More

    ಕಾಲ ಮಿತಿಯೊಳಗೆ ಕೆಲಸ ಪೂರ್ಣಗೊಳಿಸಿ


    ಯಾದಗಿರಿ: ಪ್ರಸಕ್ತ ಸಾಲಿನಲ್ಲಿ ಅನುಮೋದನೆಗೊಂಡ ಕಾಮಗಾರಿಗಳ ಅಂದಾಜು ಪಟ್ಟಿಗಳನ್ನು ಸಲ್ಲಿಸಿ ಆಡಳಿತಾತ್ಮಕ ಅನುಮೋದನೆ ಪಡೆದು ಕಾಮಗಾರಿಗಳನ್ನು ಪ್ರಾರಂಭಿಸಿ ತ್ವರಿತವಾಗಿ ಪೂರ್ಣಗೊಳಿಸಲು ಸಂಬಅಂಸಿದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ಸುಶೀಲಾ ಬಿ., ಸೂಚನೆ ನೀಡಿದರು.

    ನಗರದ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಗುರುವಾರ ಕರೆದಿದ್ದ ಕೆಕೆಆರ್ಡಿಬಿ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿ, ಎಸ್ಸಿಪಿ ಮತ್ತು ಟಿಎಸ್ಪಿ ಅನುದಾನಕ್ಕೆ ಸಂಬಂಧಿಸಿದ ಕಾಮಗಾರಿಗಳನ್ನು ಮಂಡಳಿಯ ಮಾರ್ಗಸೂಚಿಯಂತೆ ನೆರವೇರಿಸಲು ಕ್ರಮ ವಹಿಸಬೇಕು. ಅಲ್ಲದೆ, ಪ್ರಗತಿ ಹಂತದಲ್ಲಿರುವ ಕೆಲಸಗಳನ್ನು ಶೀಘ್ರ ಪೂರ್ಣಗೊಳಿಸಿ ಅದರ ವರದಿ ಸಲ್ಲಿಸಬೇಕು ಎಂದು ಸೂಚನೆ ನೀಡಿದರು.

    ಜಿಲ್ಲೆಯಲ್ಲಿ 2022-23ನೇ ಸಾಲಿನ ಮೆಗಾ ಮ್ಯಾಕ್ರೋ ಯೋಜನೆಯಡಿ ತೋಟಗಾರಿಕೆ, ಲೋಕೋಪಯೋಗಿ, ಪಂಚಾಯತ ರಾಜ್ ಮತ್ತು ಆರೋಗ್ಯ ಇಲಾಖೆಗಳಿಗೆ ಸಂಬಂಧಿಸಿದ ಕಾಮಗಾರಿಗಳು ಪ್ರಾರಂಭಿಸಬೇಕಾಗಿದೆ. ಪ್ರಾರಂಭವಾಗದೇ ಇರುವ ಕುರಿತು ಆಯಾ ಅನುಷ್ಠಾನ ಅಧಿಕಾರಿಗಳಿಂದ ಮಾಹಿತಿ ಪಡೆಯಬೇಕು ಎಂದರು.

    ಮಂಡಳಿಯಿಂದ ಅನುಮೋದನೆಗೊಂಡ ಶಾಲಾ ಕಟ್ಟಡಗಳು, ಅಂಗನವಾಡಿ, ಆರೋಗ್ಯ ಕೇಂದ್ರಗಳ ಕಟ್ಟಡಗಳನ್ನು ಆದ್ಯತೆಯ ಮೇರೆಗೆ ಪ್ರಾರಂಭಿಸಿ ಶೀಘ್ರದಲ್ಲಿಯೇ ಪೂರ್ಣಗೊಳಿಸಬೇಕು. ಸ್ಥಳ ಸಮಸ್ಯೆ ಇರುವ ಶಾಲಾ ಹಾಗೂ ಅಂಗನವಾಡಿ ಕಟ್ಟಡಗಳ ಕಾಮಗಾರಿಗಳಿಗೆ ಸಂಬಂಧಿಸಿದಂತೆ ಮೇಲಾಧಿಕಾರಿಗಳ ಮತ್ತು ಡಿಡಿಪಿಐ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಸಮಸ್ಯೆ ಇತ್ಯರ್ಥಪಡಿಸಿಕೊಳ್ಳಬೇಕು. ಕಳೆದ ಸಾಲಿನಲ್ಲಿ ಪ್ರಾದೇಶಿಕ ಅರಣ್ಯ ವಿಭಾಗಕ್ಕೆ ವಹಿಸಲಾದ ಕಾಮಗಾರಿಗಳಿಗೆ ಆಡಳಿತಾತ್ಮಕ ಅನುಮೋದನೆ ಪಡೆದುಕೊಳ್ಳಬೇಕು. ಮಂಡಳಿಯಿಂದ ಪ್ರತಿ ತಿಂಗಳು ನಿಗದಿಪಡಿಸಲಾದ ಗುರಿಗೆ ತಕ್ಕಂತೆ ಪ್ರಗತಿ ಸಾಧಿಸಬೇಕು ಎಂದು ಸೂಚಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts