More

    ಕಿಡ್ನಿ ಆರೋಗ್ಯ ಕಾಪಾಡಲು ಕಾಳಜಿ ಅಗತ್ಯ

    ಬೆಳಗಾವಿ: ದೇಹದ ಅಂಗಾಂಗಗಳಲ್ಲಿ ಕಿಡ್ನಿ ಅನೇಕ ಕಾರ್ಯಗಳನ್ನು ನಿರ್ವಹಿಸುತ್ತದೆ. ಅದನ್ನು ಆರೋಗ್ಯವಾಗಿ ಇಟ್ಟುಕೊಳ್ಳಬೇಕು. ಇಲ್ಲದಿದ್ದರೆ ಜೀವನಪರ್ಯಂತ ತೊಂದರೆ ಅನುಭವಿಸಬೇಕಾಗುತ್ತದೆ ಎಂದು ಕೆಎಲ್‌ಇ ಅಕಾಡೆಮಿ ಆಫ್ ಹೈಯರ್ ಎಜುಕೇಷನ್ ಆ್ಯಂಡ್ ರಿಸರ್ಚ್ (ಕಾಹೆರ)ನ ಉಪಕುಲಪತಿ ಡಾ. ನಿತೀನ ಗಂಗಾನೆ ಹೇಳಿದರು.

    ನಗರದ ಕೆಎಲ್‌ಇ ಸಂಸ್ಥೆಯ ಡಾ. ಪ್ರಭಾಕರ ಕೋರೆ ಆಸ್ಪತ್ರೆ ಹಾಗೂ ವೈದ್ಯಕೀಯ ಸಂಶೋಧನಾ ಕೇಂದ್ರದ ನೆಫ್ರೊಲಾಜಿ ವಿಭಾಗ ಗುರುವಾರ ಹಮ್ಮಿಕೊಂಡಿದ್ದ ವಿಶ್ವ ಮೂತ್ರಪಿಂಡ ದಿನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿ, ಕಿಡ್ನಿ ಆರೋಗ್ಯದ ಕುರಿತು ಸಾಮಾನ್ಯರಿಗೂ ತಿಳಿಯುವ ರೀತಿಯಲ್ಲಿ ಜಾಗೃತಿ ಮೂಡಿಸುವ ಕಾರ್ಯ ನಿರಂತರವಾಗಿ ನಡೆಯಬೇಕು. ಅವಶ್ಯವಿರುವ ವೈದ್ಯಕೀಯ ಸೌಲಭ್ಯ, ಅಂಗಾಂಗ ದಾನದ ಕಾರ್ಯ ಹಾಗೂ ಕಸಿ ಶಸ್ತ್ರಚಿಕಿತ್ಸೆ ನೆರವೇರಿಸುವಲ್ಲಿ ಇನ್ನೂ ಹೆಚ್ಚಾಗಿ ಕಾರ್ಯಪ್ರವೃತ್ತರಾಗಬೇಕು ಎಂದರು.

    ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಡಾ. ಕರ್ನಲ್ ಎಂ. ದಯಾನಂದ ಮಾತನಾಡಿ, ಕಳೆದ 20 ವರ್ಷಗಳಲ್ಲಿ ಅತ್ಯಾಧುನಿಕ ವೈದ್ಯಕೀಯ ಚಿಕಿತ್ಸೆ ಲಭಿಸುತ್ತಿದ್ದು, ಸಾಮಾನ್ಯರೊಂದಿಗೆ ಕಿಡ್ನಿ ಕಸಿ ಮಾಡಿಸಿಕೊಂಡ ರೋಗಿಗಳಲ್ಲಿ ಹೆಚ್ಚಾಗಿ ಜಾಗೃತಿ ಮೂಡಿಸಿ. ಇನ್ನೂ ಹೆಚ್ಚಿನ ಸೌಲಭ್ಯ ಕಲ್ಪಿಸಲು ಅತ್ಯಾಧುನಿಕ ಸೌಲಭ್ಯಗಳುಳ್ಳ ಡಯಾಲಿಸಿಸ್ ಯಂತ್ರ ಹಾಗೂ ಕಿಡ್ನಿ ಸಂಬಂಧಿತ ಸಕಲ ಚಿಕಿತ್ಸಾ ವ್ಯವಸ್ಥೆಯನ್ನು ಅಳವಡಿಸಿಕೊಳ್ಳಲಾಗಿದೆ ಎಂದು ತಿಳಿಸಿದರು.

    ಕಾಹೆರನ ಕುಲಸಚಿವ ಡಾ. ವಿ.ಎ. ಕೋಠಿವಾಲೆ, ಡಾ. ಮಲ್ಲಿಕಾರ್ಜುನ ಕರಿಶೆಟ್ಟಿ ಮಾತನಾಡಿ, ನಾಲಿಗೆ ರುಚಿ ನೋಡಿದರೆ ಕಿಡ್ನಿ ಹಾಳಾಗುವ ಸಮಯ ಅಧಿಕ. ಬಿಪಿ, ಕೊಲೆಸ್ಟರಾಲ್, ಡಯಾಬಿಟಿಸ್ ಅನ್ನು ನಿಯಂತ್ರಣದಲ್ಲಿಡಿ, ವೈದ್ಯರ ಸಲಹೆ ಇಲ್ಲದೆ ಅನವಶ್ಯಕ ಔಷಧ ಸೇವನೆ ಬೇಡ, ಇದರಿಂದ ಕಿಡ್ನಿ ಹಾಳಾಗುವುದನ್ನು ತಡೆಯಬಹುದು ಅಥವಾ ಮುಂದೂಡಬಹುದು. ಸರಿಯಾದ ಸಮಯಕ್ಕೆ ಚಿಕಿತ್ಸೆ ಪಡೆಯಬೇಕು. ಸುಮಾರು 30 ವರ್ಷಗಳ ಕಾಲ ಡಯಾಲಿಸಿಸ್ ಮೇಲೆ ಇದ್ದು ಸಹಜವಾದ ಜೀವನ ನಡೆಸುತ್ತಿದ್ದಾರೆ ಎಂದರು. ಇದಕ್ಕೂ ಮೊದಲು ನಗರದ ಶ್ರೀಕೃಷ್ಣದೇವರಾಯ (ಕೊಲ್ಲಾಪುರ) ವೃತ್ತದಿಂದ ಆಸ್ಪತ್ರೆವರೆಗೆ ಕಿಡ್ನಿ ಆರೋಗ್ಯದ ಕುರಿತು ಜಾಗೃತಿ ಜಾಥಾ ನಡೆಸಲಾಯಿತು. ಕ್ಯಾನ್ಸರ್ ಆಸ್ಪತ್ರೆ ವೈದ್ಯಕೀಯ ನಿರ್ದೇಶಕ ಡಾ. ಎಂ.ವಿ.ಜಾಲಿ, ಜೆಎನ್ ವೈದ್ಯಕೀಯ ಮಹಾವಿದ್ಯಾಲಯದ ಉಪಪ್ರಾಚಾರ್ಯ ಡಾ. ರಾಜೇಶ ಪವಾರ, ಡಾ. ರಿತೇಶ ವೆರ್ಣೆಕರ, ಡಾ. ರವಿ ಸಾರ‌್ವಿ, ಡಾ. ಎಸ್.ಐ. ನೀಲಿ, ಡಾ. ಎಸ್.ಸಿ. ಮೆಟಗುಡ್, ಶಕುಂತಲಾ ಕೋರೆ, ಅನಿಲ ಇಂಗಳೆ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts