More

    ಕಾಲುವೆ ಕಾಮಗಾರಿಯಲ್ಲಿ ಅವ್ಯವಹಾರ ಆರೋಪ

    ಹುಬ್ಬಳ್ಳಿ: ಮಲಪ್ರಭಾ ಬಲದಂಡೆ ಕಾಲುವೆ (ಎಂಆರ್​ಬಿಸಿ) ನಿರ್ಮಾಣ ಕಾಮಗಾರಿಯಲ್ಲಿ ಅವ್ಯವಹಾರವಾಗಿದ್ದು, ಸೂಕ್ತ ತನಿಖೆ ನಡೆಸಬೇಕೆಂದು ಆಗ್ರಹಿಸಿ ತಾಲೂಕಿನ ಬ್ಯಾಹಟ್ಟಿಯಲ್ಲಿ ಗುರುವಾರ ರೈತರು ಪ್ರತಿಭಟನೆ ನಡೆಸಿದರು. ಈ ವೇಳೆ ನೀರಾವರಿ ಇಲಾಖೆ ಅಧಿಕಾರಿಗಳು, ರೈತರ ಮಧ್ಯೆ ಕೆಲಕಾಲ ಮಾತಿನ ಚಕಮಕಿ ನಡೆಯಿತು.

    ಧಾರವಾಡ ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷ ಶಿವಾನಂದ ಕರಿಗಾರ ನೇತೃತ್ವದಲ್ಲಿ ಬ್ಯಾಹಟ್ಟಿ ಹಾಗೂ ತಾಲೂಕಿನ ವಿವಿಧ ಗ್ರಾಮಗಳ ರೈತರು ಮಲಪ್ರಭಾ ಬಲದಂಡೆ ಕಾಲುವೆ ನಿರ್ಮಾಣ ವಿಭಾಗದ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

    ಹಿರೇಕುಂಬಿ, ಮೊರಬ, ಬ್ಯಾಹಟ್ಟಿ, ಕಿರೇಸೂರ ಹಾಗೂ ನವಲಗುಂದ ವ್ಯಾಪ್ತಿಯಲ್ಲಿ 2018ರಿಂದ ನಡೆದ ಮಲಪ್ರಭಾ ಬಲದಂಡೆ ನಾಲೆ ನಿರ್ಮಾಣ ಕಾರ್ಯ ಸರಿಯಾಗಿ ಕೈಗೊಂಡಿಲ್ಲ. ರೈತರು ಇದರಿಂದ ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಹೊಲಕ್ಕೆ ಹೋಗಲು ದಾರಿ ಇಲ್ಲದಂತಾಗಿದೆ ಎಂದು ದೂರಿದರು.

    ಶಿವಾನಂದ ಕರಿಗಾರ ಮಾತನಾಡಿ, ಕಳಪೆ ಕಾಮಗಾರಿ ನಡೆಸಿ ಬಿಲ್ ಪಡೆಯಲಾಗಿದೆ. ಕಳೆದ ಮೂರು ವರ್ಷಗಳಿಂದ 300 ಕೋಟಿ ರೂ. ಕಾಮಗಾರಿ ಕೈಗೆತ್ತಿಕೊಂಡಿದ್ದರೂ ಈವರೆಗೆ ಕೆಲಸ ಪೂರ್ಣಗೊಂಡಿಲ್ಲ. ಈ ಬಗ್ಗೆ ಕೆಡಿಪಿ ಸಭೆಯಲ್ಲೂ ರ್ಚಚಿಸಲಾಗಿದೆ. ಕಾಮಗಾರಿ ಬಗ್ಗೆ ಹಿರಿಯ ಅಧಿಕಾರಿಗಳು ತನಿಖೆ ನಡೆಸಿ ಜನರಿಗೆ ವಾಸ್ತವ ತಿಳಿಸಬೇಕು ಎಂದು ಆಗ್ರಹಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts