More

    ಕಾರಂಜಾ ಸಂತ್ರಸ್ತರ ಪರ ಸರ್ಕಾರದ ಮೇಲೆ ಒತ್ತಡ

    ಬೀದರ್: ಜಿಲ್ಲೆಯ ಕಾರಂಜಾ ಜಲಾಶಯದಲ್ಲಿ ಭೂಮಿ ಕಳೆದುಕೊಂಡ ಸಂತ್ರಸ್ತರಿಗೆ ಸೂಕ್ತ ಪರಿಹಾರ ಸೇರಿ ವಿವಿಧ ಬೇಡಿಕೆ ಈಡೇರಿಸಲು ಸಕರ್ಾರದ ಮೇಲೆ ಒತ್ತಡ ಹಾಕುವೆ ಎಂದು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಭರವಸೆ ನೀಡಿದರು.

    ಜಿಲ್ಲಾ ಉಸ್ತುವಾರಿ ಸಚಿವರ ಕಚೇರಿ ಎದುರು ಅಹೋರಾತ್ರಿ ಧರಣಿ ನಡೆಸುತ್ತಿರುವ ಕಾರಂಜಾ ಸಂತ್ರಸ್ತರ ಬಳಿ ಶುಕ್ರವಾರ ತೆರಳಿ ಮನವಿ ಸ್ವೀಕರಿಸಿದ ಅವರು, ಸೂಕ್ತ ಪರಿಹಾರ ಒದಗಿಸಬೇಕೆಂಬ ಬೇಡಿಕೆಯೊಂದಿಗೆ ರೈತರು ನಿರಂತರ ಹೋರಾಟ ನಡೆಸುತ್ತಿದ್ದೀರಿ. ಶಾಸಕ ಖಾಶೆಂಪುರ ಸಹ ಮಾಹಿತಿ ನೀಡಿದ್ದಾರೆ. ರೈತರ ಸಮಸ್ಯೆ ಪರಿಹರಿಸುವ ನಿಟ್ಟಿನಲ್ಲಿ ಸಕರ್ಾರದ ಗಮನ ಸೆಳೆಯುವಂಥ ಕೆಲಸ ಮಾಡಿದರೂ ಸ್ಪಂದಿಸಿಲ್ಲ. ರಾಜ್ಯ ಸಕರ್ಾರ ರೈತ ವಿರೋಧಿಯಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

    ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ. ಇಬ್ರಾಹಿಂ ಮಾತನಾಡಿ, ಬಿಜೆಪಿ ಸಕರ್ಾರ ರೈತರ ವಿಷಯದಲ್ಲಿ ನಿರ್ಲಕ್ಷ್ಯ ವಹಿಸುತ್ತಿದೆ. ಹತ್ತು ಹಲವು ಸಮಸ್ಯೆಗಳಿದ್ದರೂ ಸ್ಪಂದಿಸುತ್ತಿಲ್ಲ. ಬಿಜೆಪಿಗೆ ತಕ್ಕಪಾಠ ಕಲಿಸಬೇಕಾಗಿದೆ. ಜೆಡಿಎಸ್ ರೈತರ, ಬಡವರ, ಶ್ರಮಿಕರ ಪಕ್ಷವಾಗಿದೆ. ಬರುವ ಚುನಾವಣೆಯಲ್ಲಿ ಅಧಿಕಾರಕ್ಕೆ ಬಂದರೆ ರೈತರ ಸಮಸ್ಯೆಗಳಿಗೆ ಸ್ಪಂದಿಸಿ ನೀರಾವರಿ ಯೋಜನೆಗಳಿಗೆ ಆದ್ಯತೆ ನೀಡಲಾಗುವುದು ಎಂದರು.

    ಶಾಸಕ ಬಂಡೆಪ್ಪ ಖಾಶೆಂಪುರ ಮಾತನಾಡಿ, ಕಾರಂಜಾ ಸಂತ್ರಸ್ತರ ಪರವಾಗಿ ಹಲವು ಬಾರಿ ಸಿಎಂ, ಸಚಿವರೊಂದಿಗೆ ಮಾತನಾಡಿದ್ದೇನೆ. ವಿಧಾನಸಭೆಯಲ್ಲೂ ಧ್ವನಿ ಎತ್ತಿದ್ದರೂ ಸ್ಪಂದನೆ ಸಿಕ್ಕಿಲ್ಲ. ರೈತರ ಹೋರಾಟದ ಪರವಾಗಿ ನಾನಿದ್ದೇನೆ ಎಂದು ಅಭಯ ನೀಡಿದರು.

    ಶಾಸಕ ವೆಂಕಟರಾವ ನಾಡಗೌಡ, ರಾಜಾ ವೆಂಕಟಪ್ಪ ನಾಯಕ, ಸಂತ್ರಸ್ತರ ಹೋರಾಟ ಸಮಿತಿ ಅಧ್ಯಕ್ಷ ಚಂದ್ರಶೇಖರ ಪಾಟೀಲ್ ಹೊಚಕನಳ್ಳಿ, ಪ್ರಧಾನ ಕಾರ್ಯದಶರ್ಿ ನಾಗಶೆಟ್ಟೆಪ್ಪ, ವೀರಭದ್ರಪ್ಪ ಉಪ್ಪಿನ್, ದಯಾನಂದ ಸ್ವಾಮಿ ಇತರರಿದ್ದರು.

    ಎಕರೆಗೆ 20 ಲಕ್ಷ ರೂ. ಪರಿಹಾರ ಸೇರಿ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಕಾರಂಜಾ ಮುಳುಗಡೆ ಸಂತ್ರಸ್ತರ ಹಿತರಕ್ಷಣಾ ಸಮಿತಿಯು ಜಿಲ್ಲಾ ಉಸ್ತುವಾರಿ ಸಚಿವರ ಕಚೇರಿ ಎದುರು 30 ದಿನಗಳಿಂದ ಅಹೋರಾತ್ರಿ ಧರಣಿ ನಡೆಸುತ್ತಿದ್ದರೂ ಈವರೆಗೆ ಸ್ಪಂದನೆ ಸಿಕ್ಕಿಲ್ಲ.
    | ಚಂದ್ರಶೇಖರ ಪಾಟೀಲ್ ಹೊಚಕನಳ್ಳಿ, ಸಂತ್ರಸ್ತರ ಹಿತರಕ್ಷಣಾ ಸಮಿತಿ ಅಧ್ಯಕ್ಷ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts