More

    ಕಾರು ಇದ್ದವರಿಗೆ ಬಿಪಿಎಲ್ ಕಾರ್ಡ್ ರದ್ದತಿ ನಿರ್ಣಯವಾಗಿಲ್ಲ: ಸಚಿವ ಕೆ.ಎಚ್. ಮುನಿಯಪ್ಪ

    ದಾವಣಗೆರೆ: ಕಾರು ಇದ್ದವರಿಗೆ ಬಿಪಿಎಲ್ ಕಾರ್ಡ್ ರದ್ದುಪಡಿಸುವ ವಿಚಾರ ತೀರ್ಮಾನವಾಗಿಲ್ಲ. ಎಪಿಎಲ್-ಬಿಪಿಎಲ್ ಕಾರ್ಡ್‌ಗಳ ವಿತರಣೆ ನಂತರದಲ್ಲಿ ಪರಿಷ್ಕರಣೆ ಮಾಡಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಆಹಾರ, ನಾಗರಿಕ ಸರಬರಾಜು ಸಚಿವ ಕೆ.ಎಚ್. ಮುನಿಯಪ್ಪ ಹೇಳಿದರು.
    ದಾವಣಗೆರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ ಅನ್ನಭಾಗ್ಯ ಯೋಜನೆಯಡಿ ಅಕ್ಕಿ ಬದಲಾಗಿ ನೀಡುವ, ಆಗಸ್ಟ್ ತಿಂಗಳ ಹಣವನ್ನು ವಾರದೊಳಗಾಗಿ ಬಿಪಿಎಲ್ ಕಾರ್ಡ್‌ದಾರರ ಖಾತೆಗೆ ಜಮೆ ಮಾಡಲಾಗುವುದು ಎಂದು ಹೇಳಿದರು.
    ರಾಜ್ಯದಲ್ಲಿ 1.28 ಕೋಟಿ ಬಿಪಿಎಲ್ ಕಾರ್ಡ್‌ಗಳಿದ್ದು, ಇದರಲ್ಲಿ 1.10 ಕೋಟಿ ಕಾರ್ಡ್‌ಗೆ ಜುಲೈನ ಹಣ ಜಮೆಯಾಗಿದೆ. ಬ್ಯಾಂಕ್ ಖಾತೆ ಇರದ 21 ಲಕ್ಷ ಕಾರ್ಡ್‌ದಾರರಿದ್ದು, ಇದರಲ್ಲಿ 7-10 ಲಕ್ಷ ಕಾರ್ಡ್‌ದಾರರಿಗೆ ಖಾತೆ ಮಾಡಿಸಿಕೊಡಲಾಗಿದೆ. ಉಳಿದವರಿಗೂ ಬ್ಯಾಂಕ್ ಖಾತೆ ಮಾಡಿಸಿದ ಬಳಿಕ ವಾರದೊಳಗೆ ಹಣ ಜಮೆ ಮಾಡಲಾಗುವುದು ಎಂದು ತಿಳಿಸಿದರು.
    ಶೀಘ್ರವೇ ಅಕ್ಕಿ ವಿತರಣೆ ಕಾರ್ಯಕ್ರಮ ನಡೆಯಲಿದ್ದು ಇದರಲ್ಲಿ ಯಾವುದೇ ಗೊಂದಲವಿಲ್ಲ. ರಾಜ್ಯ ಸರ್ಕಾರದ 5ನೇ ಗ್ಯಾರಂಟಿ ಯೋಜನೆ ಯುವನಿಧಿ ಡಿಸೆಂಬರ್‌ನಲ್ಲಿ ಜಾರಿಗೊಳಿಸಲಾಗುವುದು ಎಂದು ಹೇಳಿದರು.
    ಬಿಜೆಪಿ-ಜೆಡಿಎಸ್ ತೊರೆದು ಕಾಂಗ್ರೆಸ್‌ನತ್ತ ಬರುವವರು ನನ್ನ ಸಂಪರ್ಕದಲ್ಲಿ ಯಾರೂ ಇಲ್ಲ. ಯಾರೇ ಬಂದರೂ ಪಕ್ಷದ ಹೈಕಮಾಂಡ್ ನಿರ್ಧಾರ ಕೈಗೊಳ್ಳಲಿದೆ ಎಂದರು. ಲೊಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ 20ಕ್ಕೂ ಹೆಚ್ಚು ಸ್ಥಾನಗಳಲ್ಲಿ ಗೆಲುವು ಸಾಧಿಸಲಿದೆ ಎಂದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts