More

    ಕಾರ್ಯಕರ್ತರ ಮೇಲೆ ಹಲ್ಲೆಗೆ ಖಂಡನೆ

    ರಾಮದುರ್ಗ: ಚುನಾವಣೆ ಫಲಿತಾಂಶ ಪ್ರಕಟವಾಗುತ್ತಿದ್ದಂತೆ ಪಶ್ಚಿಮ ಬಂಗಾಳದಲ್ಲಿ ಟಿಎಂಸಿ ಕಾರ್ಯಕರ್ತರು ಬಿಜೆಪಿ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿದ ಘಟನೆ ಖಂಡಿಸಿ ಬಿಜೆಪಿ ತಾಲೂಕು ಘಟಕದ ನೇತೃತ್ವದಲ್ಲಿ ತಹಸೀಲ್ದಾರ್ ಮೂಲಕ ರಾಷ್ಟ್ರಪತಿಗಳಿಗೆ ಬುಧವಾರ ಮನವಿ ಸಲ್ಲಿಸಿದರು.

    ಹಲ್ಲೆಯಿಂದ ನೂರಾರು ಬಿಜೆಪಿ ಕಾರ್ಯಕರ್ತರು ತೀವ್ರವಾಗಿ ಗಾಯಗೊಂಡಿದ್ದಾರೆ. ಕೆಲ ಮಹಿಳಾ ಕಾರ್ಯಕರ್ತರ ಮೇಲೆಯೂ ಹಲ್ಲೆ ಪ್ರಯತ್ನ ನಡೆದಿವೆ. ಐದು ವರ್ಷಗಳಲ್ಲಿ 140ಕ್ಕೂ ಹೆಚ್ಚು ಬಿಜೆಪಿ ಕಾರ್ಯಕರ್ತರು ದೌರ್ಜನ್ಯಕ್ಕೆ ಬಲಿಯಾಗಿದ್ದಾರೆ. ಫಲಿತಾಂಶ ಪ್ರಕಟಗೊಂಡ ಕೆಲವೇ ದಿನಗಳಲ್ಲಿ ಬಿಜೆಪಿ ಕಾರ್ಯಕರ್ತರ ಮನೆ, ಕಚೇರಿ ಮೇಲೆ ದಾಳಿ ನಡೆಯುತ್ತಿವೆ. ರಾಷ್ಟ್ರಪತಿಗಳು ಕೂಡಲೇ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರುದ್ಧ ಕಾನೂನು ಕ್ರಮಕ್ಕೆ ಆದೇಶ ಹೊರಡಿಸಬೇಕು. ರಾಜ್ಯಪಾಲರ ಆಡಳಿತ ಜಾರಿಗೆ ಮುಂದಾಗಬೇಕು ಎಂದು ಮನವಿ ಮೂಲಕ ಆಗ್ರಹಿಸಿದರು.

    ಧನಲಕ್ಷ್ಮೀ ಸಹಕಾರಿ ಸಕ್ಕರೆ ಕಾರ್ಖಾನೆ ಅಧ್ಯಕ್ಷ ಮಲ್ಲಣ್ಣ ಯಾದವಾಡ, ಪಶ್ಚಿಮ ಬಂಗಾಳದಲ್ಲಿ ನಡೆಯುತ್ತಿರುವ ಹಲ್ಲೆ ಪ್ರಕರಣಗಳಿಂದ ಭಾರತೀಯ ಜನತಾ ಪಕ್ಷ ಅಷ್ಟೇ ಅಲ್ಲದೆ, ಮನುಕುಲದ ಮೇಲೆಯೇ ದೌರ್ಜನ್ಯ ನಡೆದಂತಾಗಿದೆ. ಉದ್ಧಟತನ ಮುಂದುವರಿದರೆ ದೇಶಾದ್ಯಂತ ಬಿಜೆಪಿ ಕಾರ್ಯಕರ್ತರು ಬೀದಿಗಿಳಿದು ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಸಿದರು. ಬಿಜೆಪಿ ತಾಲೂಕು ಘಟಕದ ಅಧ್ಯಕ್ಷ ರಾಜೇಶ ಬೀಳಗಿ, ನ್ಯಾಯವಾದಿ ಮೋಹನ ಸೋರಿ, ಪ್ರಧಾನ ಕಾರ್ಯದರ್ಶಿ ಉಮೇಶ ಹಕಾಟಿ, ಬಿಜೆಪಿ ಅಲ್ಪಸಂಖ್ಯಾತ ಘಟಕದ ತಾಲೂಕಾಧ್ಯಕ್ಷ ರಸೂಲ್ ಖಾಜಿ, ಬಸವರಾಜ ಕೋನಣ್ಣವರ, ವಾಸು ಜೋಗಿ, ಹನುಮಂತ ಸಿಂಗಾಡಿ, ಲಕ್ಷ್ಮಣ ಮಿಂಚಲ, ಮಂಜುನಾಥ ಬರದೇಲಿ, ಎಸ್.ಎಸ್. ಗುರುಬಸಣ್ಣವರ ಇತರರಿದ್ದರು.

    ಖಾನಾಪುರ ವರದಿ: ಪಶ್ಚಿಮ ಬಂಗಾಳದಲ್ಲಿ ಚುನಾವಣಾ ಫಲಿತಾಂಶ ಪ್ರಕಟಗೊಂಡ ಬಳಿಕ ನಡೆದ ಬಿಜೆಪಿ ಕಾರ್ಯಕರ್ತರ ಮೇಲಿನ ಹಲ್ಲೆ ಖಂಡಿಸಿ ತಾಲೂಕು ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರು ಬುಧವಾರ ಪಟ್ಟಣದಲ್ಲಿ ಮೌನ ಪ್ರತಿಭಟನೆ ನಡೆಸಿದರು. ಪಟ್ಟಣದ ಮಹಾಲಕ್ಷ್ಮೀ ದೇವಾಲಯದ ಆವರಣದಲ್ಲಿ ಕೈಗಳಿಗೆ ಕಪ್ಪು ಪಟ್ಟಿ ಧರಿಸಿ ಪ್ರತಿಭಟಿಸಿದರು. ಪಕ್ಷದ ಬ್ಲಾಕ್ ಅಧ್ಯಕ್ಷ ಸಂಜಯ ಕುಬಲ, ಜಿಲ್ಲಾ ಉಪಾಧ್ಯಕ್ಷ ಪ್ರಮೋದ ಕೊಚೇರಿ, ವಿಠ್ಠಲ ಹಲಗೇಕರ, ಜ್ಯೋತಿಬಾ ರೇಮಾಣಿ, ಅಪ್ಪಯ್ಯ ಕೋಡೊಳಿ, ಧನಶ್ರೀ ದೇಸಾಯಿ, ಕಿರಣ ಯಳ್ಳೂರಕರ, ಪಂಡಿತ ಓಗಲೆ, ಸಂಜಯ ಕಂಚಿ, ಗುಂಡು ತೋಪಿನಕಟ್ಟಿ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts