

ಸುಂಟಿಕೊಪ್ಪ: ಮಂಜನಾಥಯ್ಯ ಮೀನಾಕ್ಷಮ್ಮ ಕಲ್ಯಾಣ ಮಂಟಪದಲ್ಲಿ ಕಾರ್ಗಿಲ್ ವಿಜಯ ದಿವಸದ ಅಂಗವಾಗಿ ಬುಧವಾರ ಆಯೋಜಿಸಿದ್ದ ಕಾರ್ಯಕ್ರಮವನ್ನು ಹರದೂರು ಗ್ರಾಮ ಪಂಚಾಯಿತಿಯ ಅಧ್ಯಕ್ಷ ಬಿ.ಡಿ.ಪದ್ಮನಾಭ ಚಾಲನೆ ನೀಡಿದರು.
ಸುಂಟಿಕೊಪ್ಪ ನಾಡು ಪ್ರೌಢಶಾಲೆಯ ವಿದ್ಯಾರ್ಥಿನಿ ಎ.ಎಸ್.ಶ್ರೀಶಾ ಕಾರ್ಗಿಲ್ ಕಾರ್ಗಿಲ್ ವಿಜಯ ದಿವಸ ಮಾತ್ರವಲ್ಲದೆ ಈ ಯುದ್ಧದಲ್ಲಿ ಹುತಾತ್ಮರಾದಂತಹ 527 ವೀರ ಯೋಧರನ್ನು ನೆನೆಯುವ ಮತ್ತು ಅವರಿಗೆ ನಮನಗಳನ್ನು ಸಲ್ಲಿಸುವ ಕಾರ್ಯಕ್ರಮವನ್ನು ಮುಂದಿನ ದಿನಗಳಲ್ಲಿ ಸರ್ಕಾರ ಗಮನಹರಿಸಿ ಜಿಲ್ಲಾಡಳಿತ ವತಿಯಿಂದ ಸರ್ಕಾರಿ ಕಾರ್ಯಕ್ರಮವಾಗಿ ನಡೆಸುವಂತಾಗಬೇಕು ಎಂದು ಮನವಿ ಮಾಡಿದರು.
ಕಾರ್ಯಕ್ರಮದಲ್ಲಿ ಮಲ್ಟಿ ಮಿಡಿಯದ ಸಿಬ್ಬಂದಿ, ಸುಂಟಿಕೊಪ್ಪದ ಸೈನಿಕರು, ಮಾಜಿ ಸೈನಿಕರು ಪಾಲ್ಗೊಂಡಿದರು.