More

    ಕಿತ್ತು ಬರುತ್ತಿದೆ ಡಾಂಬರು

    ಗುಂಡ್ಲುಪೇಟೆ: ತಾಲೂಕಿನ ಮಾಲಾಪುರ ಗ್ರಾಮದ ರಸ್ತೆ ಡಾಂಬರೀಕರಣ ಕಾಮಗಾರಿ ಕಳಪೆಯಾಗಿದೆ ಎಂದು ಆರೋಪಿಸಿದ ಗ್ರಾಮಸ್ಥರು ಮಂಗಳವಾರ ಡಾಂಬರು ಕಿತ್ತು ಆಕ್ರೋಶ ವ್ಯಕ್ತಪಡಿಸಿದರು.

    ಗ್ರಾಮದ ಸಂಪರ್ಕ ರಸ್ತೆಯನ್ನು ಲೋಕೋಪಯೋಗಿ ಇಲಾಖೆ ವತಿಯಿಂದ 58 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಲಾಗುತ್ತಿದೆ. ಆದರೆ ರಸ್ತೆಗೆ ಡಾಂಬರು ಹಾಕಿದ ಕೆಲವೇ ಗಂಟೆಗಳಲ್ಲಿ ಕಿತ್ತುಬಂದ ಹಿನ್ನೆಲೆಯಲ್ಲಿ ಕಳಪೆ ಕಾಮಗಾರಿ ವಿರುದ್ಧ ಗ್ರಾಮಸ್ಥರು ಕಿಡಿಕಾರಿದರು.

    ರಸ್ತೆ ನಿರ್ಮಾಣಕ್ಕೆ ಅತ್ಯಂತ ಕಳಪೆ ಸಾಮಗ್ರಿಗಳನ್ನು ಬಳಸಿದ್ದರಿಂದ ಬರಿಗೈಯಲ್ಲಿ ಪ್ರಯತ್ನಿಸಿದರೂ ಡಾಂಬರು ಕಿತ್ತುಬರುತ್ತಿದೆ. ಇದಕ್ಕೆ ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ. ಕೂಡಲೇ ಸ್ಥಳಕ್ಕೆ ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳು ಆಗಮಿಸಿ ಕಳಪೆ ಕಾಮಗಾರಿ ನಡೆಸಿದ ಗುತ್ತಿಗೆದಾರನ ವಿರುದ್ಧ ಕ್ರಮಕೈಗೊಳ್ಳಬೇಕು. ಹೊಸದಾಗಿ ರಸ್ತೆ ಡಾಂಬರೀಕರಣ ಮಾಡಬೇಕು ಎಂದು ಒತ್ತಾಯಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts