More

    ಕಾರ್ಮಿಕ ವಿರೋಧಿ ಕಾನೂನುಗಳನ್ನು ವಿರೋಧಿಸಿ ಜೆಸಿಟಿಯು ಪ್ರತಿಭಟನೆ 

    ದಾವಣಗೆರೆ: ಕೇಂದ್ರ ಸರ್ಕಾರವು ರೈತ-ಕಾರ್ಮಿಕರ ಪರವಾಗಿ ಕಾನೂನುಗಳನ್ನು ಜಾರಿಗೆ ತರುವ ಬದಲಾಗಿ ಬಂಡವಾಳಶಾಹಿ ಕಂಪನಿಗಳ ಹಿತಾಸಕ್ತಿ ಕಾಪಾಡುತ್ತಿದೆ ಎಂದು ಆರೋಪಿಸಿ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿಯ ಜಿಲ್ಲಾ ಘಟಕದ ಪದಾಧಿಕಾರಿಗಳು ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು.
    ಜಿಲ್ಲಾ ಮುಖಂಡ ಎಚ್.ಜಿ. ಉಮೇಶ್ ಮಾತನಾಡಿ, ಭಾರತದಲ್ಲಿ ಈ ಮೊದಲು ಜಾರಿಯಲ್ಲಿದ್ದ ರೈತ ಮತ್ತು ಕಾರ್ಮಿಕರ ಪರಪಾದ ಕಾನೂನುಗಳನ್ನು ಕೇಂದ್ರ ಸರ್ಕಾರ ಕಿತ್ತುಹಾಕುತ್ತಿದೆ. ರೈತ ವಿರೋಧಿಯಾದ ಕೃಷಿ ಮಸೂದೆ ಜಾರಿಗೆ ತಂದು ಕಾರ್ಪೊರೇಟ್ ಕಂಪನಿಗಳಿಗೆ ಅನುಕೂಲ ಮಾಡಿಕೊಟ್ಟಿದೆ ಎಂದು ಕಿಡಿಕಾರಿದರು.
    ದೆಹಲಿಯ ಹೊರವಲಯದಲ್ಲಿ ಆಯೋಜಿಸಿದ್ದ ರಾಜಿರಹಿತ ಹೋರಾಟದಿಂದಾಗಿ ಕೇಂದ್ರ ಸರ್ಕಾರವು ತಾತ್ಕಾಲಿಕವಾಗಿ ಹಿಂಪಡೆದಿದ್ದ ಕಾನೂನನ್ನು ಮರು ಜಾರಿಗೊಳಿಸಲು ಹೊರಟಿದೆ. ಕಾರ್ಮಿಕ ವಿರೋಧಿ ನಾಲ್ಕು ಸಂಹಿತೆ ಜಾರಿಗೊಳಿಸಿದ್ದರ ಪರಿಣಾಮವಾಗಿ ಕಾರ್ಖಾನೆ ಕಾರ್ಮಿಕರ ಕೆಲಸದ ಅವಧಿ 8 ರಿಂದ 12 ಗಂಟೆಗೆ ಏರಿಕೆಯಾಗಿದೆ. ಈ ಎಲ್ಲಾ ಕಾರ್ಮಿಕ ವಿರೋಧಿ ಕಾನೂನುಗಳನ್ನು ಹಿಂಪಡೆಯಬೇಕು ಎಂದು ಒತ್ತಾಯಿಸಿದರು.
    ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ ಆ.9ರ ಕ್ವಿಟ್ ಇಂಡಿಯಾ ಚಳವಳಿ ದಿನದಂದು ದೇಶಾದ್ಯಂತ ಕಾರ್ಮಿಕ ಸಂಘಟನೆಗಳು ಹೋರಾಟ ಹಮ್ಮಿಕೊಂಡಿದೆ. ಅದರ ಪೂರ್ವಭಾವಿಯಾಗಿ ದಾವಣಗೆರೆಯ ಭಿತ್ತಿಪತ್ರ ಬಿಡುಗಡೆ ಮಾಡಲಾಗಿದೆ ಎಂದು ಪ್ರಾಧ್ಯಾಪಕ ಪ್ರೊ.ಎ.ಬಿ.ರಾಮಚಂದ್ರಪ್ಪ ತಿಳಿಸಿದರು.
    ಪ್ರತಿಭಟನೆಯಲ್ಲಿ ಮುಖಂಡರಾದ ಕೆ.ಎಚ್.ಆನಂದರಾಜ್, ಶ್ರೀನಿವಾಸ್, ಸತೀಶ್ ಅರವಿಂದ, ಮಧು ತೊಗಲೇರಿ, ಐರಣಿ ಚಂದ್ರು, ಅಭಿಷೇಕ್, ತಿಪ್ಪೇಶ್ ಆವರಗೆರೆ, ಪವಿತ್ರಾ, ಆದಿಲ್ ಖಾನ್, ಬಾನಪ್ಪ ಇತರರು ಪಾಲ್ಗೊಂಡಿದ್ದರು.
    —-

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts