದು ಪ್ರತಿಭಟನೆ ನಡೆಸಿದರು.

    ನಗರದ ಹಳೇ ತಹಸೀಲ್ದಾರ್ ಕಚೇರಿ ಆವರಣದಿಂದ ದೇಸಾಯಿ ವೃತ್ತವರೆಗೆ ಸರ್ಕಾರದ ವಿರುದ್ಧ ಘೊಷಣೆ ಕೂಗುತ್ತ ಪ್ರತಿಭಟನಾ ಮೆರವಣಿಗೆ ನಡೆಸಿ ಗ್ರೇಡ್-2 ತಹಸೀಲ್ದಾರ್ ಎ.ಕೆ.ಇಂಡಿಕರ್ ಮೂಲಕ ರಾಷ್ಟ್ರಪತಿ ಹಾಗೂ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.

    ಶಾಸಕ ಆನಂದ ನ್ಯಾಮಗೌಡ ಮಾತನಾಡಿ, ದೇಶ ಮತ್ತು ರಾಜ್ಯದಲ್ಲಿ ರೈತ ವಿರೋಧಿ ಸರ್ಕಾರ ಇದೆ. ಸುಗ್ರೀವಾಜ್ಞೆ ಹೊರಡಿಸಿ ರೈತರನ್ನು ನಿರ್ಣಾಮ ಮಾಡುವ ಕಾಯ್ದೆ ಜಾರಿಗೆ ತಂದಿದ್ದಾರೆ ಎಂದು ಆರೋಪಿಸಿದರು.

    ಉತ್ತರ ಪ್ರದೇಶದಲ್ಲಿ ಯುವತಿಯ ಮೇಲೆ ಗ್ಯಾಂಗ್ ರೇಪ್ ಮಾಡಿ ವಿಕೃತಿ ಮೆರೆದು ಕೊಲೆ ಮಾಡಿದವರನ್ನೇ ಬಚಾವ್ ಮಾಡುವ ಹುನ್ನಾರ ನಡೆದಿದೆ. ಇಂಥವರಿಗೆ ಜನರು ತಕ್ಕ ಪಾಠ ಕಲಿಸಬೇಕು. ಸಂತ್ರಸ್ತೆ ಕುಟುಂಭಸ್ಥರಿಗೆ ಸಾಂತ್ವನ ಹೇಳಲು ಹೋಗಿದ್ದ ರಾಹುಲ್ ಗಾಂಧಿ, ಪ್ರೀಯಾಂಕಾ ಗಾಂಧಿ ಅವರ ಮೇಲೆ ಪೊಲೀಸರು ದೌರ್ಜನ್ಯ ಎಸಗಿದ್ದಾರೆ. ಅವರ ಮೇಲೆ ಕ್ರಿಮಿನಲ್ ಮೊಕದ್ದಮೆ ದಾಖಲಿಸಿ ಬಂಧಿಸಿ ಶಿಕ್ಷೆಗೆ ಗುರಿಪಡಿಸಬೇಕು ಎಂದು ಆಗ್ರಹಿಸಿದರು.

    ಜವಳಿ ನಿಗಮದ ಮಾಜಿ ಉಪಾಧ್ಯಕ್ಷ ನಜೀರ ಕಂಗನೊಳ್ಳಿ, ಹಿರಿಯ ಮುಖಂಡ ಎನ್.ಎಸ್.ದೇವರವರ, ರವಿ ಯಡಹಳ್ಳಿ ಮಾತನಾಡಿದರು. ಬ್ಲಾಕ್ ಕಾಂಗ್ರೆಸ್ ಕಮಿಟಿ ಅಧ್ಯಕ್ಷ ವರ್ಧಮಾನ ನ್ಯಾಮಗೌಡ, ದಾನೇಶ ಘಾಟಗೆ, ರಾಜು ಪಿಸಾಳ, ಬಸವರಾಜ ನ್ಯಾಮಗೌಡ, ಪರಮಾನಂದ ಗವರೋಜಿ, ರಾಜು ಕಡಕೋಳ, ಬಸು ಹರಕಂಗಿ, ಅಬುಬಕರ ಕುಡಚಿ, ಹೂವಪ್ಪ ಉಷಾಕರ, ರಾಮಣ್ಣ ಕಡಕೋಳ, ಮುತ್ತಣ್ಣ ಮೇತ್ರಿ, ಮೀರಾ ಒಚಿಟಮೂರಿ, ಅಕ್ಬರ್ ಜಮಾದಾರ ಇತರರು ಇದ್ದರು.





    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts