More

    ಕಾಲಮಿತಿಯಲ್ಲಿ ಕಾಮಗಾರಿ ಮುಗಿಸಿ

    ವಡಗೇರಾ : ಕಾಲಮಿತಿಯೊಳಗೆ ಎಲ್ಲ ಕಾಮಗಾರಿ ಮುಗಿಸಬೇಕು ಹಾಗೊಂದು ವೇಳೆ ವಿಳಂಬ ಮಾಡಿದ್ದಲ್ಲಿ ಅಂತಹವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಸಹಾಯಕ ಆಯುಕ್ತ ಹಂಪಣ್ಣ ಸಜ್ಜನ್ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.

    ಪಟ್ಟಣದ ತಾಲೂಕು ಪಂಚಾಯಿತಿಯಲ್ಲಿ ಮಂಗಳವಾರ ಕರೆದಿದ್ದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಕಾಮಗಾರಿ ಪರಿಶೀಲಿಸಲು ಕಡ್ಡಾಯವಾಗಿ ಕ್ಷೇತ್ರ ಭೇಟಿ ಮಾಡಬೇಕು. ಅಲ್ಲದೆ ತಾಲೂಕಿನಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಎಲ್ಲರೂ ಗಮನ ಹರಿಸಬೇಕು. ಎಲ್ಲಿ ಸಮಸ್ಯೆ ಇದೇ ಎಂಬುದನ್ನು ಪತ್ತೆ ಹಚ್ಚಿ ಅಲ್ಲಿಗೆ ಅಧಿಕಾರಿಗಳು ಖುದ್ದು ಭೇಟಿ ನೀಡುವ ಮೂಲಕ ಸಮಸ್ಯೆಗೆ ಸ್ಪಂದಿಸಬೇಕು ಎಂದು ತಾಕೀತು ಮಾಡಿದರು.

    ತಾಲೂಕಿನಲ್ಲಿರುವ ಎಲ್ಲ ಅಂಗನವಾಡಿ, ವಸತಿ ನಿಲಯ, ಆಸ್ಪತ್ರೆಗಳಿಗೆ ಭೇಟಿ ನೀಡುವ ಮೂಲಕ ಅಲ್ಲಿನ ಮೂಲಭೂತ ಸೌಲಭ್ಯ ಪರಿಶೀಲಿಸಿ ಕೇಂದ್ರಗಳನ್ನು ಸ್ವಚ್ಛವಾಗಿಟ್ಟುಕೊಳ್ಳುವಂತೆ ಸೂಚನೆ ನೀಡಬೇಕು. ನೂತನ ತಾಲೂಕಿನ ಅಭಿವೃದ್ಧಿ ಎಲ್ಲರೂ ಶ್ರಮಿಸುವ ಮೂಲಕ ಈ ತಾಲೂಕನ್ನು ಜಿಲ್ಲೆಯಲ್ಲಿಯೇ ಮಾದರಿ ಮಾಡಬೇಕು ಎಂದು ಹೇಳಿದರು.

    ತಾಪಂ ಇಒ ಮಲ್ಲಿಕಾರ್ಜುನ ಸಂಗ್ವಾರ ಮಾತನಾಡಿ, ಎಲ್ಲ ಅನುಷ್ಠಾನ ಅಧಿಕಾರಿಗಳು ಶಹಾಪುದಲ್ಲಿಯೇ ಇದ್ದರೆ ವಡಗೇರಾ ಅಭಿವೃದ್ಧಿಯಾಗುವುದಿಲ್ಲ. ವಾರದಲ್ಲಿ ಮೂರು ದಿನ ವಡಗೇರಾಕ್ಕೆ ಬಂದು ಕಾಮಗಾರಿ ಹಾಗೂ ಯೋಜನೆಯ ಅನುಷ್ಠಾನ ಪರಿಶೀಲಿಸಬೇಕು ಎಂದು ಹೇಳಿದರು.
    ಕ್ಷೇತ್ರ ಶಿಕ್ಷಣಾಧಿಕಾರಿ ಶೀಬಾ ಜಲಿಯನ್, ಸಿಡಿಪಿಒ ಮೀನಾಕ್ಷಿ, ಎಇಇ ಸಿದ್ದಣ್ಣಗೌಡ ಹಾಗೂ ಎಲ್ಲ ಅನುಷ್ಠಾನ ಇಲಾಖೆ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts