More

    ಕಾಲು ಮುರಿದುಕೊಂಡಿದ್ದ ಯುವಕನಿಗೆ ಚಿಕತ್ಸೆ

    ಮದ್ದೂರು: ತಾಲೂಕಿನ ಯರಗನಹಳ್ಳಿ ಗ್ರಾಮದಲ್ಲಿ ಬೈಕ್ ಅಪಘಾತದಲ್ಲಿ ಕಾಲು ಮುರಿದುಕೊಂಡು ಬಸ್ ನಿಲ್ದಾಣದಲ್ಲಿ ಆಶ್ರಯ ಪಡೆದಿದ್ದ ಯುವಕ ಚಂದ್ರು ಅವರನ್ನು ತಹಸೀಲ್ದಾರ್ ಕೆ.ಎಸ್.ಸೋಮಶೇಖರ್ ಅವರು ರಾಜಸ್ವ ನಿರೀಕ್ಷಕರ (ಆರ್‌ಐ) ಮೂಲಕ ಪಟ್ಟಣದ ಗುರುಶಾಂತಪ್ಪ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ.
    ನಂ.1 ಕನ್ನಡ ದಿನಪತ್ರಿಕೆ ‘ವಿಜಯವಾಣಿ’ಯಲ್ಲಿ ನ.25 ರಂದು ‘ಕಾಲು ಮರಿದ ಯುವಕನ ಚಿಕಿತ್ಸೆಗೆ ಮನವಿ’ ಎಂಬ ಶೀರ್ಷಿಕೆಯಡಿಯಲ್ಲಿ ವಿಶೇಷ ವರದಿ ಪ್ರಕಟಗೊಂಡ ಹಿನ್ನೆಲೆಯಲ್ಲಿ ಯುವಕ ಚಂದ್ರು ಅವರನ್ನು ಆರೋಗ್ಯ ಸಿಬ್ಬಂದಿಗಳ ಸಹಾಯದಿಂದ ಆಂಬುಲೆನ್ಸ್ ಮೂಲಕ ಪಟ್ಟಣದ ಗುರುಶಾಂತಪ್ಪ ಸರ್ಕಾರಿ ಅಸ್ಪತ್ರೆಗೆ ರಾಜಸ್ವ ನಿರೀಕ್ಷಕ ಜಗದೀಶ್ ಅವರು ದಾಖಲು ಮಾಡಿ ಪ್ರಥಮ ಚಿಕಿತ್ಸೆ ಕೊಡಿಸಿದ್ದಾರೆ.
    ಕಾಲು ಮುರಿದ ಪರಿಣಾಮ ಹೆಚ್ಚಿನ ಚಿಕಿತ್ಸೆಗೆ ಜಿಲ್ಲಾಸ್ಪತ್ರೆಗೆ ಕಳುಹಿಸಿ ಸೂಕ್ತ ಚಿಕಿತ್ಸೆ ಕೊಡಿಸಿದ್ದಾರೆ. ಚಂದ್ರುಗೆ ಹೆಚ್ಚಿನ ಚಿಕಿತ್ಸೆ ಅವಶ್ಯಕತೆ ಇದ್ದು, ಸರ್ಕಾರ ಮತ್ತು ಮೇಲಾಧಿಕಾರಿಗಳ ಗಮನಕ್ಕೆ ತಂದು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ತಹಸೀಲ್ದಾರ್ ಸೋಮಶೇಖರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
    ವರದಿ ಬಗ್ಗೆ ಮೆಚ್ಚುಗೆ : ವಿಜಯವಾಣಿ ಪತ್ರಿಕೆ ವರದಿಗೆ ಸ್ಪಂದಿಸಿದ ತಹಸೀಲ್ದಾರ್ ಸೋಮಶೇಖರ್ ಅವರು ಯುವಕ ಚಂದ್ರುಗೆ ಸೂಕ್ತ ಚಿಕಿತ್ಸೆಗೆ ಕ್ರಮ ಕೈಗೊಂಡ ಹಿನ್ನೆಲೆಯಲ್ಲಿ ವಿಜಯವಾಣಿ ಪತ್ರಿಕೆಯ ವರದಿ ಬಗ್ಗೆ ಸಾರ್ವಜನಿಕರು, ಗ್ರಾಮಸ್ಥರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts