More

    ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಹವ್ಯಾಸ ರೂಢಿಸಿಕೊಳ್ಳಿ

    ಸರಗೂರು: ವಿದ್ಯಾರ್ಥಿಗಳಲ್ಲಿ ಸಂಕುಚಿತ ಮನೋಭಾವನೆ ಹೋಗಲಾಡಿಸಲು ಶಾಲಾ ವಾರ್ಷಿಕೋತ್ಸವ ಉತ್ತಮವಾದ ವೇದಿಕೆಯಾಗಿದೆ ಎಂದು ಶಾಸಕ ಅನಿಲ್ ಚಿಕ್ಕಮಾದು ಅಭಿಪ್ರಾಯಪಟ್ಟರು.

    ತಾಲೂಕಿನ ಪಟ್ಟಣದ ಲಯನ್ಸ್ ಅಕಾಡೆಮಿ ಶಾಲೆಯ 34ನೇ ಶಾಲಾ ವಾರ್ಷಿಕೋತ್ಸವ ಮತ್ತು ಸಾಂಸ್ಕೃತಿಕ ಸೌರಭ ಕಾರ್ಯಕ್ರಮವನ್ನು ಇತ್ತೀಚೆಗೆ ಉದ್ಘಾಟಿಸಿ ಮಾತನಾಡಿ, ಕೆಲವು ಮಕ್ಕಳು ಕೇವಲ ಒಂದೇ ವಿಷಯಕ್ಕೆ ಸೀಮಿತವಾಗಿ ಸಾಂಸ್ಕೃತಿಕ ಚಟುವಟಿಕೆಯಲ್ಲಿ ಭಾಗವಹಿಸಲು ಹಿಂದೇಟು ಹಾಕುತ್ತಾರೆ. ಓದು ಬರಹದ ಜೊತೆಗೆ ಉತ್ತಮವಾದ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಹವ್ಯಾಸವನ್ನು ಸಹ ರೂಢಿಸಿಕೊಳ್ಳುವುದು ಒಳ್ಳೆಯ ಬೆಳವಣಿಗೆಯಾಗಿದೆ. ಹಲವಾರು ವಿದ್ಯಾರ್ಥಿಗಳು ಕೇವಲ ಮೊಬೈಲ್, ಟಿವಿಗೆ ಅಂಟಿಕೊಂಡಿರುತ್ತಾರೆ. ಮತ್ತೆ ಕೆಲವರು ಯಾರೊಂದಿಗೂ ಬೆರೆಯದೆ ಒಬ್ಬಂಟಿಯಾಗಿರಲು ಬಯಸುತ್ತಾರೆ. ಆದರೆ ಓದು ಬರಹದ ಜತೆಗೆ ಉತ್ತಮವಾದ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಹವ್ಯಾಸ ಬೆಳೆಸಿಕೊಳ್ಳಬೇಕು ಎಂದು ಕಿವಿಮಾತು ಹೇಳಿದರು.

    ಲಯನ್ಸ್ ಅಕಾಡೆಮಿ ಶಾಲೆಯ ಕಾರ್ಯದರ್ಶಿ ಲಯನ್ ಎಸ್.ಎಸ್.ಪ್ರಭುಸ್ವಾಮಿ ಮಾತನಾಡಿ, ಚಿಕ್ಕಂದಿನಿಂದಲೇ ವೇದಿಕೆಗಳ ಕಾರ್ಯಕ್ರಮಗಳಲ್ಲಿ ಭಾಗವಹಿಸುವುದರಿಂದ ಬುದ್ಧಿಶಕ್ತಿ, ಧೈರ್ಯ ಹೆಚ್ಚಿ ಭಯ ಹೋಗಲಾಡಿಸಬಹುದು. ಶಾಲಾ ವಾರ್ಷಿಕೋತ್ಸವ, ಮನರಂಜನಾ ಕಾರ್ಯಕ್ರಮಗಳಲ್ಲಿ ಭಾಗವಹಿಸುವುದರಿಂದ ನಷ್ಟವಾಗುವುದಿಲ್ಲ. ಇದಕ್ಕೆ ಪಾಲಕರ ಸಹಮತವೂ ಇರಬೇಕು ಎಂದು ಹೇಳಿದರು.

    ನಮ್ಮ ಶಾಲೆ 35 ವರ್ಷಗಳಿಂದ ಸೇವೆಯನ್ನು ಸಲ್ಲಿಸುತ್ತಿದ್ದು ಸರ್ಕಾರದಿಂದ ಯಾವುದೇ ಅನುದಾನಗಳನ್ನು ಪಡೆದಿಲ್ಲ. ಪ್ರಸ್ತುತ ದಿ.ಚಿಕ್ಕಮಾದು ಅವರ ಹೆಸರಿನಲ್ಲಿ 5 ಲಕ್ಷ ರೂ. ಹಾಗೂ ಅನಿಲ್ ಚಿಕ್ಕಮಾದು ಅವರ ಹೆಸರಿನಲ್ಲಿ 5 ಲಕ್ಷ ರೂ. ಅನುದಾನವನ್ನು ಪಡೆದು ಶಾಲೆಗೆ ಊಟದ ಕೊಠಡಿಯನ್ನು ನಿರ್ಮಿಸಲಾಗಿದೆ ಎಂದರು.

    ಲಯನ್ಸ್ ಅಕಾಡೆಮಿ ಮ್ಯಾನೇಜಿಂಗ್ ಟ್ರಸ್ಟಿ ಬ್ರಹ್ಮದೇವಯ್ಯ ಮಾತನಾಡಿ. ನಮ್ಮ ಶಾಲೆ ಅತ್ಯುನ್ನತ ಸ್ಥಾನದಲ್ಲಿದ್ದು, ತಾಲೂಕಿನ ಪ್ರಥಮ ಆಂಗ್ಲ ಮಾಧ್ಯಮ ಶಾಲೆಯಾಗಿ ಆರಂಭಗೊಂಡು ಇಂದಿಗೆ 34 ವರ್ಷಗಳು ತುಂಬಿವೆ. ನಮ್ಮ ಶಾಲೆ ಯಾವುದೇ ಲಾಭವಿಲ್ಲದೆ ಸಾಮಾಜಿಕ ಸೇವೆ ಮಾಡಿಕೊಂಡು ಬರುತ್ತಿದೆ. ಶೈಕ್ಷಣಿಕವಾಗಿ ನಮ್ಮ ಶಾಲೆಯ ಹಳೆಯ ವಿದ್ಯಾರ್ಥಿಗಳು ದೇಶ-ವಿದೇಶಗಳಲ್ಲಿ ಕೆಲಸ ನಿರ್ವಹಿಸಿರುತ್ತಾರೆ ಎಂದರು.

    ಲಯನ್ ನಾರಾಯಣ ಅಧ್ಯಕ್ಷತೆ ವಹಿಸಿದ್ದರು. ಮುಖ್ಯಶಿಕ್ಷಕ ಬಿ.ಡಿ.ದಾಸಚಾರಿ ಶಾಲಾ ವರದಿ ಮಂಡಿಸಿದರು. ಹಲವು ಕ್ರೀಡೆಗಳಲ್ಲಿ ಭಾಗವಹಿಸಿ ತಾಲೂಕು, ಜಿಲ್ಲಾ, ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುವ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಿ, ಸನ್ಮನಿಸಲಾಯಿತು. ಶಾಲಾ ಮಕ್ಕಳು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಿಕೊಟ್ಟು ನೆರೆದಿದ್ದವರನ್ನು ರಂಜಿಸಿದರು. ಬಿ.ಡಿ.ದಾಸಾಚಾರಿ ಮತ್ತು ಮುಖ್ಯಶಿಕ್ಷಕಿ ಪದ್ಮಶ್ರೀ ಅವರನ್ನು ಸನ್ಮಾನಿಸಲಾಯಿತು.
    ಪೊಲೀಸ್ ಉಪನಿರೀಕ್ಷಕ ಸಿ.ನಂದೀಶ್‌ಕುಮಾರ್, ಶಾಲೆಯ ಖಜಾಂಚಿ ಎಸ್.ಎಸ್.ವಿ.ಯೋಗೀಶ್, ಕ್ಲಬ್‌ನ ಕಾರ್ಯದರ್ಶಿ ಎನ್. ಎಸ್.ಪ್ರತಾಪ್, ನಾಗರಾಜು, ಸುರೇಶ್ ಜೈನ್, ಮೋಹನ್‌ಕುಮಾರ್, ಪ್ರಸಾದ್, ಸಮಂತ್ ಜೈನ್ ಹಾಗೂ ಪಾಲಕರು ಭಾಗವಹಿಸಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts