More

    ಕೀಳರಿಮೆ ತೊರೆದು ಸಾಧನೆ ಮಾಡಿ

    ಹಾವೇರಿ: ಹೆಣ್ಣು ಜನಿಸಿದರೆ ಶಾಪ, ಗಂಡು ಜನಿಸಿದರೆ ಮೋಕ್ಷ ಎಂಬ ಭಾವನೆ ಸಮಾಜದಿಂದ ದೂರಾಗಬೇಕು. ಹೆಣ್ಣು-ಗಂಡು ಮಕ್ಕಳನ್ನು ಸಮಾನವಾಗಿ ಕಾಣಬೇಕು ಎಂದು ಅಪರ ಜಿಲ್ಲಾಧಿಕಾರಿ ಎಂ. ಯೋಗೇಶ್ವರ ಹೇಳಿದರು.

    ಅಂತಾರಾಷ್ಟ್ರೀಯ ಹೆಣ್ಣು ಮಗುವಿನ ದಿನಾಚರಣೆ ಅಂಗವಾಗಿ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಪಂ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಹಯೋಗದಲ್ಲಿ ಸೋಮವಾರ ಆಯೋಜಿಸಿದ್ದ ಬೇಟಿ ಬಚಾವೋ, ಬೇಟಿ ಪಡಾವೋ ಕಾರ್ಯಕ್ರಮ ಉದ್ಘಾಟಿಸಿ, ಪೋಷಣ ಅಭಿಯಾನ ಯೋಜನೆಯಡಿ ಜಿಲ್ಲೆಯ ಅಂಗನವಾಡಿ ಕಾರ್ಯಕರ್ತೆಯರಿಗೆ ಮೊಬೈಲ್ ವಿತರಿಸಿ ಅವರು ಮಾತನಾಡಿದರು.

    ಸರ್ಕಾರದಿಂದ ಮಹಿಳೆಯರಿಗೆ ಶಿಕ್ಷಣ, ಸ್ವಉದ್ಯೋಗ, ಸುಕನ್ಯಾ ಸಮೃದ್ಧಿ, ಭಾಗ್ಯಲಕ್ಷಿ್ಮ, ಬ್ಯಾಂಕ್​ನಲ್ಲಿ ಕಡಿಮೆ ಬಡ್ಡಿ ದರದಲ್ಲಿ ಸಾಲ ಹೀಗೆ ಅನೇಕ ಸೌಲಭ್ಯಗಳನ್ನು ಒದಗಿಸಲಾಗುತ್ತಿದೆ. ಮಹಿಳೆಯರು ‘ನಾನು ಹೆಣ್ಣು’ ಎಂಬ ಕೀಳರಿಮೆ ತೊಡೆದು ಹಾಕಿ ಸಾಧನೆ ಮಾಡಬೇಕು ಎಂದರು.

    ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಪಿ.ವೈ. ಶೆಟ್ಟಪ್ಪನವರ ಮಾತನಾಡಿದರು.

    ಬಾಲ್ಯವಿವಾಹ ತಡೆಯಲು ಶ್ರಮಿಸಿದ ಜಿಲ್ಲೆಯ ಪ್ರತಿ ತಾಲೂಕಿನ ಆಯ್ದ ಮೂರು ಅಂಗನವಾಡಿಗಳಿಗೆ ತಲಾ 5000 ರೂ. ಚೆಕ್ ವಿತರಿಸಲಾಯಿತು. ಕರೊನಾ ಸೇನಾನಿಯಾಗಿ ಸೇವೆ ಸಲ್ಲಿಸಿದ ಅಂಗನವಾಡಿ, ಆಶಾ ಕಾರ್ಯಕರ್ತೆಯರನ್ನು ಸನ್ಮಾನಿಸಲಾಯಿತು. ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದ 15 ವಿದ್ಯಾರ್ಥಿನಿಯರಿಗೆ, ಪಿಯುಸಿಯಲ್ಲಿ ಹೆಚ್ಚು ಅಂಕ ಪಡೆದ 15 ವಿದ್ಯಾರ್ಥಿನಿಯರಿಗೆ ತಲಾ 5000 ರೂ. ಚೆಕ್, ಪ್ರಮಾಣಪತ್ರ ನೀಡಿ ಗೌರವಿಸಲಾಯಿತು.

    ಡಿಡಿಪಿಐ ಅಂದಾನೆಪ್ಪ ವಡಗೇರಿ, ಡಿಡಿಪಿಯು ನಾಗರಾಜ ಎನ್., ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ನಿರೂಪಣಾಧಿಕಾರಿ ಅಣ್ಣಪ್ಪ ಹೆಗಡೆ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts