More

    ಕಾಲ್ನಡಿಗೆ ಮೂಲಕ ಸಂವಿಧಾನ ಜಾಗೃತಿ

    ಚಿತ್ರದುರ್ಗ: ನಗರದ ಪ್ರಮುಖ ಮಾರ್ಗಗಳಲ್ಲಿ ಕಾಲ್ನಡಿಗೆ ಮೂಲಕ ಸಂಚರಿಸಿದ ಸಾವಿರಾರು ವಿದ್ಯಾರ್ಥಿಗಳು ಸಂವಿಧಾನ ಮಹತ್ವ ಕುರಿತು ಜಾಗೃತಿ ಮೂಡಿಸಲು ಮುಂದಾದರು.

    ಒನಕೆ ಓಬವ್ವ ವೃತ್ತದಲ್ಲಿ ಜಾಥಾಕ್ಕೆ ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಜಗದೀಶ್ ಹೆಬ್ಬಳ್ಳಿ ಗುರುವಾರ ಚಾಲನೆ ನೀಡಿದರು. ಜಿಲ್ಲಾಧಿಕಾರಿ ವೃತ್ತದಿಂದ ಆರಂಭಗೊಂಡು ಕನಕ ವೃತ್ತ ಮಾರ್ಗವಾಗಿ ಸಂಚರಿಸಿ ಡಾ.ಬಿ.ಆರ್.ಅಂಬೇಡ್ಕರ್ ವೃತ್ತ ತಲುಪಿತು.

    ನೇರ ಪ್ರಸಾರ ವೀಕ್ಷಣೆಗೆ ಅವಕಾಶ: ಬೆಂಗಳೂರಿನ ಅರಮನೆ ಮೈದಾನದಲ್ಲಿ ಫೆ. 24, 25ರಂದು ಸಂವಿಧಾನ ಜಾಗೃತಿ ಜಾಥಾ ನಡೆಯಲಿದ್ದು, ನೇರ ಪ್ರಸಾರ ವೀಕ್ಷಿಸಲು ಜಿಪಂ ಸಭಾಂಗಣದಲ್ಲಿ ಸಾರ್ವಜನಿಕರಿಗೆ ಅವಕಾಶ ಕಲ್ಪಿಸಲಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆ ತಿಳಿಸಿದೆ.

    ಜಿಲ್ಲಾಡಳಿತ, ಜಿಪಂ, ಸಮಾಜ ಕಲ್ಯಾಣ, ಪರಿಶಿಷ್ಟ ವರ್ಗಗಳ ಕಲ್ಯಾಣ, ಶಿಕ್ಷಣ ಇಲಾಖೆ ಹಾಗೂ ಭೀಮ್ ಬಳಗದಿಂದ ಜಾಥಾ ಆಯೋಜಿಸಲಾಗಿತ್ತು. ಪರಿಶಿಷ್ಟ ವರ್ಗಗಳ ಜಿಲ್ಲಾ ಕಲ್ಯಾಣಾಧಿಕಾರಿ ಪರಮೇಶ್ವರಪ್ಪ, ತಾಲೂಕು ಕಲ್ಯಾಣಾಧಿಕಾರಿ ಭೀಮಯ್ಯ, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಕೃಷ್ಣಮೂರ್ತಿ, ಭೀಮ್ ಬಳಗದ ಮುಖ್ಯಸ್ಥರು, ವಿವಿಧ ಸಂಘಟನೆಗಳ ಮುಖಂಡರು ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts