More

    ಕಾಲಮಿತಿಯಲ್ಲಿ ಗುಣಮಟ್ಟದ ಕಾಮಗಾರಿ ಮಾಡಿ

    ಅಫಜಲಪುರ (ಕಲಬುರಗಿ): ಖಾಸಗಿ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿರುವ ಅಲ್ಪಸಂಖ್ಯಾತರ ಮುರಾರ್ಜಿ ವಸತಿ ಶಾಲೆ ಶೀಘ್ರದಲ್ಲಿಯೇ ಸುಸಜ್ಜಿತ ಕಟ್ಟಡಕ್ಕೆ ಶಿಫ್ಟ್ ಆಗಲಿದೆ ಎಂದು ಶಾಸಕ ಎಂ.ವೈ. ಪಾಟೀಲ್ ಭರವಸೆ ನೀಡಿದರು.

    ಬಡದಾಳ ಗ್ರಾಮದಲ್ಲಿ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯಿಂದ 10 ಕೋಟಿ ರೂ. ವೆಚ್ಚದ ಅಲ್ಪಸಂಖ್ಯಾತರ ಮುರಾರ್ಜಿ ದೇಸಾಯಿ ವಸತಿ ಶಾಲೆ ಕಟ್ಟಡ ನಿರ್ಮಾಣ ಕಾಮಗಾರಿಗೆ ಭಾನುವಾರ ಚಾಲನೆ ನೀಡಿ ಮಾತನಾಡಿ, 40 ಮಕ್ಕಳಿಂದ ಪ್ರಾರಂಭವಾದ ಈ ಶಾಲೆಯಲ್ಲಿ ಸದ್ಯ 6 ರಿಂದ 10ನೇ ತರಗತಿಯವರೆಗೆ 240 ಮಕ್ಕಳು ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಶಾಲೆಗೆ ಸೂಕ್ತ ಸೌಕರ್ಯ ಒದಗಿಸಲು ಶ್ರಮಿಸುವೆ. ಅಧಿಕಾರಿಗಳು ಹಾಗೂ ಗುತ್ತಿಗೆದಾರರು ನಿಗದಿತ ಅವಧಿಯಲ್ಲಿ ಗುಣಮಟ್ಟದ ಕಾಮಗಾರಿ ನಿರ್ವಹಿಸಬೇಕು ಎಂದು ತಾಕೀತು ಮಾಡಿದರು.

    ಗ್ರಾಪಂ ಅಧ್ಯಕ್ಷ ಅಮೃತ ಮಾತಾರಿ, ಜಿಪಂ ಮಾಜಿ ಸದಸ್ಯರಾದ ಪ್ರಕಾಶ ಜಮಾದಾರ, ಸಿದ್ಧಾರ್ಥ ಬಸರಿಗಿಡ, ತಾಪಂ ಮಾಜಿ ಉಪಾಧ್ಯಕ್ಷ ಶಿವಾನಂದ ಗಾಡಿಸಾಹುಕಾರ, ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಭಕ್ತ ಮಾರ್ಕಂಡೇಯ, ಪ್ರಾಂಶುಪಾಲ ಶಿವಾನಂದ, ಶಿಕ್ಷಕರಾದ ಶ್ರೀಕಾಂತ ಪೂಜಾರಿ, ಖಾಜಪ್ಪ ಮಾಡಿಯಾಳ, ಮಹಾದೇವ ವಾಲಿಕಾರ, ಎಂ.ಡಿ.ಯುಸೂಫ್, ಗುತ್ತಿಗೆದಾರ ಗೋಲಯ್ಯ ಹಿರೇಮಠ. ಗುರು ಸಾಲಿಮಠ, ಸತೀಶ ನೀಲಂಗಿ ಇತರರಿದ್ದರು.

    ಬಡದಾಳದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ 10 ಲಕ್ಷ ರೂ. ವೆಚ್ಚದಲ್ಲಿ ಕಾಂಪೌಂಡ ನಿರ್ಮಾಣ, ಜೆಜೆಎಂ ಯೋಜನೆ ಅಡಿಯಲ್ಲಿ 2 ಕೋಟಿ ರೂ. ವೆಚ್ಚದಲ್ಲಿ ಮನೆ ಮನೆಗೂ ಶುದ್ಧ ಕುಡಿಯುವ ನೀರು ಸರಬರಾಜು ಮಾಡುವ ಕಾಮಗಾರಿ ಪ್ರಗತಿಯಲ್ಲಿದೆ. 50 ಲಕ್ಷ ರೂ. ವೆಚ್ಚದಲ್ಲಿ ಗ್ರಾಮದಲ್ಲಿ ಸಿಸಿ ರಸ್ತೆಗಳನ್ನು ನಿರ್ಮಿಸಲಾಗಿದೆ. ಹಳ್ಳಿಗಳ ಸಮಗ್ರ ಅಭಿವೃದ್ಧಿಗೆ ಪ್ರಥಮ ಆದ್ಯತೆ ನೀಡಲಾಗುತ್ತಿದೆ.
    | ಎಂ.ವೈ. ಪಾಟೀಲ್, ಶಾಸಕ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts